ಮತ್ತೆ ಮೋದಿ ಪ್ರಧಾನಿಯಾಗಲು ಬಿಜೆಪಿ ಗೆಲ್ಲಿಸಿ: ಗಾಯತ್ರಿ

KannadaprabhaNewsNetwork |  
Published : Apr 02, 2024, 01:08 AM IST
1ಕೆಡಿವಿಜಿ6, 7-ದಾವಣಗೆರೆ ತಾ. ಮಾಯಕೊಂಡ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮುಖಂಡರು, ಕಾರ್ಯಕರ್ತರೊಂದಿಗೆ ತೆರಳಿ ಮತಯಾಚಿಸಿದರು. ..............1ಕೆಡಿವಿಜಿ8-ದಾವಣಗೆರೆ ತಾ. ಮಾಯಕೊಂಡ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಲಂಬಾಣಿ ಸಮುದಾಯದ ಮಹಿಳೆಯರ ಜೊತೆಗೆ ಪುತ್ರಿ ಜಿ.ಎಸ್‌.ಅಶ್ವಿನಿ ಜೊತೆಗೂಡಿ ಹೆಜ್ಜೆ ಹಾಕಿದರು. | Kannada Prabha

ಸಾರಾಂಶ

ನರೇಂದ್ರ ಮೋದಿ ಪ್ರಧಾನಿಯಾದ ಹತ್ತು ವರ್ಷಗಳ ಅವಧಿಯಲ್ಲೇ ಭಾರತ ವಿಶ್ವಗುರು ಆಗುವತ್ತ ಸಾಗುತ್ತಿದೆ. ದೇಶವನ್ನು ಮತ್ತಷ್ಟು ಬಲಿಷ್ಠಗೊಳಿಸಲು, ಜಾಗತಿಕ ಶಕ್ತಿಯಾಗಿ ಹೊರಹೊಮ್ಮಲು ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ತಮಗೆ ಮತ ನೀಡುವ ಮೂಲಕ ಭಾರೀ ಮತಗಳ ಅಂತರದಿಂದ ಗೆಲ್ಲಿಸುವಂತೆ ಗಾಯತ್ರಿ ಸಿದ್ದೇಶ್ವರ ದಾವಣಗೆರೆಯಲ್ಲಿ ಮನವಿ ಮಾಡಿದ್ದಾರೆ.

- ಕಾಂಗ್ರೆಸ್ ಅಧಿಕಾರದಲ್ಲಿ ಇದ್ದಾಗಲೆಲ್ಲಾ ಭ್ರಷ್ಟಾಚಾರ: ಬಿಜೆಪಿ ಅಭ್ಯರ್ಥಿ ಆರೋಪ - - -

ಕನ್ನಡಪ್ರಭ ವಾರ್ತೆ, ದಾವಣಗೆರೆ

ನರೇಂದ್ರ ಮೋದಿ ಪ್ರಧಾನಿಯಾದ ಹತ್ತು ವರ್ಷಗಳ ಅವಧಿಯಲ್ಲೇ ಭಾರತ ವಿಶ್ವಗುರು ಆಗುವತ್ತ ಸಾಗುತ್ತಿದೆ. ದೇಶವನ್ನು ಮತ್ತಷ್ಟು ಬಲಿಷ್ಠಗೊಳಿಸಲು, ಜಾಗತಿಕ ಶಕ್ತಿಯಾಗಿ ಹೊರಹೊಮ್ಮಲು ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾದ ತಮಗೆ ಮತ ನೀಡುವ ಮೂಲಕ ಭಾರೀ ಮತಗಳ ಅಂತರದಿಂದ ಗೆಲ್ಲಿಸುವಂತೆ ಗಾಯತ್ರಿ ಸಿದ್ದೇಶ್ವರ ಮನವಿ ಮಾಡಿದರು.

ತಾಲೂಕಿನ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಅಣಜಿ, ಆನಗೋಡು ಜಿಪಂ ಕ್ಷೇತ್ರಗಳ ಗ್ರಾಮಗಳಲ್ಲಿ ಮತಯಾಚಿಸಿ ಮಾತನಾಡಿದ ಅವರು, ಕಳೆದ ಆರೂವರೆ ದಶಕದಲ್ಲಿ ಆಗದ ಅಭಿವೃದ್ಧಿ ಕಾರ್ಯಗಳನ್ನು ಕೇವಲ 1 ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧಿಸಿ ತೋರಿಸಿದ್ದಾರೆ ಎಂದರು.

ಕಾಂಗ್ರೆಸ್ ಕ್ಷವು ಅಧಿಕಾರದಲ್ಲಿ ಇದ್ದಾಗಲೆಲ್ಲಾ ಬರೀ ಭ್ರಷ್ಟಾಚಾರವನ್ನೇ ಮಾಡಿದೆ. ಇದರ ಪರಿಣಾಮ ದೇಶ ಅಭಿವೃದ್ಧಿ ಹೊಂದಿರಲಿಲ್ಲ. ಆದರೆ, ಮೋದಿ ಅವರು ದೇಶದ ಚುಕ್ಕಾಣಿ ಹಿಡಿಯುತ್ತಲೇ ಇಡೀ ಜಗತ್ತು ಭಾರತದತ್ತ ಅಚ್ಚರಿ, ಕುತೂಹಲದಿಂದ ನೋಡುವಂತಾಗಿದೆ. ಭ್ರಷ್ಟಾಚಾರರಹಿತ, ಪಾರದರ್ಶಕ ಆಡಳಿತ ನೀಡುವ ಮೂಲಕ ದೇಶದ ಸಮಗ್ರ ಅಭಿವೃದ್ಧಿಗೆ ಮೋದಿ ಸರ್ಕಾರ ಶ್ರಮಿಸುತ್ತಿದೆ ಎಂದು ತಿಳಿಸಿದರು.

ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪ್ರತಿ ಗ್ರಾಮಕ್ಕೆ ಮತಯಾಚಿಸಲು ಹೋದಾಗಲೂ ದೇವಸ್ಥಾನಗಳಿಗೆ ತೆರಳಿ, ದೇವರ ದರ್ಶನ ಪಡೆದರು. ಪಕ್ಷದ ಹಿರಿಯ ಮುಖಂಡರಾದ ಅಣಬೇರು ಜೀವನಮೂರ್ತಿ, ರಾಜ್ಯ ಯುವ ಮೋರ್ಚಾ ಉಪಾಧ್ಯಕ್ಷ ಮಾಯಕೊಂಡ ಜಿ.ಎಸ್.ಶ್ಯಾಮ್‌, ಬಿ.ಟಿ.ಸಿದ್ದಪ್ಪ, ಜಿ.ಎಸ್.ಅನಿತಕುಮಾರ, ಜಿ.ಎಸ್.ಅಶ್ವಿನಿ, ಎಲ್.ರಾಜೀವ್‌, ಆಲೂರು ನಿಂಗರಾಜ, ಮಂಡಲ ಅಧ್ಯಕ್ಷ ದೇವೇಂದ್ರಪ್ಪ, ಹನುಮಂತ ನಾಯ್ಕ, ಗ್ಯಾರಹಳ್ಳಿ ಶಿವಕುಮಾರ, ಎಚ್.ಸಿ.ಜಯಮ್ಮ, ಅನಿಲಕುಮಾರ ನಾಯ್ಕ, ಕವಿತಾ ಜಯಣ್ಣ ಇತರರು ಇದ್ದರು.

ಎಲ್ಲೆಲ್ಲಿ ಮತಯಾಚನೆ?:

ದಾವಣಗೆರೆ ತಾ. ಕಿತ್ತೂರು, ಕುರುಡಿ, ಐಗೂರು, ಬೋರಗೊಂಡನಹಳ್ಳಿ, ಗಾಂಧಿ ನಗರ, ಹುಲಿಕಟ್ಟೆ, ಕೆರೆಯಾಗಳಹಳ್ಳಿ, ಗಿರಿಯಾಪುರ, ಗೊಲ್ಲರಹಳ್ಳಿ, ಅಣಜಿ, ಮೆಳ್ಳೇಕಟ್ಟೆ, ಆಲೂರು ಹಟ್ಟಿ, ಲಿಂಗಾಪುರ, ಆಲೂರು, ಬಸವನಾಳು, ಬಸನವಾಳು ಗೊಲ್ಲರಹಟ್ಟಿ, ಶ್ರೀಕೃಷ್ಣ ನಗರ (ಐಗೂರು ಗೊಲ್ಲರಹಟ್ಟಿ), ಅಗಸನಕಟ್ಟೆ, ತುಂಬಿಗೆರೆ, ರುದ್ರನಕಟ್ಟೆ, ಶಾಸ್ತ್ರೀಹಳ್ಳಿ, ಕಂದನಕೋವಿ, ಮುಡೇನಹಳ್ಳಿ, ಜಮ್ಮಾಪುರ, ಗುಡಾಳ್, ಮ್ಯಾಸರಹಳ್ಳಿ, ಕೆಂಚಮ್ಮನಹಳ್ಳಿ, ಗುಮ್ಮನೂರು, ಕದರಪ್ಪನಹಟ್ಟಿ, ಹೊಸಳ್ಳಿ, ಪವಾಡ ರಂಗವ್ವನಹಳ್ಳಿ, ಶಿವಪುರ ಗ್ರಾಮಗಳಲ್ಲಿ ಗಾಯತ್ರಿ ಸಿದ್ದೇಶ್ವರ ಮತಯಾಚಿಸಿದರು.

- - - ಟಾಪ್‌ ಕೋಟ್‌ ಕಳೆದ ಚುನಾವಣೆಯಲ್ಲಿ ಮೋದಿ ಅವರು ದಾವಣಗೆರೆಗೆ ಬಂದಾಗ ನೀವು ಇಲ್ಲಿಂದ ಕಮಲದ ಹೂವು ಕಳಿಸಿ, ನಾನು ಅದರಲ್ಲಿ ಲಕ್ಷ್ಮೀ ಕಳಿಸುತ್ತೇನೆ ಎಂದಿದ್ದರು. ಅದರಂತೆ ಮೋದಿ ನುಡಿದಂತೆ ದಾವಣಗೆರೆ ಸ್ಮಾರ್ಟ್ ಸಿಟಿ ಸೇರಿದಂತೆ ಅನೇಕ ಯೋಜನೆಗಳಿಗೆ ಅನುದಾನದ ರೂಪದಲ್ಲಿ ಲಕ್ಷ್ಮೀಯನ್ನು ಕಳಿಸಿ, ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಸ್ಪಂದಿಸಿದ್ದಾರೆ

- ಗಾಯತ್ರಿ ಸಿದ್ದೇಶ್ವರ, ಬಿಜೆಪಿ ಅಭ್ಯರ್ಥಿ - - - -1ಕೆಡಿವಿಜಿ6, 7:

ದಾವಣಗೆರೆ ತಾಲೂಕು ಮಾಯಕೊಂಡ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಮುಖಂಡರು, ಕಾರ್ಯಕರ್ತರೊಂದಿಗೆ ತೆರಳಿ ಮತಯಾಚಿಸಿದರು. -1ಕೆಡಿವಿಜಿ8:

ದಾವಣಗೆರೆ ತಾಲೂಕು ಮಾಯಕೊಂಡ ವಿಧಾನಸಭಾ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರಚಾರದ ವೇಳೆ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಪುತ್ರಿ ಜಿ.ಎಸ್‌. ಅಶ್ವಿನಿ ಲಂಬಾಣಿ ಸಮುದಾಯದ ಮಹಿಳೆಯರ ಜೊತೆಗೂಡಿ ಹೆಜ್ಜೆ ಹಾಕಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಲವು ಜಿಲ್ಲೆಗಳಲ್ಲಿ ಶೀತಗಾಳಿ ತಾಪಮಾನ 5-7 ಡಿಗ್ರಿ ಇಳಿಕೆ
‘ಬಾಡಿಗೆ ತಾಯ್ತನ’ದಿಂದ ಮಗು : ವೃದ್ಧ ದಂಪತಿಯಿಂದ ಕೋರ್ಟ್‌ ಮೊರೆ