ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಸಭೆಯಲ್ಲಿ ಈಗಾಗಲೇ ಕಾಂಗ್ರೆಸ್ ಸದಸ್ಯರೇ ಕ್ರಾಸ್ ವೋಟ್‌ಮಾಡಿ ಕಾಂಗ್ರೆಸ್ ಸಾಕು ಎಂಬ ಮನಸ್ಥಿತಿಗೆ ಬಂದಿದ್ದಾರೆ. ದಾವಣಗೆರೆ ಮತ್ತು ಬಾಗಲಕೋಟೆ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸುವಾಗಲೇ ಸೇರಿದ ಜನಸ್ತೋಮವೇ ಶುಭ ಸೂಚನೆ ನೀಡಿದೆ. ನಿರಾಯಾಸವಾಗಿ ಎರಡೂ ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲುತ್ತದೆ. ಒಂದು ಕಡೆ ಕುಬೇರ ಸ್ಪರ್ಧಿಸಿದ್ದರೆ ಅವರಿಗೆ ಎದುರಾಳಿಯಾಗಿ ಬಿಜೆಪಿಯ ಸಾಮಾನ್ಯ ಕಾರ್ಯಕರ್ತ ನಿಂತಿದ್ದಾನೆ. ಕಾಂಗ್ರೆಸ್‌ನ ಗ್ಯಾರೆಂಟಿ ಯೋಜನೆಯ ಬಗ್ಗೆ ಜನ ಈಗಾಗಲೇ ಭ್ರಮನಿರಸನಗೊಂಡಿದ್ದಾರೆ. ಅಭಿವೃದ್ಧಿ ಶೂನ್ಯ ಸರ್ಕಾರದ ವಿರುದ್ಧ ಜನ ಮತ ಚಲಾಯಿಸುತ್ತಾರೆ ಎಂದರು.
ಗೃಹಬಳಕೆ ಮತ್ತು ವಾಣಿಜ್ಯ ಬಳಕೆ ಎಲ್‌ಪಿಜಿ ಸರಬರಾಜಿಗೆ ಸೂಕ್ತ ಕ್ರಮ ಕೈಗೊಳ್ಳಲಾಗಿದೆ. ಯುದ್ಧ ಪ್ರಾರಂಭವಾಗಿದ್ದರೂ ಭಾರತ ದೇಶದ ಮುನ್ನೆಚ್ಚರಿಕೆಯಿಂದ ಮೈಲುಗಟ್ಟಲೆ ಕ್ಯೂನಿಂತು ಪಡೆಯುವ ಪರಿಸ್ಥಿತಿ ರಾಜ್ಯದಲ್ಲಿ ಬಂದಿಲ್ಲ. ವಾಣಿಜ್ಯ ಬಳಕೆ ಸಿಲಿಂಡರ್ ಸರಬರಾಜು ಕೂಡ ಇಂದಿನಿಂದ ಶೇ. 20 ಏರಿಕೆ ಮಾಡಿದ್ದಾರೆ. ಕೇಂದ್ರ ಸರ್ಕಾರದ ವಿರುದ್ದ ಸುಳ್ಳು ಸೃಷ್ಟಿಸಿ ಗೊಂದಲ ಮೂಡಿಸುವ ಪ್ರಕ್ರಿಯೆ ಯಥಾಪ್ರಕಾರವಾಗಿ ಮುಂದುವರೆದಿದೆ. ಆದರೆ ಜನರಿಗೆ ಎಲ್ಲವೂ ಅರಿವಿದೆ. ಪ್ರಧಾನಮಂತ್ರಿಗಳೇ ಸೂಕ್ತ ಎಚ್ಚರಿಕೆ ತೆಗೆದುಕೊಂಡು ದೇಶದ ಜನರಿಗೆ ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದರು.ಇವಿಎಂ ಬೇಡ ಮತಪತ್ರ ಬೇಕು ಎನ್ನುವ ಕಾಂಗ್ರೆಸ್ ದ್ವಂದ್ವ ನಿಲುವು ಜಗಜ್ಜಾಹೀರವಾಗಿದೆ. ಒಂದೆಡೆ ಗ್ರೇಟರ್ ಬೆಂಗಳೂರು ಅಂತಾರೆ. ಇನ್ನೊಂದೆಡೆ ಬ್ಯಾಲೇಟ್ ಪೇಪರ್ ಬೇಕು ಎನ್ನುತ್ತಾರೆ. ಗೆದ್ದಾಗ ಒಂದು, ಸೋತಾಗ ಒಂದು ಮನಸ್ಥಿತಿ ಕಾಂಗ್ರೆಸ್‌ನದ್ದು ಎಂದರು.
ಇಂಡಿಗೋ ಕಂಪನಿ ತನ್ನ ವಿಮಾನಯಾನವನ್ನು ಶಿವಮೊಗ್ಗದಲ್ಲಿ ಮೇ.1 ರಿಂದ ನಿಲ್ಲಿಸಲಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಕಂಪನಿಯ ಪ್ರಮುಖರೊಂದಿಗೆ ಮಾತುಕತೆ ನಡೆದಿದೆ. ಸಕಾರಾತ್ಮಕವಾಗಿ ಅವರು ಸ್ಪಂದಿಸಿದ್ದು, ಮೇ ನಿಂದ ಇಂಡಿಗೋ ಯಾನ ನಿಲ್ಲಿಸದಂತೆ ನಾನು ಕೂಡ ಹಲವು ಭಾರಿ ಮನವಿ ಮಾಡಿದ್ದೇನೆ ಎಂದು ಹೇಳಿದರು.
ವಿಮಾನ ನಿಲ್ದಾಣದಲ್ಲಿ ದುಬಾರಿ ಪಾರ್ಕಿಂಗ್ ಶುಲ್ಕದ ಬಗ್ಗೆಯೂ ಈಗಾಗಲೇ ಆಟೋ ಮತ್ತು ಟ್ಯಾಕ್ಸಿ ಚಾಲಕರ ಜೊತೆ ಮಾತನಾಡಿದ್ದೇನೆ. ಜಿಲ್ಲಾಧಿಕಾರಿಗಳ ಗಮನಕ್ಕೂ ತಂದೂ ಸಭೆ ನಡೆಸಿದ್ದೇನೆ. ಅದು ಕೂಡ ಬಗೆಹರಿಯಲಿದೆ ಎಂದರು.