ಎರಡೂ ಕ್ಷೇತ್ರದಲ್ಲಿ ಬಿಜೆಪಿಗೆ ಜಯ: ಬಿಎಸ್‌ವೈ

KannadaprabhaNewsNetwork |  
Published : Apr 19, 2026, 01:15 AM IST
ಸ | Kannada Prabha

ಸಾರಾಂಶ

ಚಿಕ್ಕಮಗಳೂರುರಾಜ್ಯದ ದಾವಣಗೆರೆ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಅಂತರದಿಂದ ಜಯಭೇರಿ ಬಾರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ರಾಜ್ಯದ ದಾವಣಗೆರೆ ಮತ್ತು ಬಾಗಲಕೋಟೆ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಅಂತರದಿಂದ ಜಯಭೇರಿ ಬಾರಿಸಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚಿಕ್ಕಮಗಳೂರಿನ ಮಾಜಿ ಸಚಿವ ಸಿ.ಟಿ.ರವಿ ಅವರ ನಿವಾಸಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಪಚುನಾವಣೆಯ ಎರಡೂ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ. ಅದನ್ನು ತಡೆಯುವುದಕ್ಕೆ ಯಾರಿಂದಲೂ ಸಾಧ್ಯವಿಲ್ಲ ಎಂದು ಹೇಳಿದರು.

ಮಹಿಳಾ ಮೀಸಲಾತಿ ಮಸೂದೆ ವಿಚಾರವಾಗಿ ವಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಮಹಿಳಾ ಮೀಸಲಾತಿಯನ್ನು ವಿರೋಧಿಸುವುದು ಸಮಾನತೆ ವಿರೋಧಿಗಳು ಎಂದರು.

ಮಹಿಳಾ ಮೀಸಲಾತಿ ಬಗ್ಗೆ ಬಹಳ ವರ್ಷಗಳಿಂದ ಮಾತನಾಡಿಕೊಂಡು ಬರುತ್ತಿದ್ದೇವೆ. ಇನ್ನು ಚರ್ಚೆ ಆಗಬೇಕು ಅಂದರೆ ಅದು ಸ್ಪಷ್ಟವಾಗಿ ವಿಳಂಬ ಮಾಡುವ ನೀತಿಯಾಗಿದೆ. ಮಹಿಳಾ ಮೀಸಲಾತಿ ಜಾರಿ ರಾಜಕೀಯ ಲಾಭಕ್ಕಾಗಿ ಅನ್ನೋದು ತಪ್ಪು. ಒಳ್ಳೆಯ ನೀತಿ ಯಾವಾಗ ಬಂದರೂ ಒಳ್ಳೆಯದಾಗಿದೆ.

ಬಸವಣ್ಣನವರು ಸಮಾಜದಲ್ಲಿ ಸಮಾನತೆ, ನ್ಯಾಯ ಮತ್ತು ಅವಕಾಶ ಬಗ್ಗೆ ಹೇಳಿದ್ದಾರೆ. ಅವರ ಕಾಲದಲ್ಲಿ ಹೆಣ್ಣು-ಗಂಡು ಭೇದವಿಲ್ಲದೆ ಸಮಾನ ಹಕ್ಕಿಗಾಗಿ ಹೋರಾಡಿದ್ದರು. ಮಹಿಳಾ ಮೀಸಲಾತಿ ವಿರೋಧಿಸುವುದು ಸಮಾನತೆ ತತ್ವಕ್ಕೆ ವಿರೋಧವಾಗಿದೆ. ವಿರೋಧ ಪಕ್ಷದ ಈ ನೀತಿ ಖಂಡಿಸುತ್ತೇನೆ ಎಂದು ಹೇಳಿದರು.

ಬಸವಣ್ಣನವರ ಅನುಭವ ಮಂಟಪದಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇತ್ತು. ಅಕ್ಕಮಹಾದೇವಿಯಂತಹವರು ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವುದಕ್ಕೆ ಅವಕಾಶ ನೀಡಲಾಗಿತ್ತು. ಅದೇ ತತ್ವ ಈಗ ಮುಂದುವರಿಯಬೇಕೆಂದರೆ, ಮಹಿಳೆಯರಿಗೆ ರಾಜಕೀಯ ಪ್ರವೇಶ ಅವಕಾಶ ಕೊಡೋದು ಅನಿವಾರ್ಯ ಎಂದು ಪ್ರತಿಪಾದಿಸಿದರು.

-- ಬಾಕ್ಸ್‌ --

ವಿದ್ಯುತ್ ದರ ಏರಿಕೆಗೆ ಬಿಎಸ್‌ವೈ ಆಕ್ರೋಶ

ರಾಜ್ಯದಲ್ಲಿ ಭಾರೀ ಪ್ರಮಾಣದಲ್ಲಿ ವಿದ್ಯುತ್‌ ದರ ಏರಿಕೆ ಮಾಡಿರುವುದು ಸರಿಯಲ್ಲ. ಸರಿಯಾಗಿ ಆಡಳಿತ ಮತ್ತು ಹಣಕಾಸಿ ವ್ಯವಹಾರ ಸರಿಯಾಗಿ ನಿಬಾಹಿಸುವುದಕ್ಕೆ ಸಾಧ್ಯವಾಗದೇ ದರ ಏರಿಕೆ ಮಾಡಲಾಗುತ್ತಿದೆ. ಜನ ಸಾಮಾನ್ಯರು ನೆಮ್ಮದಿ ಯಿಂದ ಗೌರವದಿಂದ ಬದುಕುವುದಕ್ಕೆ ಅವಕಾಶ ಮಾಡಿಕೊಡಬೇಕು. ತಕ್ಷಣ ವಿದ್ಯುತ್‌ ದರ ಏರಿಕೆ ಹಿಂಪಡೆಯಬೇಕು ಎಂದು ಬಿಎಸ್‌ ಯಡಿಯೂರಪ್ಪ ಒತ್ತಾಯಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಹಿಳೆಯರ ಅವಕಾಶ ಕಸಿದುಕೊಂಡ ಕಾಂಗ್ರೆಸ್
ರಸ್ತೆ ಅಪಘಾತಗಳ ಸ್ಥಳ ಗುರುತಿಸಲು ಸೂಚನೆ