ಉಡುಪಿ- ಚಿಕ್ಕಮಗಳೂರು ಕ್ಷೇತ್ರದಲ್ಲಿ ಬಿಜೆಪಿ ಗೆಲುವು: ಜಿಲ್ಲೆಯಾದ್ಯಂತ ಸಂಭ್ರಮಾಚರಣೆ

KannadaprabhaNewsNetwork |  
Published : Jun 05, 2024, 12:30 AM IST
ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು. | Kannada Prabha

ಸಾರಾಂಶ

ಚಿಕ್ಕಮಗಳೂರು, ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ಜಿಲ್ಲೆಯಾದ್ಯಂತ ಸಂಭ್ರಮಿಸಿದರು.

ಬಿಜೆಪಿ ಮುಖಂಡರು-ಕಾರ್ಯಕರ್ತರ ವಿಜಯೋತ್ಸವ

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್‌ ಪೂಜಾರಿ ಗೆಲುವು ಸಾಧಿಸಿದ ಹಿನ್ನಲೆಯಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಮಂಗಳವಾರ ಜಿಲ್ಲೆಯಾದ್ಯಂತ ಸಂಭ್ರಮಿಸಿದರು.

ತರೀಕೆರೆ ಹೊರತುಪಡಿಸಿ ಜಿಲ್ಲೆಯ ಇನ್ನುಳಿದ ಎಲ್ಲಾ ತಾಲೂಕುಗಳಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ವಿಜಯೋತ್ಸವ ಆಚರಿಸಿದರು. ಉಡುಪಿ ಜಿಲ್ಲಾ ಕೇಂದ್ರದಲ್ಲಿ ಮತ ಎಣಿಕೆ ನಡೆಯಿತು. ಆರಂಭದಿಂದಲೇ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ್ ಪೂಜಾರಿ ಮುನ್ನಡೆ ಸಾಧಿಸಿದರು. ಮಧ್ಯಾಹ್ನದ ವೇಳೆಗೆ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ಪಕ್ಷದ ಕಚೇರಿ ಪಾಂಚಜನ್ಯದಿಂದ ಹೊರಟು ಆಜಾದ್ ಪಾರ್ಕ್‌ ವೃತ್ತದಲ್ಲಿ ಪಟಾಕಿ ಸಿಡಿಸಿ, ವಾಹನಗಳಲ್ಲಿ ಬಸ್‌ನಿಲ್ದಾಣದಲ್ಲಿ ಸಾಗಿ ಹನುಮಂತಪ್ಪ ವೃತ್ತದಲ್ಲೂ ಪಟಾಕಿ ಸಿಡಿಸಿ ಸಂಭ್ರಮಿಸಿದರು.

ಪ್ರಧಾನಿ ನರೇಂದ್ರ ಮೋದಿಯವರ ಕಟೌಟ್ ಮತ್ತು ಮಾಜಿ ಸಚಿವ ಸಿ.ಟಿ.ರವಿ ಭಾವಚಿತ್ರ ಪ್ರದರ್ಶಿಸುವ ಮೂಲಕ ಹರ್ಷ ವ್ಯಕ್ತಪಡಿಸಿದರು.ಪ್ರಧಾನಿ ನರೇಂದ್ರಮೋದಿ, ಮಾಜಿ ಸಚಿವ ಸಿ.ಟಿ.ರವಿ, ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ರುವ ಕೋಟಾ ಶ್ರೀನಿವಾಸ ಪೂಜಾರಿ ಪರವಾಗಿ ಜಯಕಾರ ಹಾಕಲಾಯಿತು. ದೇಶದಲ್ಲಿ ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆಂದು ಮುಖಂಡರು ಮತ್ತು ಕಾರ್ಯಕರ್ತರು ಹೇಳಿದರು.

ಈ ಸಂದರ್ಭದಲ್ಲಿ ಮಧುಕುಮಾರ್‌ ರಾಜ್‌ ಅರಸ್‌, ಬಿಜೆಪಿ ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ನಗರ ಅಧ್ಯಕ್ಷ ಪುಷ್ಪಾರಾಜ್, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಸಂತೋಷ್‌ ಕೋಟ್ಯಾನ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಜಸಂತ ಅನಿಲ್‌ಕುಮಾರ್, ಶ್ಯಾಮ್, ಶಶಿ ಆಲ್ದೂರು, ಕಾರ್ಯಕರ್ತರು ಇದ್ದರು.ಶೃಂಗೇರಿಯ ಕಿಗ್ಗಾ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿದರು. ಮೂಡಿಗೆರೆ ಲಯನ್ಸ್‌ ವೃತ್ತ, ಕೊಪ್ಪದ ಬಸ್‌ ನಿಲ್ದಾಣ, ಕಡೂರಿನ ಕೆಎಲ್‌ವಿ ವೃತ್ತದಲ್ಲಿ ಪಟಾಕಿ ಸಿಡಿಸಲಾಯಿತು. ಎನ್‌.ಆರ್‌.ಪುರ ಪಟ್ಟಣದ ಅಂಬೇಡ್ಕರ್‌ ವೃತ್ತದಲ್ಲಿ ಪಟಾಕಿ ಸಿಡಿಸಲಾಯಿತು. ಈ ಸಂಭ್ರಮಾಚರಣೆಯಲ್ಲಿ ಮಾಜಿ ಸಚಿವ ಡಿ.ಎನ್‌. ಜೀವರಾಜ್ ಹಾಗೂ ಕಾರ್ಯಕರ್ತರು ಭಾಗಿಯಾಗಿದ್ದರು.ಪೋಟೋ ಫೈಲ್‌ ನೇಮ್‌ 4 ಕೆಸಿಕೆಎಂ 4ಚಿಕ್ಕಮಗಳೂರಿನ ಹನುಮಂತಪ್ಪ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.

PREV

Recommended Stories

ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ
ಕಡಿಮೆ ಗುಣದ ಔಷಧಿ ಎರಡೇ ದಿನಕ್ಕೇ ಮಾರುಕಟ್ಟೆಯಿಂದ ವಾಪಸ್‌: ಸಚಿವ