ಕಾಂಗ್ರೆಸ್‌ ವಿರುದ್ಧ ಬಿಜೆಪಿ ಮಹಿಳಾ ಘಟಕ ಪ್ರತಿಭಟನೆ

KannadaprabhaNewsNetwork |  
Published : Apr 23, 2026, 01:45 AM IST
22ಎಚ್ಎಸ್ಎನ್8 : ಬಿಜೆಪಿ ಮಹಿಳಾ ಘಟಕದಿಂದ ಶಾಸಕ ಹಾಗೂ ಹೆಚ್.ಕೆ.ಸುರೇಶ್ ನೇತೃತ್ವದಲ್ಲಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ಮಹಿಳೆಯರು ಲೋಕಸಭೆ ಹಾಗೂ ವಿಧಾನಸಭೆ ಕೂಡ ಚುನಾಯುತರಾಗಿ ಜನಸೇವೆ ಮಾಡಬೇಕು ಎಂಬ ಹಂಬಲದಿಂದ ಲೋಕಸಭೆ ಮಹಿಳಾ ಮೀಸಲಾತಿ ಅನುಷ್ಠಾನಕ್ಕೆ ವಿಶೇಷ ಅಧಿವೇಶನ ಕರೆಯಲಾಗಿತ್ತು. ಕಾಂಗ್ರೆಸ್ ರಾಜಕೀಯ ದುರುದ್ದೇಶದಿಂದ ಮಹಿಳಾ ಮೀಸಲಾತಿಗೆ ವಿರೋಧ ವ್ಯಕ್ತ ಪಡಿಸಿದ್ದಾರೆ. ದೇಶದ ಮಹಿಳೆಯರ ಪರವಾಗಿ ಹಕ್ಕುಗಳನ್ನು ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಂಡಿಸಬಾರದು ಎಂಬ ಧೋರಣೆಯನ್ನು ಬದಿಗೊತ್ತಿ ಕಾಂಗ್ರೆಸ್ ತನ್ನ ತಪ್ಪುನ್ನು ತಿದ್ದುಕೊಂಡು ದೇಶದ ಮಹಿಳೆಯರಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಕನ್ನಡಪ್ರಭ ವಾರ್ತೆ ಬೇಲೂರು ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ‌ಮುಂದಾದ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಮಸೂದೆಯನ್ನು ವಿರೋಧಿಸಿ ಸ್ತ್ರೀ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಮೂಲಕ ಮಹಿಳೆಯರ ಶಾಪದಿಂದ ಮುಂದಿನ ದಿನದಲ್ಲಿ ಕಾಂಗ್ರೆಸ್ ಸರ್ವ ಪತನಕ್ಕೆ ಗುರಿಯಾಗಲಿದೆ ಎಂದು ಶಾಸಕ ಎಚ್. ಕೆ. ಸುರೇಶ್ ಕಿಡಿಕಾರಿದರು.ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಮಹಿಳಾ ಘಟಕದಿಂದ ಹಮ್ಮಿಕೊಂಡ ಪ್ರತಿಭಟನೆಯಲ್ಲಿ ಮಾತನಾಡಿ ಮಹಿಳೆಯರು ಇತ್ತೀಚಿನ ದಿನಗಳಲ್ಲಿ ಎಲ್ಲಾ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆ ಮಾಡಿದ್ದಾರೆ. ಮಹಿಳೆಯರು ಲೋಕಸಭೆ ಹಾಗೂ ವಿಧಾನಸಭೆ ಕೂಡ ಚುನಾಯುತರಾಗಿ ಜನಸೇವೆ ಮಾಡಬೇಕು ಎಂಬ ಹಂಬಲದಿಂದ ಲೋಕಸಭೆ ಮಹಿಳಾ ಮೀಸಲಾತಿ ಅನುಷ್ಠಾನಕ್ಕೆ ವಿಶೇಷ ಅಧಿವೇಶನ ಕರೆಯಲಾಗಿತ್ತು. ಕಾಂಗ್ರೆಸ್ ರಾಜಕೀಯ ದುರುದ್ದೇಶದಿಂದ ಮಹಿಳಾ ಮೀಸಲಾತಿಗೆ ವಿರೋಧ ವ್ಯಕ್ತ ಪಡಿಸಿದ್ದಾರೆ. ದೇಶದ ಮಹಿಳೆಯರ ಪರವಾಗಿ ಹಕ್ಕುಗಳನ್ನು ಲೋಕಸಭೆ ಮತ್ತು ವಿಧಾನಸಭೆಯಲ್ಲಿ ಮಂಡಿಸಬಾರದು ಎಂಬ ಧೋರಣೆಯನ್ನು ಬದಿಗೊತ್ತಿ ಕಾಂಗ್ರೆಸ್ ತನ್ನ ತಪ್ಪುನ್ನು ತಿದ್ದುಕೊಂಡು ದೇಶದ ಮಹಿಳೆಯರಿಗೆ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಮುಖಂಡರಾದ ಬಿ.ಕೆ.ಚಂದ್ರಕಲಾ ಮಾತನಾಡಿ, 12ನೇ ಶತಮಾನದಲ್ಲಿ ವಿಶ್ವಗುರು ಬಸವಣ್ಣನವರು ಹಾಗೂ ಶರಣರು ಮಹಿಳೆಯರಿಗೆ ಸಮಾನ ಅವಕಾಶ ಕಲ್ಪಿಸಬೇಕು ಎಂಬ ನಿಟ್ಟಿನಲ್ಲಿ ಅನುಭವ ಮಂಟಪದಲ್ಲಿ ಅವರ ವಚನ ರಚನೆಗೆ ಮತ್ತು ಸಮಾನತೆ ನೀಡಿದ ನಿದರ್ಶನಗಳಿಗೆ. ಡಾ. ಬಿ. ಆರ್‌ ಅಂಬೇಡ್ಕರ್ ಅವರು ಕೂಡ ಮಹಿಳೆಯರಿಗೆ ಹೆಚ್ಚಿನ ಸಮಾನತೆಯನ್ನು ನೀಡಿದ ಕಾಲಘಟ್ಟದಲ್ಲಿ ಕಾಂಗ್ರೆಸ್ ತನ್ನ ಸ್ವಾರ್ಥಕ್ಕಾಗಿ ಮಹಿಳಾ ಮೀಸಲಾತಿಯಲ್ಲಿ ವಿರೋಧ ವ್ಯಕ್ತಪಡಿಸಿರುವುದು ನಾಚಿಕೆಗೇಡಿತನ. ಮುಂದಿನ ದಿನದಲ್ಲಿ ಯಾವ ಕಾರಣಕ್ಕೂ ಮೀಸಲಾತಿಯನ್ನು ಕೈ ಬಿಡದೆ ಲೋಕಸಭೆಯಲ್ಲಿ ಅಂಗೀಕರಿಸಬೇಕು ಎಂದು ಆಗ್ರಹಿಸಿದರು.ಬಿಜೆಪಿ ಮಹಿಳಾ ತಾಲೂಕು ಅಧ್ಯಕ್ಷ ರೇಖಾ ಬಸವರಾಜು ಮಾತನಾಡಿ ಮಹಿಳೆ ಎಲ್ಲಾ ಕ್ಷೇತ್ರದಲ್ಲೂ ಕೂಡ ತನ್ನದೆಯಾದ ಛಾಪು ಮೂಡಿಸಿದ್ದಾಳೆ. ನರೇಂದ್ರ ಮೋದಿಯವರು ಸ್ತ್ರೀ ಸಮಾನತೆ ನೀಡಬೇಕು ಹಾಗೂ ಮಹಿಳಾ ಸಬಲೀಕರಣಕ್ಕೆ ಒತ್ತು ನೀಡಬೇಕೆಂದು ಮಹಿಳಾ ಮೀಸಲಾತಿ ಜಾರಿಗೆ ಮುಂದಾಗಿರುವುದು ಸ್ವಾಗತ, ಕಾಂಗ್ರೆಸ್ ತನ್ನ ನೀಚ ಬುದ್ಧಿಯನ್ನು ಬಿಟ್ಟು ಇಂತಹ ಮಸೂದೆಗೆ ಬೆಂಬಲ ನೀಡಬೇಕೆಂದು ಅಗ್ರಹಿಸಿದರು.ಈ ಸಂದರ್ಭದಲ್ಲಿ ತಾಲ್ಲೂಕು ಬಿಜೆಪಿ ಅಧ್ಯಕ್ಷ ಸಂಜು ಕೌರಿ, ಮುಖಂಡರಾದ ಸಿ.ಎಸ್. ಪ್ರಕಾಶ, ಅಡಗೂರು ಬಸವರಾಜ್, ಮೀನಾಕ್ಷಿ, ಲಕ್ಷ್ಮಿ, ಪ್ರಕಾಶ, ರಾಘವೇಂದ್ರ, ಮೋಹನ್ ಕುಮಾರ್‌, ರಮೇಶ್ ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಕ್ಕಳಲ್ಲಿ ಕಾನೂನಿನ ಅರಿವು ಮೂಡಿಸುವ ಅವಶ್ಯಕತೆ ಇದೆ
ಗುಂಡ್ಲುಪೇಟೆಯ ಕಣಿಯರ ಬೀದೀಲಿ ರಸ್ತೆ ಮೇಲೆ ಕೊಳಚೆ ನೀರು ಹರಿವು!