ಬಿಜೆಪಿ ಕಾರ್ಯಕರ್ತರಿಂದ ಸಿಂದೂರ ಸಂಭ್ರಮಾಚರಣೆ

KannadaprabhaNewsNetwork |  
Published : May 09, 2025, 12:34 AM IST
ಆಫರೇಷನ್‌ ಸಿಂಧೂರಕಾರ್ಯಾಚರಣೆ ಮೂಲಕಪಾಕ್‌ಉಗ್ರರಿಗೆ ತಕ್ಕಶಾಸ್ತಿ ನೀಡಿದ ಭಾರತೀಯ ಸೇನೆ ಕ್ರಮ ಸ್ವಾಗತಿಸಿ, ಬಿಜೆಪಿ ಕಾರ್ಯಕರ್ತರು ಸಾರ್ವಜನಿಕರಿಗೆಸಿಹಿ ವಿತರಿಸಿದರು. | Kannada Prabha

ಸಾರಾಂಶ

ಚನ್ನಮ್ಮ ವೃತ್ತದಲ್ಲಿ ಸಾರ್ವಜನಿಕರಿಗೆ ಸಿಹಿ ವಿತರಿಸಿದ ಸಂಭ್ರಮಿಸಿದ ಕಾರ್ಯಕರ್ತರು, ಭಾರತದ ಪರವಾಗಿ ಘೋಷಣೆ ಕೂಗಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಪಹಲ್ಗಾಮ್‌ ಹತ್ಯಾಕಾಂಡಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂದೂರ ಕಾರ್ಯಾಚರಣೆ ಕೈಗೊಂಡು ಪಾಕಿಸ್ತಾನ ಉಗ್ರರ ಅಡಗುತಾಣಗಳ ಮೇಲೆ ದಾಳಿ ನಡೆಸಿ ತಕ್ಕ ಪಾಠ ಕಲಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಗುರುವಾರ ನಗರದ ಚನ್ನಮ್ಮ ವೃತ್ತದ ಬಳಿಯಿರುವ ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಬಳಿಕ ಚನ್ನಮ್ಮ ವೃತ್ತದಲ್ಲಿ ಸಾರ್ವಜನಿಕರಿಗೆ ಸಿಹಿ ವಿತರಿಸಿದ ಸಂಭ್ರಮಿಸಿದ ಕಾರ್ಯಕರ್ತರು, ಭಾರತದ ಪರವಾಗಿ ಘೋಷಣೆ ಕೂಗಿದರು.

ಬಿಜೆಪಿ ಮಹಾನಗರ ಜಿಲ್ಲಾಧ್ಯಕ್ಷೆ ಗೀತಾ ಸುತಾರ ಮಾತನಾಡಿ, ಅಪರೇಷನ್‌ ಸಿಂದೂರ ಮೂಲಕ ಕಾರ್ಯಾಚರಣೆ ಕೈಗೊಂಡು ಭಾರತೀಯ ಸೇನೆ ಪಾಕಿಸ್ತಾನದ ಉಗ್ರರು ಅಡಗುತಾಣಗಳ ಮೇಲೆ ದಾಳಿ ನಡೆಸಿ, ತಕ್ಕ ಉತ್ತರ ನೀಡಿದೆ. ಇದರಿಂದಾಗಿ ಪಹಲ್ಗಾಮ್‌ ದಾಳಿಯಲ್ಲಿ ಬಲಿಯಾದವರ ಆತ್ಮಕ್ಕೆ ಶಾಂತಿ ಸಿಕ್ಕಂತಾಗಿದೆ. ಆಪರೇಷನ್‌ ಸಿಂದೂರ ಕುರಿತು ಎಳೆ ಎಳೆಯಾಗಿ ಮಾಹಿತಿ ನೀಡಿ ಕರ್ನಲ್‌ ಸೋಫಿಯಾ ಖುರೇಷಿ ಬೆಳಗಾವಿ ಜಿಲ್ಲೆಯ ಹೆಮ್ಮೆ ವಿಚಾರ. ಭಾರತೀಯ ಸೇನಾ ಯೋಧರು ಉಗ್ರರನ್ನು ಸೆದೆಬಡಿದ್ದಾರೆ ಎಂದರು. ಮಾಜಿ ಸಂಸದೆ ಮಂಗಲ ಅಂಗಡಿ, ಉಪಮೇಯರ್‌ ವಾಣಿ ಜೋಶಿ, ಜ್ಯೋತಿ ಶೆಟ್ಟಿ, ಉಜ್ವಲಾ ಬಡವನಾಚೆ, ಲೀನಾ ಟೋಪಣ್ಣವರ,ನಗರ ಸೇವಕರಾದ ಹಣಮಂತ ಕೊಂಗಾಲಿ, ರಾಜಶೇಖರ ಡೋಣಿ ಮೊದಲಾದವರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ