ಕನ್ನಡಪ್ರಭ ವಾರ್ತೆ ಬೆಳಗಾವಿ
ನಗರದ ರಾಣಿ ಚನ್ನಮ್ಮ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಪರಸ್ಪರ ಗುಲಾಲು ಎರಚುವ ಮೂಲಕ ಸಂಭ್ರಮಿಸಿದರು. ದೇಶದ ಗಮನ ಸೆಳೆದಿದ್ದ ಬಿಹಾರ ರಾಜ್ಯದ ಚುನಾವಣೆಯಲ್ಲಿ ಬಿಜೆಪಿ ದಿಗ್ವಿಜಯ ಸಾಸಿದೆ. ಪ್ರಧಾನ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ಸಿಎಂ ನಿತೀಶ್ ಕುಮಾರ್ ಅವರ ಆಡಳಿತವನ್ನು ಮೆಚ್ಚಿರುವ ಜನರು ಮತ್ತೊಮ್ಮೆ ಎನ್‌ಡಿಎಗೆ ಆಶೀರ್ವಾದ ಮಾಡಿದ್ದಾರೆ. ಬಿಹಾರದ ಜನರು ಹಿಂದೂ ರಾಷ್ಟ್ರಕ್ಕಾಗಿ ತಮ್ಮ ಬೆಂಬಲವನ್ನು ಸೂಚಿಸಿದ್ದಾರೆ ಎಂದು ಬಿಜೆಪಿ ಕಾರ್ಯಕರ್ತರು ಬಿಜೆಪಿ ಹಾಗೂ ನರೇಂದ್ರ ಮೋದಿ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.
ವಿಜಯೋತ್ಸವದಲ್ಲಿ ನಗರ ಸೇವಕ ಹಣಮಂತ ಕೊಂಗಾಲಿ, ಮುಖಂಡರಾದ ರಾಜಶೇಖರ ಡೋಣಿ, ಮುರುಘೇಂದ್ರಗೌಡ ಪಾಟೀಲ, ಮಹಾಂತೇಶ ವಕ್ಕುಂದ ಹಾಗೂ ಮಹಿಳಾ ಕಾರ್ಯಕರ್ತರು ಪಾಲ್ಗೊಂಡಿದ್ದರು.