ಜಿಲ್ಲೆಯ ಸಮಸ್ಯೆಗಳ ಬಗ್ಗೆ ಬಿಜೆಪಿ ಕಾರ್ಯಕರ್ತರಿಂದ ಡೀಸಿಗೆ ಮನವರಿಕೆ

KannadaprabhaNewsNetwork |  
Published : Mar 14, 2025, 12:31 AM IST
೧೩ಕೆಎಲ್‌ಆರ್-೧೦ಕೋಲಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿರನ್ನು ಸನ್ಮಾನಿಸುತ್ತಿರುವುದು. | Kannada Prabha

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ನಂತರದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ವಿನಾಕಾರಣ ಕಿರುಕುಳ ಕೊಡುತ್ತಿದ್ದಾರೆ, ಜೊತೆಗೆ ಕಾರ್ಯಕರ್ತರು ಹಾಗೂ ಮುಖಂಡರ ಕೆಲಸಗಳನ್ನು ಮಾಡಿಕೊಡಲ್ಲ, ಪ್ರತಿ ಇಲಾಖೆಯಲ್ಲಿಯೂ ಭ್ರಷ್ಟಾಚಾರ ತಾಂಡವಾಡುತ್ತಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಓಂಶಕ್ತಿ ಚಲಪತಿ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿರನ್ನು ಸನ್ಮಾನಿಸಿ ಸಮಸ್ಯೆಗಳ ಬಗ್ಗೆ ಮನವರಿಕೆ ಮಾಡಿಕೊಟ್ಟರು.

ಕನ್ನಡಪ್ರಭ ವಾರ್ತೆ ಕೋಲಾರ

ಜಿಲ್ಲಾಧ್ಯಕ್ಷ ಓಂಶಕ್ತಿ ಚಲಪತಿ ಮಾತನಾಡಿ, ಚುನಾವಣಾ ಸಂದರ್ಭದಲ್ಲಿ ನೀಡಿರುವ ಭರವಸೆಗಳನ್ನು ಈಡೇರಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರವು ಪ್ರತಿಯೊಂದು ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ, ನಗರಸಭೆಯಲ್ಲಿ ಇ- ಖಾತೆ ಮಾಡಿಕೊಳ್ಳಲು ಲಂಚ ಕೊಡಬೇಕಾಗಿದೆ, ಕಾಂಗ್ರೆಸ್ ಕಾರ್ಯಕರ್ತರ ಕೆಲಸಗಳಿಗೆ ಕೊಟ್ಟ ಆದ್ಯತೆ ಬಿಜೆಪಿ ಕಾರ್ಯಕರ್ತರಿಗೆ ಕೊಡಲ್ಲ, ವಿನಾಕಾರಣ ಕೇಸ್ ಹಾಕಿ ಜೈಲಿಗೆ ಕಳುಹಿಸಲಾಗಿದೆ, ಇದು ಯಾವ ನ್ಯಾಯ ಎಂದು ಮನವರಿಕೆ ಮಾಡಿದರು.

ಪ್ರತಿ ಇಲಾಖೆಯಲ್ಲೂ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ವಿವಿಧ ತನಿಖಾ ತಂಡಗಳಿಂದ ಅಧಿಕಾರಿಗಳ ಮೇಲೆ ದಾಳಿಗಳು ನಡೆದು ಭ್ರಷ್ಟಾಚಾರ ಮತ್ತು ಅವ್ಯವಹಾರ ಸಾಬೀತಾಗಿದೆ, ಕೂಡಲೇ ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪಕ್ಷದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗುತ್ತದೆ ಎಂದು ಮನವರಿಕೆ ಮಾಡಿದರು.

ಬಿಜೆಪಿ ನಗರ ಘಟಕ ಅಧ್ಯಕ್ಷ ಸಾ.ಮಾ ಬಾಬು, ಯುವ ಮೋರ್ಚಾ ಮಾಜಿ ಜಿಲ್ಲಾ ಅಧ್ಯಕ್ಷ ಬಿ.ಎನ್. ಶಿವಕುಮಾರ್, ಬೆಂಗಳೂರು ವಿವಿ ಸೆನೆಟ್ ಸದಸ್ಯ ರವೀಶ್ ಗೌಡ, ಬಿಜೆಪಿ ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಚಲುವನಹಳ್ಳಿ ಶ್ರೀನಿವಾಸ್, ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾಳಹಸ್ತಿಪುರ ಅಂಬರೀಶ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪತ್ರಕರ್ತ ತಗಡೂರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ
ಕನ್ನಡದಲ್ಲಿ ರೈಲ್ವೆ ಪರೀಕ್ಷೆಗೆ ಇಲಾಖೆ : ಕರವೇ