ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಯಚಾಮರಾಜ ಒಡೆಯರ್ ವೃತ್ತದಲ್ಲಿ ಸೇರಿದ ಕಾರ್‍ಯಕರ್ತರು, ಬೆಂಗಳೂರು- ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಕೆಲಕಾಲ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಶ್ರೀಕ್ಷೇತ್ರ ಧರ್ಮಸ್ಥಳ ಕೇವಲ ಕರ್ನಾಟಕವಲ್ಲದೆ ದೇಶಾದ್ಯಂತ ಕೋಟ್ಯಂತರ ಭಕ್ತರನ್ನು ಹೊಂದಿದೆ. ನಿತ್ಯ ಲಕ್ಷಾಂತರ ಮಂದಿ ಭಕ್ತರು ಬಂದು ಹೋಗುತ್ತಾರೆ. ಹಿಂದೂಗಳಿಗೆ ಇದು ಪ್ರಮುಖ ಧಾರ್ಮಿಕ ಶ್ರದ್ಧಾಕೇಂದ್ರವಾಗಿದೆ. ಹಿಂದೂಗಳ ಧಾರ್ಮಿಕ ಭಾವನೆಯನ್ನು ಅಪಮಾನಿಸುವ ದುರುದ್ದೇಶದಿಂದ ಕೆಲ ಕಿಡಿಗೇಡಿಗಳು ಹಾಗೂ ಎಡಚರರು ಸುಳ್ಳು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದರ ಹಿಂದೆ ಹಿಂದೂಗಳ ಶ್ರದ್ಧಾ ಭಕ್ತಿಯನ್ನು ಅತ್ಯಂತ ನಿಕೃಷ್ಟವಾಗಿ ಬಿಂಬಿಸುವ ಹುನ್ನಾರವಿದೆ. ಇಂತಹ ಕಿಡಿಗೇಡಿಗಳಿಗೆ ಕುಮ್ಮಕ್ಕು ನೀಡುವ ಷಡ್ಯಂತ್ರ ನಡೆದಿದೆ. ಭಾರತದ ನ್ಯಾಯ ಸಂಹಿತೆ ಅಡಿ ಅನಾಮಿಕ ವ್ಯಕ್ತಿಯೊಬ್ಬ ಯಾವುದೇ ಆಧಾರಗಳಿಲ್ಲದೆ ಮಾಡಿದ ಆರೋಪಕ್ಕೆ ರಾಜ್ಯ ಸರ್ಕಾರ ಲಕ್ಷಾಂತರ ರು. ಗಳನ್ನು ವ್ಯಯಿಸಿ ಆತ ಹೇಳಿದ ಕಡೆಗಳಿಗೆಲ್ಲಾ ಗುಂಡಿಗಳನ್ನು ತೋಡಿದೆ ಎಂದು ಕಿಡಿಕಾರಿದರು.
ರಾಜ್ಯ ಕಾಂಗ್ರೆಸ್ ನೇತೃತ್ವದ ಸರ್ಕಾರ ಹಿಂದೂಗಳ ಭಕ್ತಿ ಭಾವನೆಗಳಿಗೆ ಧಕ್ಕೆ ತರುವ ಹುನ್ನಾರವನ್ನು ನಿರಂತರವಾಗಿ ಮಾಡುತ್ತಿದ್ದಾರೆ. ಇಂತಹ ದುಷ್ಕೃತ್ಯವನ್ನು ತಡೆಯುವಲ್ಲಿ ವಿಫಲವಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜ್ಯದ ಜನತೆಯ ಕ್ಷಮೆಯಾಚನೆ ಮಾಡಬೇಕು ಎಂದು ಆಗ್ರಹಿಸಿದರು.