ಬಿಜೆಪಿ ಕಾರ್ಯಕರ್ತರು ಮೋದಿ ಸಾಧನೆಗಳನ್ನು ಜನರಿಗೆ ತಿಳಿಸಬೇಕು: ಎಂ.ಪಿ.ರೇಣುಕಾಚಾರ್ಯ

KannadaprabhaNewsNetwork |  
Published : Jun 02, 2026, 01:30 AM IST
1ಎಚ್.ಎಲ್.ಐ1 ಬಿಜೆಪಿ ಹೊನ್ನಾಳಿ ಮಂಡಲ ವತಿಯಿಂದ ಪಟ್ಟಣದಲ್ಲಿಹಮ್ಮಿಕೊಂಡಿದ್ದ ಸಾಮಾಜಿಕ ಜಾಲತಾಣ ಕಾರ್ಯಾಗಾರದಲ್ಲಿ ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಮಾತನಾಡಿದರು. | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಸಾಧನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ನಿರಂತರವಾಗಿ ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸುವ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ.

- ಹೊನ್ನಾಳಿ ಬಿಜೆಪಿ ಮಂಡಲದಿಂದ ಸಾಮಾಜಿಕ ಜಾಲತಾಣ ಕಾರ್ಯಾಗಾರ

- - -

ಹೊನ್ನಾಳಿ: ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದ ಸಾಧನೆಗಳನ್ನು ಸಾಮಾನ್ಯ ಜನರಿಗೆ ತಲುಪಿಸುವ ಕೆಲಸವನ್ನು ಬಿಜೆಪಿ ಕಾರ್ಯಕರ್ತರು ನಿರಂತರವಾಗಿ ಸಾಮಾಜಿಕ ಜಾಲತಾಣಗಳ ಮೂಲಕ ತಿಳಿಸುವ ಕೆಲಸ ಮಾಡಬೇಕು ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಹೇಳಿದರು.

ಬಿಜೆಪಿ ಹೊನ್ನಾಳಿ ಮಂಡಲ ವತಿಯಿಂದ ಶನಿವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸಾಮಾಜಿಕ ಜಾಲತಾಣ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಬಿಜೆಪಿಯಿಂದ ಆಗಿರುವಂತಹ ಅಭಿವೃದ್ಧಿ ಕೆಲಸಗಳ ಬಗ್ಗೆ ಯಾವುದೇ ಕಾರಣಕ್ಕೂ ಕಾರ್ಯಕರ್ತರು ನಿರ್ಲಕ್ಷ ಮಾಡದೇ ಸಾಮಾಜಿಕ ಜಾಲತಾಣದಲ್ಲಿ ಪ್ರಚಾರ ಮಾಡಬೇಕು. ನಮ್ಮ ತಾಲೂಕಿನಲ್ಲಿ ಈ ಹಿಂದೆ ಅಭಿವೃದ್ಧಿ ಪರ್ವ ನಡೆದರೂ ಕಾರ್ಯಕರ್ತರು ಹೆಚ್ಚಿನ ಪ್ರಚಾರ ಮಾಡದಿರುವುದು ಕಂಡುಬಂದಿದೆ. ಮುಂದಿನ ದಿನಗಳಲ್ಲಿ ಹೀಗಾಗದಂತೆ ಬಿಜೆಪಿ ಮಂಡಲದ ಪದಾಧಿಕಾರಿಗಳು, ಕಾರ್ಯಕರ್ತರು ನೋಡಿಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದು ತಾಕೀತು ಮಾಡಿದರು.

ಪಕ್ಷ ಸಂಘಟನೆಯಲ್ಲಿ ಬಿಜೆಪಿ ಸದಾ ಮುಂದಿದೆ. ಇದೇ ರೀತಿ ಜನಪರ ಯೋಜನೆಗಳು ಜಾರಿಯಾದಾಗ ವ್ಯವಸ್ಥಿತ ರೀತಿಯಲ್ಲಿ ಪ್ರಚಾರವೂ ಆಗಬೇಕು. ಮೂರನೇ ಬಾರಿಗೆ ಪ್ರಧಾನಿ ಆಗಿರುವ ನರೇಂದ್ರ ಮೋದಿ ಇಂದು ವಿಶ್ವಕ್ಕೆ ನಾಯಕರಾಗಿ ಹೊರಹೊಮ್ಮಿದ್ದಾರೆ. ವಿಶ್ವದ ಅನೇಕ ರಾಷ್ಟ್ರಗಳು ತಮ್ಮ ದೇಶಗಳ ಅತ್ಯುನ್ನತ ಪ್ರಶಸ್ತಿಗಳನ್ನು ನೀಡಿ ಗೌರವಿಸಿರುವುದೇ ಇದಕ್ಕೆ ಉದಾಹರಣೆ ಎಂದ ಅವರು, ಬಿಜೆಪಿ ಸರ್ಕಾರ ಆಡಳಿತದಲ್ಲಿದ್ದಾಗ ತಾಲೂಕಿಗೆ ₹5000 ಕೋಟಿಗೂ ಹೆಚ್ಚು ಅನುದಾನದ ಕಾಮಗಾರಿಗಳು ನಡೆದಿವೆ. ಅವುಗಳ ಪ್ರಚಾರ ಮಾಡಬೇಕು ಎಂದು ಹೇಳಿದರು.

ಶಿವಮೊಗ್ಗ ವಿಭಾಗದ ಸಾಮಾಜಿಕ ಜಾಲತಾಣದ ಪ್ರಮುಖ್ಯಸ್ಥ ಪ್ರಶಾಂತ್ ಕೊಂಡಜ್ಜಿ ಸಾಮಾಜಿಕ ಜಾಲತಾಣದ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಿದರು. ಬಿಜೆಪಿ ಮಂಡಲದ ತಾಲೂಕು ಅಧ್ಯಕ್ಷ ಅರಕೆರೆ ನಾಗರಾಜ್, ಮಾಜಿ ಅಧ್ಯಕ್ಷ ಜೆ.ಕೆ.ಸುರೇಶ್, ಮುಖಂಡರಾದ ಕೆ.ಪಿ. ಕುಬೇಂದ್ರಪ್ಪ, ಎಸ್.ಎಸ್. ಬೀರಪ್ಪ, ಸಿ.ಆರ್. ಶಿವಾನಂದ್, ಮಾರುತಿ ನಾಯ್ಕ, ಪಾಲಾಪಕ್ಷಪ್ಪ, ನೆಲಹೊನ್ನೆ ಮಂಜುನಾಥ, ಕೆ.ಇ. ನಾಗರಾಜ್‌ ಇತರರು ಇದ್ದರು.

- - -

-1ಎಚ್.ಎಲ್.ಐ1:

ಬಿಜೆಪಿ ಹೊನ್ನಾಳಿ ಮಂಡಲ ವತಿಯಿಂದ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಸಾಮಾಜಿಕ ಜಾಲತಾಣ ಕಾರ್ಯಾಗಾರದಲ್ಲಿ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹುಟ್ಟುಹಬ್ಬಗಳು ಸಾರ್ವಜನಿಕರಿಂದ ಆಚರಣೆಗೊಂಡಾಗ ಸಾರ್ಥಕತೆ
ಸರ್ಕಾರಿ ಶಾಲೆಯಲ್ಲೂ ಎಲ್‌ಕೆಜಿ ಆರಂಭ: ಮಂಜುಳಾ