ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸಬಾರದು, ಈ ಭಾಗದ ರೈತರ ಹಿತಕಾಯುವ ಕೆಲಸ ಮಾಡಬೇಕು. ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರೊಂದಿಗೆ ಚರ್ಚೆಗೆ ಮುಂದಾಗಿರುವುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರು ಈ ಭಾಗದ ಮಗನಾಗಿದ್ದರೆ ನೀರು ಹರಿಸುವ ನಿರ್ಣಯವನ್ನು ಕೈಬಿಡಬೇಕು ಎಂದ ಆಗ್ರಹಿಸಿದರು.
ಕನ್ನಡಪ್ರಭ ವಾರ್ತೆ ಪಾಂಡವಪುರ
ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ನೀಡಿರುವ ಆದೇಶ ಖಂಡಿಸಿ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಪಟ್ಟಣದ ಐದು ದೀಪದ ವೃತ್ತದಲ್ಲಿ ಸೇರಿದ ಕಾರ್ಯಕರ್ತರು ಶ್ರೀರಂಗಪಟ್ಟಣ- ಜೇವರ್ಗಿ ಮುಖ್ಯರಸ್ತೆಯನ್ನು ತಡೆದು ಸಮಿತಿ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಬರಗಾಲದಲ್ಲಿ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿರುವುದು ರೈತರಿಗೆ ಮರಣ ಶಾಸನವಾಗಿದೆ. ಸರ್ಕಾರ ರಾಜ್ಯದಲ್ಲಿನ ಬರಗಾಲದ ಸನ್ನಿವೇಶವನ್ನು ಸಮಿತಿ ಎದುರು ಮಂಡಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ಇದರಿಂದಾಗಿ ಪ್ರಾಧಿಕಾರ ಈ ರೀತಿ ಆದೇಶ ನೀಡಿದೆ ಎಂದು ಕಿಡಿಕಾರಿದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸಬಾರದು, ಈ ಭಾಗದ ರೈತರ ಹಿತಕಾಯುವ ಕೆಲಸ ಮಾಡಬೇಕು. ತಮಿಳುನಾಡಿನ ಮುಖ್ಯಮಂತ್ರಿ ವಿಜಯ್ ಅವರೊಂದಿಗೆ ಚರ್ಚೆಗೆ ಮುಂದಾಗಿರುವುದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಅವರು ಈ ಭಾಗದ ಮಗನಾಗಿದ್ದರೆ ನೀರು ಹರಿಸುವ ನಿರ್ಣಯವನ್ನು ಕೈಬಿಡಬೇಕು ಎಂದ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಬಿಜೆಪಿ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮಂಗಳ ನವೀನ್, ತಾಲೂಕು ಅಧ್ಯಕ್ಷ ಧನಂಜಯ್, ಮೈಷುಗರ್ ಮಾಜಿ ಅಧ್ಯಕ್ಷ ಜೆ.ಶಿವಲಿಂಗೇಗೌಡ, ಮುಖಂಡರಾದ ಎಸ್ ಎನ್ ಟಿ ಸೋಮಶೇಖರ್, ಬೀರಶೆಟ್ಟಹಳ್ಳಿ ಸೋಮಶೇಖರ್, ಮಂಜುನಾಥ್, ನವೀನ, ಚನ್ನೇಗೌಡ, ಕೆ.ಎಲ್.ಆನಂದ್, ಅಶೋಕ್, ಶ್ರೀನಿವಾಸನಾಯ್ಕ, ರಾಮಚಂದ್ರು, ಮಂಜಾಚಾರಿ ಸೇರಿದಂತೆ ಹಲವರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.