ಖರ್ಗೆ ಹೇಳಿಕೆಗೆ ಬಿಜೆಪಿ ಯುವ ಮೋರ್ಚಾ ಖಂಡನೆ: ಬಹಿರಂಗ ಕ್ಷಮೆಯಾಚನೆಗೆ ಆಗ್ರಹ

KannadaprabhaNewsNetwork |  
Published : Oct 27, 2026, 01:15 AM IST
 | Kannada Prabha

ಸಾರಾಂಶ

ಚಿಕ್ಕಮಗಳೂರು ಪ್ರಧಾನಿ ನರೇಂದ್ರ ಮೋದಿ ಅವರ ತಂದೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯನ್ನು ಬಿಜೆಪಿ ಯುವ ಮೋರ್ಚಾ ಖಂಡಿಸಿದ್ದು, ಖರ್ಗೆಯವರು ದೇಶದ ಜನರ ಮುಂದೆ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಆಗ್ರಹಿಸಿದ್ದಾರೆ.

ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್

ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರು

ಪ್ರಧಾನಿ ನರೇಂದ್ರ ಮೋದಿ ಅವರ ತಂದೆ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೀಡಿರುವ ಹೇಳಿಕೆಯನ್ನು ಬಿಜೆಪಿ ಯುವ ಮೋರ್ಚಾ ಖಂಡಿಸಿದ್ದು, ಖರ್ಗೆಯವರು ದೇಶದ ಜನರ ಮುಂದೆ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್ ಕೋಟ್ಯಾನ್ ಆಗ್ರಹಿಸಿದ್ದಾರೆ.

ಸೋಮವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪ್ರಧಾನಿ ಮೋದಿ ಅವರನ್ನು ಸೈದ್ಧಾಂತಿಕ ಹಾಗೂ ಅಭಿವೃದ್ಧಿ ವಿಚಾರದಲ್ಲಿ ಎದುರಿಸಲು ಸಾಧ್ಯವಾಗದೆ ಕಾಂಗ್ರೆಸ್ ನಾಯಕರು ವೈಯಕ್ತಿಕ ನಿಂದನೆಗೆ ಇಳಿದಿದ್ದಾರೆ ಎಂದು ಆರೋಪಿಸಿದ್ದಾರೆ.

ಭಾರತೀಯ ಸಂಸ್ಕೃತಿಯಲ್ಲಿ ದಿವಂಗತರು, ಹಿರಿಯರಿಗೆ ಗೌರವ ನೀಡುವುದು ಪರಂಪರೆ. ಆದರೆ, ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಪ್ರಧಾನಿಯವರ ತಂದೆ ಕುರಿತು ಹಗುರವಾಗಿ ಮಾತನಾಡಿರುವುದು ಖಂಡನೀಯ. ಇದು ಕಾಂಗ್ರೆಸ್ ಪಕ್ಷದ ನೈತಿಕ ಮತ್ತು ವೈಚಾರಿಕ ದೌರ್ಬಲ್ಯ ತೋರಿಸುತ್ತದೆ ಎಂದು ಟೀಕಿಸಿದ್ದಾರೆ.

ಬಡ ಕುಟುಂಬದಿಂದ ಬಂದು ಸ್ವಪ್ರಯತ್ನದಿಂದ ದೇಶದ ಪ್ರಧಾನಿಯಾಗಿ ಸೇವೆ ಸಲ್ಲಿಸುತ್ತಿರುವ ನರೇಂದ್ರ ಮೋದಿ ಅವರನ್ನು ಕಾಂಗ್ರೆಸ್ ಸಹಿಸಿಕೊಳ್ಳುತ್ತಿಲ್ಲ. ಸತತ ಸೋಲುಗಳಿಂದ ಹತಾಶಗೊಂಡ ಕಾಂಗ್ರೆಸ್ ನಾಯಕರು ಇಂತಹ ಹೇಳಿಕೆಗಳ ಮೂಲಕ ತಮ್ಮ ನಿರಾಶೆ ಹೊರಹಾಕುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ರಾಜಕೀಯ ಸಂವಾದದ ಮಟ್ಟ ಕುಸಿತ: ಕಾಂಗ್ರೆಸ್ ನಾಯಕರು ರಾಜಕೀಯ ಸಂವಾದದ ಮಟ್ಟ ಕುಸಿಯುವಂತೆ ಮಾಡುತ್ತಿ ದ್ದಾರೆ. ದೇಶದ ಯುವಜನತೆ ಸಂಸ್ಕೃತಿಗೆ ವಿರುದ್ಧ ವೈಯಕ್ತಿಕ ನಿಂದನೆ ರಾಜಕಾರಣ ಒಪ್ಪುವುದಿಲ್ಲ. ಪ್ರಧಾನಿ ಮೋದಿ ಹಾಗೂ ದೇಶದ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆ ತಂದ ಖರ್ಗೆಯವರು ತಕ್ಷಣ ಬಹಿರಂಗ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಾಂಗ್ರೆಸ್ ನಾಯಕರು ವೈಯಕ್ತಿಕ ಟೀಕೆಗಳನ್ನು ಬದಿಗಿಟ್ಟು, ದೇಶದ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ಕುರಿತು ಚರ್ಚೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಾಲ್ಮೀಕಿ ರಾಮಾಯಣದಿಂದ ಸಮಾಜಕ್ಕೆ ಸಂದೇಶ
ರುದ್ರಭೂಮಿ ಸ್ವಚ್ಛಗೊಳಿಸಿದ ಹಿಂದೂ ಸಂಘಟನೆ ಕಾರ್ಯಕರ್ತರು