ಜಿಲ್ಲೆಯಲ್ಲಿ ಬಿಜೆಪಿಯಿಂದ ಸೇವಾಜ್ಯೋತಿ ಯಾತ್ರೆ

KannadaprabhaNewsNetwork |  
Published : Oct 09, 2026, 02:45 AM IST
ಫೋಟೋವಿವರ- (7ಎಚ್‌ಪಿಟಿ2)  ಹೊಸಪೇಟೆ ನಗರದಲ್ಲಿ ಬುಧವಾರ ಬಿಜೆಪಿಯಿಂದ ಹಮ್ಮಿಕೊಂಡಿದ್ದ ಗುಜರಾತ್ ಮುಖ್ಯಮಂತ್ರಿಯಾಗಿ ಹಾಗೂ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಅವರು 25 ವರ್ಷಗಳು ಪೂರ್ಣಗೊಂಡ ಹಿನ್ನಲೆಯಲ್ಲಿ ನಗರದಲ್ಲಿ ಸೇವಾ‌ ಜ್ಯೋತಿ ಯಾತ್ರೆ ನಡೆಸಲಾಯಿತು | Kannada Prabha

ಸಾರಾಂಶ

ಸೇವಾಜ್ಯೋತಿ ಯಾತ್ರೆ ಆಂಗವಾಗಿ ನಗರದ ಡಾ. ಪುನೀತ್ ರಾಜ್ ಕುಮಾರ್ ವೃತ್ತದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು

ಹೊಸಪೇಟೆ: ಗುಜರಾತ್ ಸಿಎಂ ಹಾಗೂ ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ 25 ವರ್ಷ ಪೂರ್ಣಗೊಂಡ ಹಿನ್ನೆಲೆ ಬಿಜೆಪಿ ಹಮ್ಮಿಕೊಂಡಿರುವ ಸೇವಾ ಸಂಕಲ್ಪದ ಭಾಗವಾಗಿ ನಗರದಲ್ಲಿ ಬುಧವಾರ ಬಿಜೆಪಿ ಜಿಲ್ಲಾ ಘಟಕದಿಂದ ಸೇವಾ‌ ಜ್ಯೋತಿ ಯಾತ್ರೆ ನಡೆಸಲಾಯಿತು.

ಸ್ಥಳೀಯ ಬಿಜೆಪಿ ಕಚೇರಿಯಿಂದ ಆರಂಭವಾದ ಸೇವಾ ಜ್ಯೋತಿ ಯಾತ್ರೆ ನಗರದ ಮದಕರಿ ನಾಯಕ ವೃತ್ತ, ಮುಖ್ಯ ‌ಮಸೀದಿ, ಗಾಂಧಿ ಚೌಕ್, ಮೂರಂಗಡಿ ವೃತ್ತ, ಪುಣ್ಯಮೂರ್ತಿ ವೃತ್ತ, ಕೇಂದ್ರ ಬಸ್ ನಿಲ್ದಾಣ, ಡಾ. ಪುನೀತ್ ರಾಜ್ ಕುಮಾರ್ ವೃತ್ತ, ಕಾಲೇಜು ರಸ್ತೆ, ಡಾ. ಬಿ.ಆರ್.ಅಂಬೇಡ್ಕರ್ ‌ವೃತ್ತದ ಮೂಲಕ ಸಂಚರಿಸಿ ನಂತರ ಬಿಜೆಪಿ ಕಚೇರಿಯಲ್ಲಿ ಅಂತ್ಯಗೊಂಡಿತು.

ಸೇವಾಜ್ಯೋತಿ ಯಾತ್ರೆ ಆಂಗವಾಗಿ ನಗರದ ಡಾ. ಪುನೀತ್ ರಾಜ್ ಕುಮಾರ್ ವೃತ್ತದಲ್ಲಿ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ ರೆಡ್ಡಿ ವಿಕಸಿತ ಭಾರತದ ಪ್ರತಿಜ್ಞಾವಿಧಿ ಬೋಧಿಸಿದರು.

ಬಿಜೆಪಿ ಸೇವಾಜ್ಯೋತಿ ಯಾತ್ರೆಯಲ್ಲಿ ಹೂವಿನ ಹಡಗಲಿ ಶಾಸಕ ಕೃಷ್ಣಾನಾಯಕ್, ಮಾಜಿ ಜಿಲ್ಲಾಧ್ಯಕ್ಷ ಚನ್ನಬಸವನಗೌಡ ಪಾಟೀಲ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸಂದೀಪ್ ಸಿಂಗ್, ನಗರಸಭೆ ಅಧ್ಯಕ್ಷ ಎನ್. ರೂಪೇಶ್ ಕುಮಾರ್, ಉಪಾಧ್ಯಕ್ಷ ಜೀವರತ್ನಂ, ಬಿಜೆಪಿ ಜಿಲ್ಲಾ ಮುಖಂಡ ಬಲ್ಲಾಹುಣ್ಸಿ ರಾಮಣ್ಣ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್. ರಾಘವೇಂದ್ರ, ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಕಿಚಿಡಿ ಕೊಟ್ರೇಶ್, ಶಂಕರ್‌ ಮೇಟಿ, ಜಗದೀಶ್ ಕಾಮಟಗಿ, ರೇವಣಸಿದ್ದಪ್ಪ, ಸಚಿನ್, ಮದುರಚನ್ನ ಶಾಸ್ತ್ರಿ, ಕಾಸಿಟ್ಟಿ ಉಮಾಪತಿ, ಹನುಮನಾಯ್ಕ, ರವಿಕಿರಣ್ ಸೇರಿದಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸೇವಾಜ್ಯೋತಿ ಯಾತ್ರೆಯಲ್ಲಿ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಶ್ರೀಶಾ ಸೌಹಾರ್ದ ಸೊಸೈಟಿ ನಿವ್ವಳ ಲಾಭದಲ್ಲಿ ಶೇ.35ರಷ್ಟು ಏರಿಕೆ
10ರಂದು ಮಾ ‘ರನ್ ಆ್ಯಂಡ್ ರೈಡ್ ಫಾರ್ ಡಿಗ್ನಿಟಿ’