ಕನ್ನಡಪ್ರಭ ವಾರ್ತೆ ಮಂಡ್ಯ
ಕರಾಳ ದಿನದ ಅಂಗವಾಗಿ ಗ್ರಾಮದ ಪೆಟ್ರೋಲ್ ಬಂಕ್ ನಿಂದ ಅರ್ಜುನ ಧ್ವಜ ಸ್ತಂಭದವರೆಗೆ ಶಾಂತಿಯುತವಾಗಿ ನಡೆಯಿತು.
ಹನುಮ ಭಕ್ತರು ಮತ್ತು ಹಿಂದೂ ಕಾರ್ಯಕರ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಅರ್ಜುನ ಧ್ವಜಸ್ತಂಭದ ಮುಂಭಾಗ ರಂಗೋಲಿಯಲ್ಲಿ ಹನುಮಧ್ವಜವನ್ನು ಅರಳಿಸಲಾಗಿತ್ತು. ಹೂವುಗಳಿಂದ ರಂಗೋಲಿ ಧ್ವಜ ಸಿಂಗಾರಗೊಂಡಿತ್ತು.ಪಂಜಿನ ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ಅಂಕನ ದೊಡ್ಡಿಗೆ ಆಗಮಿಸಿದ್ದರು. ಹಿಂದೂ ಕಾರ್ಯಕರ್ತರ ಮನೆಯಲ್ಲಿದ್ದ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಲು ಕೆರಗೋಡು ಪೊಲೀಸರು ಮುಂದಾಗಿದ್ದರು. ಈ ವಿಷಯ ತಿಳಿದ ಹಿಂದೂ ಕಾರ್ಯಕರ್ತರು ಜೈ ಶ್ರೀ ರಾಮ್ ಎಂದು ಘೋಷಣೆಗಳನ್ನು ಕೂಗಿದರು. ಈ ಬೇಳೆ ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿತ್ತು. ಪುನೀತ್ ಅವರನ್ನು ನಮ್ಮ ಜೊತೆ ಕಳುಹಿಸಿ ಕೊಡುವಂತೆ ಹಿಂದೂ ಕಾರ್ಯಕರ್ತರು ಬಿಗಿಪಟ್ಟು ಹಿಡಿದರು.
ಪೊಲೀಸರು ರೌಡಿಗಳಂತೆ ವರ್ತಿಸುತ್ತಿದ್ದಾರೆ. ತುಗಲಕ್ ಸರ್ಕಾರದ ರೌಡಿಸಂ ಖಂಡನೀಯ. ನನ್ನಿಂದ ಈ ಕಾರ್ಯಕ್ರಮಕ್ಕೆ ಯಾವುದೇ ತೊಂದರೆ ಆಗಬಾರದು ಎಂಬ ಕಾರಣಕ್ಕೆ ನಾನು ವಾಪಸ್ ಆಗಲು ನಿರ್ಧರಿಸಿದ್ದೇನೆ. ಕಾರ್ಯಕರ್ತರು ಭಾವೋದ್ವೇಗಕ್ಕೆ ಒಳಗಾಗುವುದು ಬೇಡ. ಕಾಂಗ್ರೆಸ್ ಸರ್ಕಾರ ಹಿಂದೂ ಕಾರ್ಯಕರ್ತರನ್ನು ಬಂಧಿಸಿ ಪ್ರಕರಣ ದಾಖಲಿಸುವುದು ಬೇಡ. ಮುಂದಿನ ದಿನಗಳಲ್ಲಿ ನಾನು ಕೆರಗೋಡಿಗೆ ಬಂದೇ ಬರುತ್ತೇನೆ. ಹಿಂದುಗಳನ್ನು ಒಗ್ಗೂಡಿಸುವ ಕೆಲಸ ಮಾಡುತ್ತೇನೆ ಎಂದು ಅಲ್ಲಿಂದ ನಿರ್ಗಮಿಸಿದರು.