ಕನ್ನಡಪ್ರಭ ವಾರ್ತೆ ಮುದಗಲ್
ಇತ್ತೀಚಿಗೆ ರಾಷ್ಟ್ರೀಯ ನಾಯಕರು ಹಾಗೂ ಮಾಜಿ ಅಖಿಲ ಭಾರತ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪಕ್ಷದ ಮುಖಂಡರನ್ನು ದೆಹಲಿ ಪೊಲೀಸರು ಬಂಧಿಸಿರುವುದನ್ನು ಖಂಡಿಸಿ, ಲಿಂಗಸೂಗೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮುದಗಲ್ ಪಟ್ಟಣದಲ್ಲಿ ಮಾಜಿ ಸಚಿವರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಎನ್.ಎಸ್.ಭೋಸರಾಜು ನೇತೃತ್ವದಲ್ಲಿ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಮಾನ್ವಿ ಶಾಸಕ ಜಿ. ಹಂಪಯ್ಯ ನಾಯಕ, ಮಸ್ಕಿ ಶಾಸಕ ಆರ್.ಬಸನಗೌಡ ತುರ್ವಿಹಾಳ, ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರು ಹಾಗೂ ಮಾಜಿ ಶಾಸಕ ಡಿ.ಎಸ್. ಹೂಲಗೇರಿ, ಎಂಎಲ್ಸಿ ಬಸನಗೌಡ ಬಾದರ್ಲಿ, ಲಿಂಗಸೂಗೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಗೋವಿಂದ ನಾಯಕ, ಮುದಗಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಶಿವಶಂಕರಗೌಡ, ಪ್ರಮುಖರಾದ ಅಹ್ಮದ್ ಬಾಬಾ, ದಾವೂದ್ ಸಾಬ್, ಅರುಣ ಯರದಿಹಾಳ, ಪರಮೇಶ ಕನ್ನಾಪೂರಹಟ್ಟಿ, ಬಸವರಾಜ ಜೆಲ್ಲಿ, ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಇದ್ದರು.