ಕನ್ನಡಪ್ರಭ ವಾರ್ತೆ ಮಂಡ್ಯ
ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಏಕರೂಪ ಶಿಕ್ಷಣ ಜಾರಿಗೆ ಒತ್ತಾಯಿಸಿ ಕಳೆದ ೨೦೨೫ರ ಡಿಸೆಂಬರ್‌ನಲ್ಲಿ ಮೂರು ದಿನಗಳ ಉಪವಾಸ ಸತ್ಯಾಗ್ರಹ ನಡೆಸಿದ್ದೆವು. ಏಪ್ರಿಲ್ ೧೧ರಿಂದ ಜೂ.೬ರವರೆಗೆ ರೈತ ಸಂಘದ ಹಾಗೂ ಶಾಲಾಭಿವೃದ್ಧಿ ಸಮಿತಿಗಳ ವತಿಯಿಂದ ಜಿಲ್ಲೆಯಲ್ಲಿ ೧೫೦೦ ಕಿ.ಮೀ. ಪಾದಯಾತ್ರೆ ನಡೆಸಿದ್ದೆವು. ಜೂ.೬ರಂದು ಸಹಸ್ರಾರು ಮಂದಿಯಿಂದ ಬೃಹತ್ ಪಂಜಿನ ಮೆರವಣಿಗೆ ಮಾಡುವ ಮೂಲಕ ಜನರಿಗೆ ಜಾಗೃತಿ ಮೂಡಿಸಿದ್ದೇವು ಎಂದು ವಿವರಿಸಿದರು.
ಇದರ ಮುಂದುವರಿದ ಭಾಗವಾಗಿ ನ.೨೮ರಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟ ಉಪವಾಸ ಸತ್ಯಾಗ್ರಹ ಆರಂಭಿಸಲು ನಿರ್ಧರಿಸಿರುವುದಾಗಿ ಎಚ್ಚರಿಕೆ ನೀಡಿದರು.ರಾಜ್ಯದ ೪೧,೯೦೫ ಸರ್ಕಾರಿ ಪ್ರಾಥಮಿಕಿ ಶಾಲೆಗಳಲ್ಲಿ ಎಲ್‌ಕೆಜಿಯಿಂದ ೫ನೇ ತರಗತಿಯವರೆಗೆ ದ್ವಿಭಾಷೆಯಲ್ಲಿ ಸಿಬಿಎಸ್‌ಇ ಗುಣಮಟ್ಟದ ಶಿಕ್ಷಣ ಹಾಗೂ ಮೂಲಭೂತ ಸೌಕರ್ಯ ಒದಗಿಸಬೇಕು. ರಾಜ್ಯದ ಪ್ರತಿಯೊಂದು ಗ್ರಾಪಂಯಲ್ಲೂ ೬ನೇ ತರಗತಿಯಿಂದ ೧೨ನೇ ತರಗತಿಯವರೆಗೆ ನವೋದಯ ಮಾದರಿ ಸಿಬಿಎಸ್‌ಸಿ ಗುಣಮಟ್ಟದ ವಸತಿ ಶಾಲಾ ಶಿಕ್ಷಣ ನೀಡಬೇಕು. ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ೮೦ ಸಾವಿರ ಹುದ್ದೆಗಳನ್ನು ಭರ್ತಿ ಮಾಡಬೇಕು ಹಾಗೂ ಸರ್ಕಾರಿ ಶಾಲಾ ಶಿಕ್ಷಕರನ್ನು ಬೋಧಕೇತರ ಕೆಲಸಗಳಿಗೆ ನಿಯೋಜಿಸಬಾರದು ಎಂದು ಒತ್ತಾಯಿಸಿದರು.
ರೈತ ಮುಖಂಡ ಸಂತೋಷ್‌ಗೌಡ ಮಾತನಾಡಿ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಎಲ್ಲೆಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಉತ್ತಮವಾಗಿ ಕೆಲಸ ಮಾಡುತ್ತಿವೆಯೋ ಅಲ್ಲೆಲ್ಲಾ ಮೂರು ಸರ್ಕಾರಿ ಶಾಲೆಗಳನ್ನು ದತ್ತು ಕೊಡಲಾಗುವುದು ಎಂದು ಘೋಷಿಸಿದ್ದರು. ಆದರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ೪೧ ಸಾವಿರಕ್ಕೂ ಹೆಚ್ಚು ಶಾಲೆಗಳಿವೆ. ಒಂದೊಂದು ಶಾಲೆಗಳಲ್ಲಿ ೫ ರಿಂದ ೬ ಮಂದಿ ಮಕ್ಕಳು ದಾಖಲಾದರೆ ಅಂತಹ ಶಾಲೆಗಳನ್ನು ಮುಚ್ಚುತ್ತಾರೆ. ಇನ್ನು ಕೆಲವು ಕಡೆಗಳಲ್ಲಿ ಖಾಸಗಿ ಶಾಲೆಗಳ ಹಾವಳಿಯಿಂದ ಇರುವ ಶಾಲೆಗಳೂ ಮುಚ್ಚುವ ಹಂತ ತಲುಪುತ್ತವೆ. ಇದು ಸರ್ಕಾರಿ ಶಾಲೆಗಳ ಶೋಚನೀಯ ಕಥೆಯಾಗಿದೆ ಎಂದು ವಿಷಾದಿಸಿದರು.