ಕೇಂದ್ರ ಸರ್ಕಾರ ದೂಷಣೆ, ಸಿದ್ಧರಾಮಯ್ಯನವರ ತಂತ್ರಗಾರಿಕೆ: ಯದುವೀರ್‌ ಟೀಕೆ

KannadaprabhaNewsNetwork |  
Published : Nov 27, 2025, 01:02 AM IST
44 | Kannada Prabha

ಸಾರಾಂಶ

ಕೃಷಿ ರಾಜ್ಯ ವಿಷಯವಾಗಿದ್ದು, ರೈತರನ್ನು ರಕ್ಷಿಸಬೇಕಾದ ಹೊಣೆ ರಾಜ್ಯ ಸರ್ಕಾರಕ್ಕೆ ಇದೆ. ಆದರೆ ಕಾಂಗ್ರೆಸ್ ಸರ್ಕಾರ ಕೃಷಿ ಅಭಿವೃದ್ಧಿಗೆ ಗಮನವನ್ನೇ ಕೊಡುತ್ತಿಲ್ಲ. ಅತಿವೃಷ್ಟಿಯಿಂದಾಗಿ ಏಕದಳ, ದ್ವಿದಳ, ತೋಟಗಾರಿ ಬೆಳೆಗಳು ಹಾನಿಯಾಗಿವೆ.

ಕನ್ನಡಪ್ರಭ ವಾರ್ತೆ ಮೈಸೂರು

ಎಲ್ಲದ್ದಕ್ಕೂ ಕೇಂದ್ರ ಸರ್ಕಾರವನ್ನು ದೂಷಿಸುವುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜಕೀಯ ತ್ರಗಾರಿಕೆಯಾಗಿದೆ ಎಂದು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಟೀಕಿಸಿದರು.

ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಕಲ್ಯಾಣಕ್ಕಾಗಿ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಕೃಷಿಯನ್ನು ಆದ್ಯತಾ ವಲಯವಾಗಿ ಪರಿಗಣಿಸಿದೆ. ಆ ನಿಟ್ಟಿನಲ್ಲಿ ಹಣಕಾಸು ಸಚಿವರು ಬಜೆಟ್‌ ನಲ್ಲಿ ಕೃಷಿಗೆ ಪೂರಕವಾಗಿ ಯೋಜನೆ ರೂಪಿಸಿದ್ದಾರೆ. ಪ್ರಧಾನ ಮಂತ್ರಿ ಕಿಶಾನ್ ಯೋಜನೆ ಸೇರಿದಂತೆ ಹತ್ತಾರು ಯೋಜನೆಗಳನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಅವುಗಳನ್ನು ಪಟ್ಟಿ ಮಾಡುತ್ತಾ ಹೋದರೆ ಮುಗಿಯುವುದಿಲ್ಲ ಎಂದರು.

ಕೃಷಿ ರಾಜ್ಯ ವಿಷಯವಾಗಿದ್ದು, ರೈತರನ್ನು ರಕ್ಷಿಸಬೇಕಾದ ಹೊಣೆ ರಾಜ್ಯ ಸರ್ಕಾರಕ್ಕೆ ಇದೆ. ಆದರೆ ಕಾಂಗ್ರೆಸ್ ಸರ್ಕಾರ ಕೃಷಿ ಅಭಿವೃದ್ಧಿಗೆ ಗಮನವನ್ನೇ ಕೊಡುತ್ತಿಲ್ಲ. ಅತಿವೃಷ್ಟಿಯಿಂದಾಗಿ ಏಕದಳ, ದ್ವಿದಳ, ತೋಟಗಾರಿ ಬೆಳೆಗಳು ಹಾನಿಯಾಗಿವೆ. ಕೇಂದ್ರ ಸರ್ಕಾರ ಎನ್‌.ಡಿ.ಆರ್‌.ಎಫ್ ನಿಯಮಗಳ ಅನುಸಾರ ಪರಿಹಾರ ಬಿಡುಗಡೆ ಮಾಡಿದೆ. ರಾಜ್ಯ ಸರ್ಕಾರ ಸರಿಯಾಗಿ ಸಮೀಕ್ಷೆ ನಡೆಸಿ ವರದಿ ಕಳುಹಿಸಿಲ್ಲ. ಜತೆಗೆ ಎಸ್‌.ಡಿ.ಆರ್‌.ಎಫ್ ಅಡಿಯಲ್ಲಿ ನೀಡಬೇಕಿರುವ ಪರಿಹಾರವನ್ನೂ ಕೊಟ್ಟಿಲ್ಲ ಎಂದು ಅವರು ಆರೋಪಿಸಿದರು.

ಶಾಸಕ ಟಿ.ಎಸ್. ಶ್ರೀವತ್ಸ, ಮಾಜಿ ಶಾಸಕ ಹರ್ಷವರ್ಧನ್, ಬಿಜೆಪಿ ನಗರಾಧ್ಯಕ್ಷ ಎಲ್. ನಾಗೇಂದ್ರ, ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಮಿರ್ಲೆ ಶ್ರೀನಿವಾಸ್‌ಗೌಡ, ಮುಖಂಡರಾದ ಡಾ. ಅನಿಲ್ ಥಾಮಸ್, ಕಿರಣ್ ಜಯರಾಮೇಗೌಡ, ವೆಂಕಟೇಶ್, ಗಿರಿಧರ್, ಸಂತೋಷ್ ಕುಮಾರ್ ಮೊದಲಾದವರು ಇದ್ದರು.

ಸಿಎಂಗೆ ರಾಜಕೀಯವೇ ಮುಖ್ಯ:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯದ ರೈತರ ಹಿತಕ್ಕಿಂತ ರಾಜಕೀಯವೇ ಮುಖ್ಯ. ರೈತರ ಸಮಸ್ಯೆಗಳನ್ನು ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕಿರುವುದು ರಾಜ್ಯ ಸರ್ಕಾರದ ಜವಾಬ್ದಾರಿ. ನೀತಿ ಆಯೋಗದ ಸಭೆಗೆ ರೇವಂತ್ ರೆಡ್ಡಿ, ಸ್ಟಾಲಿನ್ ಸೇರಿದಂತೆ ಪಕ್ಕದ ರಾಜ್ಯಗಳ ಮುಖ್ಯಮಂತ್ರಿಗಳೆಲ್ಲ ಹೋಗುತ್ತಾರೆ. ಆದರೆ ನಮ್ಮ ರಾಜ್ಯದ ಮುಖ್ಯಮಂತ್ರಿ ಮಾತ್ರ ಗೈರಾಗುತ್ತಾರೆ.

ಮೈಸೂರಿನ ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಯಿಂದಾಗಿ ಅಪಾರ ಪ್ರಮಾಣದ ಸಾವು ನೋವು ಆದರೂ, ರಾಜ್ಯ ಸರ್ಕಾರ ಸ್ಪಂದಿಸಲಿಲ್ಲ. ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 293 ಕಿ.ಮೀ. ನಾಗರಹೊಳೆ ಅಭಯಾರಣ್ಯದ ಗಡಿ ಇದೆ. ಈ ಪೈಕಿ ಕುಟ್ಟ, ಹುಣಸೂರು ಭಾಗದಲ್ಲಿ ರೈಲ್ವೆ ಬ್ಯಾರಿಕೇಡ್, ಕಂದಕ ನಿರ್ಮಾಣ ಮಾಡಲಾಗಿದೆ. ರೈಲ್ವೆ ಬ್ಯಾರಿಕೇಡ್‌ ಗೆ ಮೂರು ಕಂಬಿಗಳನ್ನು ಅಳವಡಿಸುವಂತೆ ರೈತರು ಕೇಳುತ್ತಿದ್ದಾರೆ. ಮನವಿ ಪರಿಗಣಿಸುವಂತೆ ಸೂಚಿಸಲಾಗಿದೆ ಎಂದರು.

ಸುದ್ದಿಗೋಷ್ಠಿಯಲ್ಲಿ ನಗರ ಬಿಜೆಪಿ ಅಧ್ಯಕ್ಷ ಎಲ್. ನಾಗೇಂದ್ರ, ಜಿಲ್ಲಾಧ್ಯಕ್ಷ ಕೆ. ಸುಬ್ಬಣ್ಣ, ಶಾಸಕ ಟಿ.ಎಸ್‌. ಶ್ರೀವತ್ಸ, ಮಾಜಿ ಶಾಸಕ ಹರಷವರ್ಧನ್‌, ಅಲ್ಪಸಂಖ್ಯಾತ ಮೋರ್ಚಾ ರಾಜ್ಯಾಧ್ಯಕ್ಷ ಅನಿಲ್ ಥಾಮಸ್, ರೈತ ಮೋರ್ಚಾ ನಗರಾಧ್ಯಕ್ಷ ದೇವರಾಜು, ಗ್ರಾಮಾಂತರ ರೈತ ಮೋರ್ಚಾ ಅಧ್ಯಕ್ಷ ಮಿರ್ಲೆ ಶ್ರೀನಿವಾಸ್ ಗೌಡ, ಪ್ರಧಾನ ಕಾರ್ಯದರ್ಶಿಗಳಾದ ಗಿರಿಧರ್, ಕಿರಣ್ ಜೈ ರಾಮೇಗೌಡ, ವಕ್ತಾರ ದಯಾನಂದ್ ಪಟೇಲ್, ನಗರ ಮಾಧ್ಯಮ ಸಂಚಾಲಕ ಮಹೇಶ್ ರಾಜೇ ಅರಸ್, ಸಹ ಸಂಚಾಲಕರಾದ ಬಿ.ಎಂ. ಸಂತೋಷ್ ಕುಮಾರ್, ಎಸ್‌.ಬಿ. ಸುರೇಶ್‌ ಹಾಗೂ ರೈತ ಮೋರ್ಚಾ ಪದಾಧಿಕಾರಿಗಳು ಇದ್ದರು,

PREV

Recommended Stories

ಡಿಕೆಶಿ ಭೇಟಿಯಾದ್ರೂ ಸಿದ್ದುಗೇ ನಮ್ಮ ಬೆಂಬಲ: ಜಾರಕಿಹೊಳಿ
2028ಕ್ಕೆ ಕಾಂಗ್ರೆಸ್‌ ಅಧಿಕಾರಕ್ಕೆ ತರಲು ಸತೀಶ್‌ ಜತೆ ಚರ್ಚೆ : ಡಿಕೆ