ಎಸ್ಐಆರ್‌ ಬಾಕಿ ಮತದಾರರ ಮನೆಗೆ ಬಿಎಲ್‍ಒ ಭೇಟಿ

KannadaprabhaNewsNetwork |  
Published : Sep 29, 2026, 02:30 AM IST
 | Kannada Prabha

ಸಾರಾಂಶ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಜಿಲ್ಲೆಯಲ್ಲಿ ಈಗಾಗಲೇ ಮ್ಯಾಪಿಂಗ್ ಆಗದಿರುವ, ಮ್ಯಾಪಿಂಗ್‍ನಲ್ಲಿ ವ್ಯತ್ಯಾಸವಾಗಿದ್ದ ಸುಮಾರು 58,883 ಮತದಾರರಲ್ಲಿ, 44,444 ಮಂದಿಯ ಮಾಹಿತಿ ಪಡೆದು ವಿಚಾರಣೆ ಪೂರ್ಣಗೊಳಿಸಲಾಗಿದೆ. ಉಳಿದಂತೆ 14,439 ಮಂದಿ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ ನೀಡಿ ದಾಖಲೆಗಳನ್ನು ಪಡೆದು ಇಸಿಐ ನೆಟ್‍ನಲ್ಲಿ ಅಪ್‍ಲೋಡ್ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಜಿಲ್ಲೆಯಲ್ಲಿ ಈಗಾಗಲೇ ಮ್ಯಾಪಿಂಗ್ ಆಗದಿರುವ, ಮ್ಯಾಪಿಂಗ್‍ನಲ್ಲಿ ವ್ಯತ್ಯಾಸವಾಗಿದ್ದ ಸುಮಾರು 58,883 ಮತದಾರರಲ್ಲಿ, 44,444 ಮಂದಿಯ ಮಾಹಿತಿ ಪಡೆದು ವಿಚಾರಣೆ ಪೂರ್ಣಗೊಳಿಸಲಾಗಿದೆ. ಉಳಿದಂತೆ 14,439 ಮಂದಿ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ ನೀಡಿ ದಾಖಲೆಗಳನ್ನು ಪಡೆದು ಇಸಿಐ ನೆಟ್‍ನಲ್ಲಿ ಅಪ್‍ಲೋಡ್ ಮಾಡಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ತಿಳಿಸಿದ್ದಾರೆ.

ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ನಡೆಯುತ್ತಿದ್ದು, ಈಗಾಗಲೇ ಮ್ಯಾಪಿಂಗ್‍ನಲ್ಲಿ ವ್ಯತ್ಯಾಸ ಆಗಿರುವ ಸಂಬಂಧ ಪರಿಶೀಲನಾ ಕಾರ್ಯವು ನಡೆಯುತ್ತಿದ್ದು, ಬಾಕಿ ಇರುವ ಮತದಾರರ ಮನೆ ಮನೆಗೆ ಬಿಎಲ್‍ಒಗಳು ಭೇಟಿ ನೀಡಿ ಮಾಹಿತಿ ಪಡೆಯಲಿದ್ದು, ಈ ಅವಕಾಶವನ್ನು ಪಡೆದುಕೊಳ್ಳುವಂತಾಗಬೇಕು. ಆ ನಿಟ್ಟಿನಲ್ಲಿ ವಿವಿಧ ರಾಜಕೀಯ ಪಕ್ಷಗಳು ಸಹಕರಿಸುವಂತೆ ಜಿಲ್ಲಾಧಿಕಾರಿ ಅವರು ಕೋರಿದರು.

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಸಂಬಂಧ ವಿಶೇಷ ಅಭಿಯಾನವು ಆಗಸ್ಟ್, 29 ಮತ್ತು 30 ರಂದು, ಹಾಗೆಯೇ ಸೆಪ್ಟೆಂಬರ್, 19 ಮತ್ತು 20 ರಂದು ನಡೆದಿದ್ದು, ಆ ಸಂದರ್ಭದಲ್ಲಿಯೂ ಸಹ ನಮೂನೆ-6, 07 ಮತ್ತು 8 ರಲ್ಲಿ ಅರ್ಜಿ ಸಲ್ಲಿಸಿ ಮತದಾರರ ಪಟ್ಟಿಗೆ ಪರಿಷ್ಕರಣಾ ಕಾರ್ಯದಲ್ಲಿ ಕೈಜೋಡಿಸಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ ಸಂಬಂಧ ಆಗಸ್ಟ್, 29 ಮತ್ತು 30 ರಂದು ನಡೆದ ವಿಶೇಷ ಅಭಿಯಾನ ಸಂದರ್ಭದಲ್ಲಿ ನಮೂನೆ 6 ರಡಿ 398 ಅರ್ಜಿಗಳು ಸಲ್ಲಿಕೆಯಾಗಿದ್ದವು, ನಮೂನೆ-7 ಮತ್ತು 8 ರಡಿ 247 ಒಟ್ಟು 652 ಅರ್ಜಿಗಳು ಸಲ್ಲಿಕೆಯಾಗಿದ್ದವು ಎಂದು ಮಾಹಿತಿ ನೀಡಿದರು.

ಸೆ.19 ಮತ್ತು 20 ರಂದು ನಡೆದ ವಿಶೇಷ ಅಭಿಯಾನ ಸಂದರ್ಭದಲ್ಲಿ ನಮೂನೆ-6 ರಡಿ 507 ಅರ್ಜಿಗಳು ಸಲ್ಲಿಕೆಯಾಗಿದ್ದವು, ನಮೂನೆ 7 ರಡಿ 5 ಮತ್ತು ನಮೂನೆ 8 ರಡಿ 462 ಒಟ್ಟು 954 ಅರ್ಜಿಗಳು ಸಲ್ಲಿಕೆಯಾಗಿದ್ದವು ಎಂದು ಜಿಲ್ಲಾಧಿಕಾರಿ ತಿಳಿಸಿದರು.

2026ರ ಅ.1 ಅರ್ಹತಾ ದಿನಾಂಕವಾಗಿದ್ದು, ಕರಡು ಮತದಾರರ ಪಟ್ಟಿಯ ಪ್ರಕಟಣೆ ದಿನದಿಂದ (2026 ರ ಆಗಸ್ಟ್, 24 ರಿಂದ ಸೆ.23 ರವರೆಗೆ) ನಮೂನೆಯನ್ನು ಸ್ವೀಕರಿಸಲಾಗಿದ್ದು, ನಮೂನೆ 6 ರಡಿ 2388, ನಮೂನೆ 7 ರಡಿ 26, ನಮೂನೆ 8 ರಡಿ 3224 ಅರ್ಜಿಗಳು ಸ್ವೀಕರಿಸಲಾಗಿದ್ದು, ಒಟ್ಟು 5,638 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದರು.

2026 ರ ಆ.24 ರಂದು ಪ್ರಕಟಿಸಿದ ಕರಡು ಮತದಾರರ ಪಟ್ಟಿಯಂತೆ ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರದಲ್ಲಿ 567 ಮತಗಟ್ಟೆಗಳಿದ್ದು, 4,05,803 ಮತದಾರರು ಇದ್ದು, ಇವರಲ್ಲಿ 1,98,294 ಪುರುಷ, 2,07,505 ಮಹಿಳಾ ಮತದಾರರು ಮತ್ತು 4 ಇತರೆ ಮತದಾರರು ಇದ್ದಾರೆ ಎಂದು ವಿವರಿಸಿದರು.

ಒಟ್ಟಾರೆ ಜಿಲ್ಲೆಯ ಸಮಗ್ರ ಅಂತಿಮ ಮತದಾರರ ಪಟ್ಟಿಯು ಇದೇ ಅಕ್ಟೋಬರ್, 27 ರಂದು ಪ್ರಕಟಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಅವರು ಮಾಹಿತಿ ನೀಡಿದರು.

ಭಾರತೀಯ ಕಾಂಗ್ರೆಸ್ ಪಕ್ಷದ ಪ್ರತಿನಿಧಿ ತೆನ್ನಿರಾ ಮೈನಾ ಅವರು ಮಾತನಾಡಿ ಎಸ್‍ಐಆರ್ ಪ್ರಕ್ರಿಯೆ ಸರಿ ಇದ್ದರೂ ಸಹ, ಹಿರಿಯ ನಾಗರಿಕರಿಗೆ ನೋಟೀಸ್ ನೀಡಿ ಒಂದು ರೀತಿ ಮುಜುಗರ ಉಂಟು ಮಾಡಿರುವುದು ಸಮರ್ಥನೀಯವಲ್ಲ ಎಂದು ಪ್ರತಿಪಾದಿಸಿದರು.

ಬಿಜೆಪಿ ಪ್ರತಿನಿಧಿ ಸಜಿಲ್ ಕೃಷ್ಣ ಅವರು ಮಾತನಾಡಿ, ಎಸ್‍ಐಆರ್ ಪ್ರಕ್ರಿಯೆ ಸುಗಮವಾಗಿ ನಡೆಯುವಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಮತದಾರರ ಪಟ್ಟಿಯಲ್ಲಿ ಅರ್ಹರ ಹೆಸರು ಬಿಟ್ಟುಹೋಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ ಎಂದರು.

ಜಾತ್ಯಾತೀತ ಜನತಾ ದಳದ ಪ್ರತಿನಿಧಿ ಗುಲಾಬಿ ಜನಾರ್ಧನ, ಭಾರತೀಯ ಕಮ್ಯುನಿಸ್ಟ್ ಪಕ್ಷದ ರಮೇಶ್, ಚುನಾವಣಾ ತಹಸೀಲ್ದಾರ್ ಗುರುರಾಜ್, ಶಿರಸ್ತೆದಾರ್ ಮಹೇಶ್, ಅನಿಲ್ ಕುಮಾರ್ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವೈದ್ಯರ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಕ್ರಮ ಅಗತ್ಯ: ರಮಿತಾ
ಮೂಡ್ಲಕಟ್ಟೆ ನರ್ಸಿಂಗ್‌ ಕಾಲೇಜಿನಿಂದ ಆತ್ಮಹತ್ಯೆ ತಡೆ ಮಾಸಾಚರಣೆ