ಬ್ಲಾಕ್ ಕಾಂಗ್ರೆಸ್ ಪ್ರತಿಭಟನೆ । ರಾಜತಾಂತ್ರಿಕ ಪಾಸ್‌ಪೋರ್ಟ್ ವಜಾಕ್ಕೆ ಕೇಂದ್ರಕ್ಕೆ ಆಗ್ರಹ
ಕೇಂದ್ರ ಸರ್ಕಾರ ಸಂಸದ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ವಆಗೊಳಿಸಿ ಅವರನ್ನು ಬಂಧಿಸಲು ರಾಜ್ಯ ಸರ್ಕಾರಕ್ಕೆ ನೆರವಾಗಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಒತ್ತಾಯಿಸಿದರು.
ಪಟ್ಟಣದ ಅನಕೃ ವೃತ್ತದಲ್ಲಿ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಪ್ರಜ್ವಲ್ ರೇವಣ್ಣ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಮಾತನಾಡಿ, ಸಂಸದ ಪ್ರಜ್ವಲ್ ರೇವಣ್ಣ ಅವರು ಹೆಣ್ಣುಮಕ್ಕಳ ಮೇಲೆ ನೀಚ ಕೃತ್ಯ ಎಸಗಿದ್ದು, ಅವರಿಗೆ ನ್ಯಾಯ ಕೊಡಿಸಬೇಕಿದೆ. ಹಾಗಾಗಿ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ಅನ್ನು ಕೇಂದ್ರ ಸರ್ಕಾರ ವಜಾಗೊಳಿಸಿದರೆ ರಾಜ್ಯಸರ್ಕಾರ ಪ್ರಜ್ವಲ್ ರೇವಣ್ಣ ಇರುವಲ್ಲಿಗೆ ಹೋಗಿ ಬಂಧಿಸಲು ಸಹಾಯವಾಗುತ್ತದೆ. ಹಾಗಾಗಿ ಕೇಂದ್ರ ಕೂಡಲೇ ನೇರವಾಗಬೇಕು ಎಂದು ಒತ್ತಾಯಿಸಿದರು.‘ಪ್ರಜ್ವಲ್ ರೇವಣ್ಣ ಅವರೇ ಜಿಲ್ಲೆಯ ಮತದಾರರು ನಿಮಗೆ ಮತ ನೀಡಿ ಸಂಸದ ಮಾಡಿದ್ದು ಈ ನೀಚ ಕೆಲಸ ಮಾಡುವುದಕ್ಕಾ? ನೀವೇ ಬಂದು ಎಸ್ಐಟಿ ಮುಂದೆ ಶರಣಾದರೆ ಗೌರವವಾದರೂ ಉಳಿಯುತ್ತದೆ. ಇಲ್ಲವಾದರೆ ಜನರು ನಿಮ್ಮನ್ನು ತಿರಸ್ಕಾರ ಮಾಡುತ್ತಾರೆ. ಒಂದು ವೇಳೆ ಕೇಂದ್ರ ಸರ್ಕಾರ ಪ್ರಜ್ವಲ್ ರೇವಣ್ಣ ಅವರ ರಾಜತಾಂತ್ರಿಕ ಪಾಸ್‌ಪೋರ್ಟ್ ವಜಾ ಮಾಡದಿದ್ದರೆ ಉಗ್ರ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ’ ಎಂದು ಎಚ್ಚರಿಸಿದರು.