ಶಾಸಕರ ಬಗ್ಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ಆಕ್ರೋಶ

KannadaprabhaNewsNetwork |  
Published : Oct 15, 2026, 01:45 AM IST
14ಕೆಎಂಎನ್ ಡಿ25 | Kannada Prabha

ಸಾರಾಂಶ

ಜಿಪಂ, ತಾಪಂ ಮೀಸಲಾತಿಯಲ್ಲಿ ತಾಲೂಕಿನಲ್ಲಿ ಜಿಪಂ ಕ್ಷೇತ್ರಗಳ ಪೈಕಿ ಒಂದೇ ಒಂದು ಸಾಮಾನ್ಯ ಕ್ಷೇತ್ರ ಮಂಜೂರು ಮಾಡಿಸದ ಶಾಸಕರ ನಡೆ ಬಗ್ಗೆ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಎಚ್.ಕೃಷ್ಣೇಗೌಡ(ಕಿಟ್ಟಿ) ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ಪಾಂಡವಪುರ:

ಜಿಪಂ, ತಾಪಂ ಮೀಸಲಾತಿಯಲ್ಲಿ ತಾಲೂಕಿನಲ್ಲಿ ಜಿಪಂ ಕ್ಷೇತ್ರಗಳ ಪೈಕಿ ಒಂದೇ ಒಂದು ಸಾಮಾನ್ಯ ಕ್ಷೇತ್ರ ಮಂಜೂರು ಮಾಡಿಸದ ಶಾಸಕರ ನಡೆ ಬಗ್ಗೆ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಎಚ್.ಕೃಷ್ಣೇಗೌಡ(ಕಿಟ್ಟಿ) ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರಹಾಕಿದ್ದಾರೆ.

ತಾಲೂಕು ವ್ಯಾಪ್ತಿ ಐದು ಜಿಪಂ ಕ್ಷೇತ್ರಗಳ ಪೈಕಿ ಒಂದೇ ಒಂದು ಕ್ಷೇತ್ರವು ಸಾಮಾನ್ಯ ಕ್ಷೇತ್ರಕ್ಕೆ ಮೀಸಲಾಗಿಲ್ಲ. ಅದರಲ್ಲೂ ಚಿನಕುರಳಿ ಹೋಬಳಿಯಲ್ಲಿ ಯಾವುದೇ ಸಾಮಾನ್ಯ ಕ್ಷೇತ್ರಗಳಿಲ್ಲ. ಇದರಿಂದ ಅಸಮಾಧಾನಗೊಂಡಿರುವ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಕೃಷ್ಣೇಗೌಡ ಸಾಮಾಜಿಕ ಜಾಲತಾಣದಲ್ಲಿ ಶಾಸಕರ ವಿರುದ್ಧ ಕಿಡಿಕಾರಿದ್ದಾರೆ.

ಶಾಸಕ ದರ್ಶನ್ ಪುಟ್ಟಣ್ಣಯ್ಯನವರೇ, ಚಿನಕುರಳಿ ಹೋಬಳಿಯಲ್ಲಿ ಸಾಮಾನ್ಯ ವರ್ಗದ ಜನರಿಗೆ ಮೀಸಲಿಡುವಂತಹ ಯಾವುದೇ ಕ್ಷೇತ್ರಗಳು ಇರಲಿಲ್ಲವೇ. ಸಾಮಾನ್ಯ ವರ್ಗದ ಗಂಡಸರು ಯಾರು ಇಲ್ವವೇ? ಎಂಬುದಾಗಿ ಸಾಮಾಜಿಕ ಜಾಲತಾಣದಲ್ಲಿ ಮೆಸೆಜ್ ಹಾಕಿದ್ದಾರೆ. ಇದು ಸಾಕಷ್ಟು ವೈರಲ್ ಆಗಿ ಚರ್ಚೆಗೂ ಗ್ರಾಸವಾಗಿದೆ.

ಕಾಂಗ್ರೆಸ್ ಬೆಂಬಲಿತ ಸರ್ವೋದಯ ಕರ್ನಾಟಕ ಪಕ್ಷದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರ ಬಗ್ಗೆ ತಮ್ಮ ಬೆಂಬಲಿತ ಪಕ್ಷದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರೇ ಆಕ್ರೋಶ ಹೊರಹಾಕಿರುವುದು ಪಕ್ಷದೊಳಗೆ ಎಲ್ಲವು ಸರಿಇಲ್ಲ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಗೆದ್ದ ಬಳಿಕ ಕಾಂಗ್ರೆಸ್ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಕೆಲಸ ಮಾಡುತ್ತಿದ್ದಾರೆ ಎನ್ನುವ ಬಗ್ಗೆಯೂ ಈ ಹಿಂದೆ ಹಲವು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಹೊರಹಾಕುತ್ತಿದ್ದಾರೆ. ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಜಿ ಆಹ್ವಾನ

ಮಂಡ್ಯ: ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಅರ್ಹ ವ್ಯಕ್ತಿಗಳಿಗೆ ಮಂಡ್ಯ ಜಿಲ್ಲಾಡಳಿತದಿಂದ ಪ್ರತಿವರ್ಷ ನೀಡಲಾಗುವ ‘ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ಗೆ ಈ ಬಾರಿಯೂ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್ 1 ರಂದು ಆಚರಿಸಲಿರುವ 71ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ನೇ ಸಾಲಿನ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅರ್ಹರು ಅರ್ಜಿ ಸಲ್ಲಿಸಬಹುದು. ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಆಸಕ್ತ ಹಾಗೂ ಅರ್ಹ ವ್ಯಕ್ತಿಗಳು ತಮ್ಮ ಸೇವಾ ವಿವರಗಳನ್ನು ಒಳಗೊಂಡ ಪ್ರಸ್ತಾವನೆಯನ್ನು ಅ.22ರೊಳಗೆ ಮಂಡ್ಯ ನಗರದ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಗೆ ಸಲ್ಲಿಸಬಹುದು ಎಂದು ಜಿಲ್ಲಾ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದಸರಾ ಸಂಭ್ರಮಕ್ಕೆ ಮತ್ಸ್ಯಲೋಕದ ಮೆರುಗು
ಸಿದ್ದರಾಮಯ್ಯ ನಿವಾಸಕ್ಕೆ ಸಚಿವ ಕೆ.ಎಸ್.ಬಸವಂತಪ್ಪ ಭೇಟಿ