ಸಕ್ಕರೆ ಕಾರ್ಖಾನೆ ವಿರುದ್ಧದ ಆದೇಶಕ್ಕೆ ತಡೆ: ಆಕ್ರೋಶ

KannadaprabhaNewsNetwork |  
Published : Nov 21, 2024, 01:00 AM IST
20ಎಚ್.ಎಲ್.ವೈ-1: ಕುರುಬೂರ ಶಾಂತಕುಮಾರ  | Kannada Prabha

ಸಾರಾಂಶ

ರಾಜ್ಯ ಕಬ್ಬು ಅಭಿವೃದ್ಧಿ ಸಕ್ಕರೆ ನಿರ್ದೇಶನಾಲಯದ ಆಯುಕ್ತರಿಗೆ ಪತ್ರವನ್ನು ಬರೆದಿದ್ದಾರೆ.

ಹಳಿಯಾಳ: ಈಐಡಿ ಪ್ಯಾರಿ ಸಕ್ಕರೆ ಕಾರ್ಖಾನೆಯವರು ರೈತರಿಗೆ ವಂಚಿಸಿದ್ದು, ಇದೊಂದು ಕ್ರಿಮಿನಲ್ ಅಪರಾಧ ಎಂದು ಹೊರಡಿಸಿದ ಆದೇಶವು ಗೊಂದಲವನ್ನು ಸೃಷ್ಟಿಸಿದ್ದು, ತಾವು ಆದೇಶ ಜಾರಿ ಮಾಡಿ, ಮತ್ತೆ ಆದೇಶವನ್ನು ತಡೆಹಿಡಿದಿರುವ ಉದ್ದೇಶವೇನು?, ಯಾವ ಕಾರಣಕ್ಕಾಗಿ ಆದೇಶವನ್ನು ತಡೆ ಹಿಡಿದಿರುವಿರಿ ಅದನ್ನು ಲಿಖಿತವಾಗಿ ತಿಳಿಸಬೇಕು ಎಂದು ರಾಜ್ಯ ಕಬ್ಬು ಅಭಿವೃದ್ಧಿ ಸಕ್ಕರೆ ನಿರ್ದೇಶನಾಲಯದ ಆಯುಕ್ತರನ್ನು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ರಾಜ್ಯ ಕಬ್ಬು ಅಭಿವೃದ್ಧಿ ಸಕ್ಕರೆ ನಿರ್ದೇಶನಾಲಯದ ಆಯುಕ್ತರಿಗೆ ಪತ್ರವನ್ನು ಬರೆದಿರುವ ಅವರು, ಆ. 22ರಂದು ತಾವು ಬರೆದ ಆದೇಶದಂತೆ ಈಐಡಿ ಪ್ಯಾರಿ ಸಕ್ಕರೆ ಕಾರ್ನೆನೆಯವರು ರೈತರಿಗೆ ಬಾಕಿ ಹಣವನ್ನು ಪಾವತಿಸಿಯೇ ಕಾರ್ಕಾನೆ ಆರಂಭಿಸಬೇಕು ಎಂದು ಉಲ್ಲೇಖಿಸಿದ್ದಿರಿ. ತಮ್ಮ ಅದೇಶದ ಬಗ್ಗೆ ಉತ್ತರ ಕನ್ನಡ ಜಿಲ್ಲಾಧಿಕಾರಿಗಳಿಗೂ ತಿಳಿಸಿದ್ದೇವೆ. ಆದರೆ ತಾವು ಹೊರಡಿಸಿದ ಆದೇಶವನ್ನು ತಡೆಹಿಡಿಯಲಾಗಿದೆ ಎಂದು ಕಾರ್ಖಾನೆಯವರು ಜಿಲ್ಲಾಧಿಕಾರಿಗಳಿಗೆ ಬರೆದು ಕೊಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಕುರಿತು ಜಿಲ್ಲಾಧಿಕಾರಿಗಳು ತಮಗೆ ಸಮಜಾಯಿಷಿ ತಿಳಿಸಲು ಪತ್ರ ಬರೆದಿದ್ದು, ಇದಕ್ಕೆ ಕಾರಣವೇನೆಂದು ಆಯುಕ್ತರಿಗೆ ಪ್ರಶ್ನಿಸಿದ್ದಾರೆ.

24ರಂದು ಭಟ್ಕಳದಲ್ಲಿ ವೈದ್ಯಕೀಯ ಶಿಬಿರ

ಭಟ್ಕಳ: ತಾಲೂಕು ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘ, ಕ್ರಿಯಾಶೀಲ ಗೆಳೆಯರ ಬಳಗ ನೇತೃತ್ವದಲ್ಲಿ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ನ. 24ರಂದು ಬೆಳಗ್ಗೆ 9 ಗಂಟೆಯಿಂದ 12 ಗಂಟೆಯವರೆಗೆ ಸರ್ಕಾರಿ ಆಸ್ಪತ್ರೆಯಲ್ಲಿ ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ತಜ್ಞ ವೈದ್ಯರ ತಂಡದಿಂದ ವೈದ್ಯಕೀಯ ಶಿಬಿರ ನಡೆಯಲಿದೆ.ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೆ.ಎಸ್. ಹೆಗ್ಡೆ, ಆಸ್ಪತ್ರೆಯ ಮಾರ್ಕೆಟಿಂಗ್ ವಿಭಾಗದ ವ್ಯವಸ್ಥಾಪಕ ಜೈಸನ್ ಅವರು, ಶಿಬಿರದಲ್ಲಿ ಕೆ.ಎಸ್. ಹೆಗ್ಡೆ ಆಸ್ಪತ್ರೆಯ ಎಲುಬು ಮತ್ತು ಕೀಲು ತಜ್ಞ ಡಾ. ವಿಕ್ರಮ್ ಶೆಟ್ಟಿ, ಜನರಲ್ ಸರ್ಜನ್ ಡಾ. ಅಭಿಜಿತ್ ಎಸ್ ಶೆಟ್ಟಿ, ಎಲುಬು ಮತ್ತು ಕೀಲು ತಜ್ಞ ಡಾ. ಪೃಥ್ವಿ ಕೆ.ಪಿ., ಪ್ಲಾಸ್ಟಿಕ್ ಸರ್ಜನ್ ಡಾ. ಭರತ್ ಜೆ ನಾಯ್ಕ ಮುಂತಾದ ವೈದ್ಯರ ತಂಡ ವೈದ್ಯಕೀಯ ತಪಾಸಣೆ, ಅಗತ್ಯ ಸಲಹೆ ನೀಡಲಿದ್ದಾರೆ.ಕೆ.ಎಸ್. ಹೆಗ್ಡೆ ಆಸ್ಪತ್ರೆಯಿಂದ ಕ್ಷೇಮ ಹೆಲ್ತ್ ಕಾರ್ಡ್ ಎನ್ನುವ ವಿಮಾ ಯೋಜನೆಯೂ ಲಭ್ಯವಿದ್ದು, ಶಿಬಿರದಲ್ಲಿ ಆಸಕ್ತರು ವೈಯಕ್ತಿಕ ಮತ್ತು ಕುಟುಂಬ ಸದಸ್ಯರ ಆರೋಗ್ಯ ವಿಮಾ ಕೂಡ ಮಾಡಿಸಬಹುದು. ವಿಮಾ ಯೋಜನೆಗೆ ಆಧಾರ ಮತ್ತು ರೇಶನ್ ಕಾರ್ಡ್‌ ಝೆರಾಕ್ಸ್‌ ಪ್ರತಿ ಕಡ್ಡಾಯವಾಗಿದೆ ಎಂದರು.

ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಸವಿತಾ ಕಾಮತ್ ಮಾತನಾಡಿದರು. ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಪ್ರಧಾನ ಕಾರ್ಯದರ್ಶಿ ಮನಮೋಹನ ನಾಯ್ಕ, ಕ್ರಿಯಾಶೀಲ ಗೆಳೆಯರ ಸಂಘದ ಅಧ್ಯಕ್ಷ ದೀಪಕ ನಾಯ್ಕ, ಪ್ರಧಾನ ಕಾರ್ಯದರ್ಶಿ ಪಾಂಡುರಂಗ ನಾಯ್ಕ ಮುಂತಾದವರಿದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ