ಕಾರ್ಕಳ : ಶ್ರೀ ಭುವನೇಂದ್ರ ಕಾಲೇಜು ಕಾರ್ಕಳದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ, ಐಕ್ಯೂಎಸಿ ಹಾಗೂ ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ ಮತ್ತು ವಿವಿಧ ಸಂಘ- ಸಂಸ್ಥೆಗಳ ಆಶ್ರಯದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಯಿತು.ಶಿಬಿರವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಉಡುಪಿ ಅಜ್ಜರಕಾಡು ಜಿಲ್ಲಾ ರಕ್ತ ನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ವೀಣಾ ಅವರು ರಕ್ತದಾನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ವಿವರಿಸಿದರು. ರಕ್ತದಾನವು ಜೀವ ಉಳಿಸುವ ಮಹತ್ವದ ಕಾರ್ಯವಾಗಿದ್ದು, ಯುವಜನತೆ ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ತಿಳಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಡಾ. ಮಂಜುನಾಥ್ ಎ. ಕೋಟ್ಯಾನ್ ಅವರು ಇಂದಿನ ಆಧುನಿಕ ಯುಗದಲ್ಲಿ ರಕ್ತದಾನದ ಅವಶ್ಯಕತೆಯನ್ನು ವಿವರಿಸಿ, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲು ಮುಂದಾಗಬೇಕು ಎಂದು ಕರೆ ನೀಡಿದರು.ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ರೋಟರಿ ಕ್ಲಬ್ ಕಾರ್ಕಳದ ಅಧ್ಯಕ್ಷರಾದ ರೊ. ನವೀನ್ ಚಂದ್ರ ಶೆಟ್ಟಿ ಅವರು ಕಾರ್ಯಕ್ರಮದ ಯಶಸ್ಸಿಗೆ ಶುಭ ಹಾರೈಸಿದರು.ಈ ಸಂದರ್ಭದಲ್ಲಿ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಡಾ. ಈಶ್ವರ ಭಟ್ ಪಿ., ರೋಟರಿ ಕ್ಲಬ್ ಕಾರ್ಕಳ ರಾಕ್ ಸಿಟಿ ಅಧ್ಯಕ್ಷರಾದ ರೊ. ಸುರೇಂದ್ರ ನಾಯಕ್, ಜೆಸಿಐ ಕಾರ್ಕಳ ಅಧ್ಯಕ್ಷರಾದ ಅವಿನಾಶ್ ಶೆಟ್ಟಿ, ರೋಟರಾಕ್ಟ್ ಕ್ಲಬ್ ಕಾರ್ಕಳ ಅಧ್ಯಕ್ಷರಾದ ಸಂದೇಶ್ ಹಾಗೂ ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳದ ಪರವಾಗಿ ಆಶ್ಲಾನ್ ಅವರು ಉಪಸ್ಥಿತರಿದ್ದರು.ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ ಶಂಕರ್ ಕುಡ್ವ ಅವರು ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.