ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

KannadaprabhaNewsNetwork |  
Published : Jun 13, 2024, 12:47 AM IST
ರಕ್ತದಾನದಿಂದ ಮೂರು ಜೀವಗಳನ್ನು ಉಳಿಸುವುದರೊಂದಿಗೆ, ದಾನಿ ಉತ್ತಮ ಅರೋಗ್ಯವನ್ನು ಕಾಪಾಡಿಕೊಳ್ಳಬಹುದು- ಸೋಮವಾರಪೇಟೆ ಜೆಎಂಎಫ್‍ಸಿಯ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಕೆ.ಗೋಪಾಲಕೃಷ್ಣ | Kannada Prabha

ಸಾರಾಂಶ

ಜೇಸಿಐ ಸೋಮವಾರಪೇಟೆ ಪುಷ್ಪಗಿರಿ, ಕೊಡಗು ಜಿಲ್ಲಾ ರಕ್ತನಿಧಿ ಘಟಕ ಮತ್ತು ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ವಿಶ್ವರಕ್ತದಾನಿಗಳ ದಿನದ ಅಂಗವಾಗಿ ಮಂಗಳವಾರ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು. 64 ಮಂದಿ ರಕ್ತದಾನ ಮಾಡಿದರು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ರಕ್ತದಾನದಿಂದ ಮೂರು ಜೀವಗಳನ್ನು ಉಳಿಸುವುದರೊಂದಿಗೆ, ದಾನಿ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಸೋಮವಾರಪೇಟೆ ಜೆಎಂಎಫ್‍ಸಿಯ ಪ್ರಧಾನ ಸಿವಿಲ್ ನ್ಯಾಯಾಧೀಶ ಕೆ.ಗೋಪಾಲಕೃಷ್ಣ ಹೇಳಿದ್ದಾರೆ.

ಜೇಸಿಐ ಸೋಮವಾರಪೇಟೆ ಪುಷ್ಪಗಿರಿ, ಕೊಡಗು ಜಿಲ್ಲಾ ರಕ್ತನಿಧಿ ಘಟಕ ಮತ್ತು ಯಡೂರು ಬಿಟಿಸಿಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಆಶ್ರಯದಲ್ಲಿ ವಿಶ್ವರಕ್ತದಾನಿಗಳ ದಿನದ ಅಂಗವಾಗಿ ಮಂಗಳವಾರ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ರಕ್ತದಾನ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

ರಕ್ತದಾನದಿಂದ ದಾನಿಯ ದೇಹದಲ್ಲಿ ಹೊಸ ರಕ್ತ ಉತ್ಪತಿಯಾಗುತ್ತದೆ. ದೇಹವು ಹೊಸಕೋಶಗಳನ್ನು ಉತ್ಪಾದಿಸುತ್ತದೆ ಮತ್ತು ಅದನ್ನು ತಾಜಾಗೊಳಿಸುತ್ತದೆ ಎಂದು ಹೇಳಿದರು.

ಶರೀರದಲ್ಲಿ ರಕ್ತದ ಚಲನೆಯಿಲ್ಲದೆ ಬುದಕಲು ಸಾಧ್ಯವಿಲ್ಲ. ಅಪಘಾತ, ಶಸ್ತ್ರಚಿಕಿತ್ಸೆ, ರಕ್ತಹೀನತೆ, ಸಾಂಕ್ರಾಮಿಕ ರೋಗಗಳು ತುತ್ತಾದ ಸಂದರ್ಭ ರಕ್ತದ ಅವಶ್ಯಕತೆ ಇರುತ್ತದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದಿದ್ದರೆ ಜೀವಕ್ಕೆ ಅಪಾಯವಿರುತ್ತದೆ. ರಕ್ತದಾನಿಗಳೇ ಅವರ ಜೀವ ಉಳಿಸಬೇಕು. ರಕ್ತದಾನದ ಬಗ್ಗೆ ಜಾಗೃತಿ ಮೂಡಬೇಕು ಎಂದು ಹೇಳಿದರು.

ಜಿಲ್ಲಾ ರಕ್ತನಿಧಿ ಘಟಕದ ವೈದ್ಯಾಧಿಕಾರಿ ಕರುಂಬಯ್ಯ ಮಾತನಾಡಿ, ರಕ್ತಕ್ಕೆ ಪರ್ಯಾಯ ಯಾವುದು ಇಲ್ಲ. ರಕ್ತದಾನಿಗಳೇ ರಕ್ತ ನೀಡಬೇಕಾಗಿದೆ. ಡೆಂಘೀ, ಅಪಘಾತ, ಹೆರಿಗೆ ಸೇರಿದಂತೆ ಅನೇಕ ಕಾರಣಗಳಿಗೆ ಜಿಲ್ಲಾಸ್ಪತ್ರೆಗೆ ಹೆಚ್ಚಿನ ರಕ್ತದ ಬೇಡಿಕೆಯಿದೆ ಎಂದರು.

ರಕ್ತದ ಕೊರತೆಯಿಂದ ಯಾರೂ ಜೀವ ಕಳೆದುಕೊಳ್ಳಬಾರದು. ಇನ್ನು ಹೆಚ್ಚಿನ ದಾನಿಗಳು ರಕ್ತದಾನ ಮಾಡಬೇಕು ಎಂದು ಮನವಿ ಮಾಡಿದರು.

ರಕ್ತದಾನದ ಬಗ್ಗೆ ಭಯ, ಮೂಡನಂಬಿಕೆ, ಕೀಳರಿಮೆ ಬೇಡ. ರಕ್ತದಾನ ಮಾಡುವುದರಿಂದ ಹೃದಯ ಸಂಬಂಧಿ ಕಾಯಿಲೆಗಳಿಂದ ಬಚಾವಾಗಬಹುದು. ಜೊತೆಯಲ್ಲಿ ಅರೋಗ್ಯ ವೃದ್ಧಿಸುತ್ತದೆ. ಕೊಟ್ಟ ರಕ್ತ 24 ಗಂಟೆಗಳಲ್ಲಿ ದೇಹದಲ್ಲಿ ಉತ್ಪತ್ತಿಯಾಗುತ್ತದೆ. ಆರೋಗ್ಯವಂತರು 3 ತಿಂಗಳಿಗೊಮ್ಮೆ ಯಾವುದೇ ಆತಂಕವಿಲ್ಲದೆ ರಕ್ತದಾನ ಮಾಡಬಹುದು ಎಂದು ಹೇಳಿದರು.

ಹೆಚ್ಚು ಬಾರಿ ರಕ್ತದಾನ ಮಾಡಿದ ಫೋಟೋ ಗ್ರಾಫರ್ ಸಾಲೋಮನ್ ಡೇವಿಡ್, ವಕೀಲ ಎನ್.ಆರ್.ರೂಪಾ ಅವರನ್ನು ಸನ್ಮಾನಿಸಲಾಯಿತು.

ಜೇಸಿಐ ಅಧ್ಯಕ್ಷ ಎಸ್.ಆರ್.ವಸಂತ್ ಅಧ್ಯಕ್ಷತೆಯಲ್ಲಿ ವಹಿಸಿದ್ದರು. ಬಿಟಿಸಿಜಿ ಕಾಲೇಜಿನ ಪ್ರಾಂಶುಪಾಲ ಧನಲಕ್ಷ್ಮೀ, ವಕೀಲರ ಸಂಘದ ಅಧ್ಯಕ್ಷ ಕಾಟ್ನಮನೆ ವಿಠಲ್‍ಗೌಡ, ಸಹಾಯಕ ಆಡಳಿತಾಧಿಕಾರಿ ಮೀನಾಕ್ಷಿ, ಸಂಸ್ಥೆಯ ಕಾರ್ಯದರ್ಶಿ ಜಗದಾಂಬಾ ಇದ್ದರು. 64 ಮಂದಿ ರಕ್ತದಾನ ಮಾಡಿದರು.

PREV

Recommended Stories

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ