ಸೋಮವಾರಪೇಟೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ

KannadaprabhaNewsNetwork |  
Published : Feb 22, 2024, 01:49 AM IST
ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ  | Kannada Prabha

ಸಾರಾಂಶ

ಕೊಡಗು ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಎಸ್‍ವೈಎಸ್ ಮತ್ತು ಎಸ್‍ಎಸ್‍ಎಫ್ ಸೋಮವಾರಪೇಟೆ ಸರ್ಕಲ್ ವತಿಯಿಂದ ಬುಧವಾರ ಸೋಮವಾರಪೇಟೆ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು.

ಕನ್ನಡಪ್ರಭ ವಾರ್ತೆ ಸೋಮವಾರಪೇಟೆ

ಎಸ್‍ವೈಎಸ್ ಮತ್ತು ಎಸ್‍ಎಸ್‍ಎಫ್ ಸೋಮವಾರಪೇಟೆ ಸರ್ಕಲ್ ವತಿಯಿಂದ ಕೊಡಗು ಜಿಲ್ಲಾ ರಕ್ತನಿಧಿ ಕೇಂದ್ರದ ಸಹಯೋಗದಲ್ಲಿ ಬುಧವಾರ ಇಲ್ಲಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಿತು.ಶಿಬಿರಕ್ಕೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ. ಕರುಂಬಯ್ಯ ಚಾಲನೆ ನೀಡಿ ಮಾತನಾಡಿ, ಹಿಂದೆಂದಿಗಿಂತಲೂ ಜಿಲ್ಲೆಯಲ್ಲಿ ರಕ್ತದ ಬೇಡಿಕೆ ಹೆಚ್ಚಿದ್ದು, ಸಂಗ್ರಹ ಕಡಿಮೆಯಾಗುತ್ತಿರುವುದರಿಂದ ತುರ್ತು ಸಂದರ್ಭದಲ್ಲಿ ಹೆಚ್ಚಿನ ಸಮಸ್ಯೆಯಾಗುತ್ತಿದೆ. ಎರಡು ಮೂರು ದಿನಗಳಿಗೊಮ್ಮೆಯಾದರೂ ರಕ್ತದಾನ ಶಿಬಿರಗಳು ನಡೆದಲ್ಲಿ ಸಮಸ್ಯೆಯಿಂದ ಪಾರಾಗಬಹುದು ಎಂದು ತಿಳಿಸಿದರು.

ಜಿಲ್ಲೆಯವರೊಂದಿಗೆ ಹೊರ ಜಿಲ್ಲೆಯಿಂದಲೂ ಸಾಕಷ್ಟು ರೋಗಿಗಳು ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗೆ ಆಗಮಿಸುತ್ತಿರುವುದರಿಂದ 200 ಯೋನಿಟ್ ರಕ್ತದ ಬೇಡಿಕೆಯಿಂದ 500ಕ್ಕೂ ಹೆಚ್ಚಿನ ಯೂನಿಟ್ ರಕ್ತ ಬೇಕಾಗಿದೆ. ಎಲ್ಲ ಗುಂಪಿನ ರಕ್ತವನ್ನು ಸಂಗ್ರಹ ಮಾಡಬೇಕಿರುವುದರಿಂದ ಕೊರತೆ ಹೆಚ್ಚಾಗಿದೆ ಎಂದು ಅವರು ಹೇಳಿದರು.

ರಕ್ತದಾನದಿಂದ ನಮ್ಮಲ್ಲಿ ಯಾವುದಾದರೂ ಕಾಯಿಲೆಗಳಿದ್ದಲ್ಲಿ ಕಂಡುಕೊಳ್ಳಬಹುದು. ಈ ಹಿನ್ನೆಲೆಯಲ್ಲಿ ಆರೋಗ್ಯವಂತರು ವರ್ಷಕ್ಕೆ ಮೂರು ಬಾರಿಯಾದರೂ ರಕ್ತದಾನ ಮಾಡಬಹುದು. ಜನರಲ್ಲಿ ಅಡಗಿದ್ದ ಮೂಢನಂಬಿಕೆ, ಭಯ ಮತ್ತು ಆತಂಕವನ್ನು ಬಿಟ್ಟು ಹೆಚ್ಚಾಗಿ ರಕ್ತದಾನಕ್ಕೆ ಮುಂದಾಗುತ್ತಿರುವುದು ಉತ್ತಮ ಬೆಳವಣಿಗೆ. ಕಾಲೇಜಿನ ವಿದ್ಯಾರ್ಥಿಗಳಲ್ಲೂ ರಕ್ತದಾನ ಬಗ್ಗೆ ಹೆಚ್ಚಿನ ಅರಿವುದ ಮೂಡಿಸಲಾಗುತ್ತಿದ್ದು, ಯುವ ಜನರು ಇನ್ನೂ ಹೆಚ್ಚಾಗಿ ರಕ್ತದಾನದಲ್ಲಿ ಪಾಲ್ಗೊಂಡು ಮತ್ತೊಂದು ಜೀವದ ಉಳಿವಿಗೆ ಮುಂದಾಗಬೇಕೆಂದರು.

ಅಧ್ಯಕ್ಷತೆ ವಹಿಸಿದ್ದ ಎಸ್‍ವೈಎಸ್ ಸೋಮವಾರಪೇಟೆ ಸರ್ಕಲ್ ಅಧ್ಯಕ್ಷ ತಣೀರುಹಳ್ಳದ ಶಾಫಿ ಸಹದಿ ಮಾತನಾಡಿ, ನಮ್ಮ ಸಂಸ್ಥೆ ದೇಶದ ಸಂವಿಧಾನವನ್ನು ಗೌರವಿಸುವ ಮೂಲಕ ಸಮಾಜ ಸೇವೆ ಮಾಡಿಕೊಂಡು ಬರುತ್ತಿದೆ. ಕೆಲವು ಸಂಘಟನೆಗಳು ಇಸ್ಲಾಂ ಹೆಸರಿನಲ್ಲಿ ಸಂವಿಧಾನ ವಿರೋಧಿ ಕೆಲಸ ಮಾಡುತ್ತಿರುವುದು, ಕುರಾನ್ ಮತ್ತು ಪ್ರವಾದಿ ವಿರೋಧಿ ಕೆಲಸವಾಗಿದೆ. ಎಲ್ಲರೂ ಒಂದಾಗಿ ಬದುಕಬೇಕೆನ್ನುವ ಉದ್ದೇಶದಿಂದ ಕಳೆದ ಹಲವಾರು ವರ್ಷಗಳಿಂದ ಯಾವುದೇ ಕಪ್ಪುಚುಕ್ಕಿ ಇರದರೀತಿಯಲ್ಲಿ ಸಾಮಜಮುಖಿ ಕೆಲಸಗಳನ್ನು ಎಸ್‍ವೈಎಸ್ ಮತ್ತು ಎಸ್‍ಎಸ್‍ಎಫ್ ಮಾಡಿಕೊಂಡು ಬರುತ್ತಿದೆ ಎಂದರು.

ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಕೆ.ಎನ್. ದೀಪಕ್, ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಸ್.ಡಿ. ವಿಜೇತ, ವಾಹನ ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಬಾಲಕೃಷ್ಣ, ಆಟೋಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷ ಗಂಗಾಧರ್ ಮತ್ತು ಇಂದಿರಾ ಗಾಂಧಿ ಅಭಿಮಾನಿಗಳ ಸಂಘದ ಅಧ್ಯಕ್ಷ ಎಚ್.ಎ. ನಾಗರಾಜು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!