ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ

KannadaprabhaNewsNetwork |  
Published : Oct 13, 2026, 02:45 AM IST
ಫೋಟೋ: ೧೦ಪಿಟಿಆರ್-ಬಿಜೆಪಿ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಪುತ್ತೂರು ಬಿಜೆಪಿ ಯುವಮೋರ್ಚಾದಿಂದ ರಕ್ತದಾನ ಶಿಬಿರ ನಡೆಯಿತು. | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿರುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಪುತ್ತೂರು ಬಿಜೆಪಿ ಯುವಮೋರ್ಚಾದ ಗ್ರಾಮಾಂತರ ಹಾಗೂ ನಗರ ಮಂಡಲದ ವತಿಯಿಂದ ಶನಿವಾರ ರಕ್ತದಾನ ಶಿಬಿರ ನಡೆಯಿತು.

ಕನ್ನಡಪ್ರಭವಾರ್ತೆ ಪುತ್ತೂರು

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡಿರುವ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಪುತ್ತೂರು ಬಿಜೆಪಿ ಯುವಮೋರ್ಚಾದ ಗ್ರಾಮಾಂತರ ಹಾಗೂ ನಗರ ಮಂಡಲದ ವತಿಯಿಂದ ಶನಿವಾರ ರಕ್ತದಾನ ಶಿಬಿರ ನಡೆಯಿತು.

ಪುತ್ತೂರಿನ ರೋಟರಿ ಬ್ಲಡ್ ಬ್ಯಾಂಕ್‌ನಲ್ಲಿ ನಡೆದ ಈ ಶಿಬಿರದಲ್ಲಿ ಯುವಮೋರ್ಚಾದ ಪದಾಧಿಕಾರಿಗಳು ಹಾಗೂ ಸದಸ್ಯರು ಸ್ವಯಂಪ್ರೇರಿತವಾಗಿ ರಕ್ತದಾನ ಮಾಡುವ ಮೂಲಕ ರಕ್ತದಾನದ ಮಹತ್ವವನ್ನು ಸಾರಿದರು. ಸೇವಾ ಮನೋಭಾವದೊಂದಿಗೆ ಸಮಾಜಮುಖಿ ಕಾರ್ಯದಲ್ಲಿ ಭಾಗವಹಿಸಿ, ಅಗತ್ಯವಿರುವ ರೋಗಿಗಳಿಗೆ ನೆರವಾಗುವ ಸಂದೇಶವನ್ನು ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರೆಮಾರು, ನಗರ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ., ಪ್ರಧಾನ ಕಾರ್ಯದರ್ಶಿ ಶಶಿಧರ್ ನಾಯಕ್, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾರ್ತ, ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ನಂದನ್ ಮಲ್ಯ, ಸಾಜ ರಾಧಾಕೃಷ್ಣ ಆಳ್ವ, ಜೀವಂಧರ್ ಜೈನ್, ಪುರುಷೋತ್ತಮ ಮುಂಗ್ಲಿಮನೆ, ಸುರೇಶ್ ಆಳ್ವ, ಪುತ್ತೂರು ಬಿಜೆಪಿ ಯುವಮೋರ್ಚಾ ನಗರ ಮಂಡಲ ಅಧ್ಯಕ್ಷ ನಿತೇಶ್ ಕಲ್ಲೇಗ, ಗ್ರಾಮಾಂತರ ಮಂಡಲ ಅಧ್ಯಕ್ಷ ಶಿಶಿರ್ ಪೆರ್ವೋಡಿ ಸೇರಿದಂತೆ ಯುವಮೋರ್ಚಾದ ಪದಾಧಿಕಾರಿಗಳು, ಸದಸ್ಯರು ಹಾಗೂ ರೋಟರಿ ಬ್ಲಡ್ ಬ್ಯಾಂಕ್‌ನ ಸಿಬ್ಬಂದಿ ಉಪಸ್ಥಿತರಿದ್ದರು.

ಸೇವಾ ಸಂಕಲ್ಪ ಅಭಿಯಾನದ ಮೂಲಕ ರಕ್ತದಾನದ ಮಹತ್ವ ಸಾರಿದ ಪುತ್ತೂರು ಬಿಜೆಪಿ ಯುವಮೋರ್ಚಾದ ಈ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್‌ ಅವ್ಯವಸ್ಥೆ: ಸಿಬ್ಬಂದಿಗೆ ತರಾಟೆ
ಏತ ನೀರಾವರಿ ಯೋಜನೆಗಳಿಗೆ ಸಿಎಂ ಚಾಲನೆ