ಕನ್ನಡಪ್ರಭ ವಾರ್ತೆ ಆಲೂರು
ಆಲೂರು ತಾಲೂಕು ರೆಡ್ ಕ್ರಾಸ್ ಘಟಕ, ಪ್ರಾಥಮಿಕ ಆರೋಗ್ಯ ಕೇಂದ್ರ ರಾಯರ ಕೊಪ್ಪಲು, ಹಾಸನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ರಕ್ತ ನಿಧಿ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ರಾಯರ ಕೊಪ್ಪಲು ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶ್ರೇಷ್ಠ ದಾನಗಳಲ್ಲಿ ರಕ್ತದಾನ ಕೂಡ ಒಂದಾಗಿದ್ದು ನಾವು ಹಲವಾರು ವರ್ಷಗಳಿಂದ ಭಾರತೀಯ ರೆಡ್ ಕ್ರಾಸ್ ಸಹಯೋಗದಲ್ಲಿ ಹಲವಾರು ಬಾರಿ ರಕ್ತದಾನ ಶಿಬಿರಗಳನ್ನು ಏರ್ಪಡಿಸುತ್ತೇವೆ ನಾವು ಇಲ್ಲಿಯವರೆಗೆ ಹಾಸನ ಜಿಲ್ಲೆಯಲ್ಲಿ ಇರುವ ಖಾಸಗಿ ರಕ್ತ ನಿಧಿ ಕೇಂದ್ರಗಳಿಗೆ ಮಾಹಿತಿ ನೀಡಿ ರಕ್ತದಾನ ಶಿಬಿರಗಳನ್ನು ಏರ್ಪಡಿಸುತ್ತಿದ್ದೆವು. ಇದೇ ಮೊದಲ ಬಾರಿಗೆ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಈ ಶಿಬಿರವನ್ನು ಏರ್ಪಡಿಸಿದ್ದು ಇನ್ನು ಮುಂದೆ ಬಡವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರ್ಕಾರಿ ಆಸ್ಪತ್ರೆಗಳ ಸಹಯೋಗದಲ್ಲಿ ಈ ಶಿಬಿರಗಳನ್ನು ಮುಂದುವರಿಸಿಕೊಂಡು ಹೋಗುವುದಾಗಿ ತಿಳಿಸಿದರುರಾಯರ ಕೊಪ್ಪಲು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ. ಸಾಗರ್ ಮಾತನಾಡಿ ರಕ್ತದಾನ ಮಾಡುವುದರ ಉದ್ದೇಶ ಇನ್ನೊಂದು ಜೀವವನ್ನು ಉಳಿಸುವುದೇ ಆಗಿದೆ ತುರ್ತು ಸಂದರ್ಭಗಳಲ್ಲಿ ರಕ್ತದ ಮಹತ್ವ ಏನು ಎಂಬುದು ತಿಳಿಯುತ್ತದೆ. ಒಬ್ಬ ಆರೋಗ್ಯವಂತ ವ್ಯಕ್ತಿ ವರ್ಷದಲ್ಲಿ 5 ಬಾರಿ ರಕ್ತದಾನ ಮಾಡಬಹುದು ಎಂದು ವೈದ್ಯಕೀಯ ವರದಿಗಳಿಂದ ಸಾಬೀತಾಗಿದೆ. ಆದುದರಿಂದ ಸಾರ್ವಜನಿಕರು ಯಾವುದೇ ಅಂಜಿಕೆ ಇಲ್ಲದೆ, ಭಯವಿಲ್ಲದೆ,ನಿರಾತಂಕವಾಗಿ ರಕ್ತದಾನವನ್ನು ಮಾಡುವಂತೆ ಕರೆ ನೀಡಿದರುಈ ಸಮಯದಲ್ಲಿ ಸಾರ್ವಜನಿಕರಿಂದ 250 ಮಿ.ಲೀ ನ 18 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು ಈ ಸಂದರ್ಭದಲ್ಲಿ ತಾಲೂಕು ರೆಡ್ ಕ್ರಾಸ್ ಕಾರ್ಯದರ್ಶಿ ವೀರಭದ್ರಸ್ವಾಮಿ, ಪದಾಧಿಕಾರಿಗಳಾದ ಶಶಿಧರ್ ಬೆಕ್ಕಡಿ,ರಘು ಧರ್ಮಣ್ಣ,ವೈದ್ಯಕೀಯ ಸಿಬ್ಬಂದಿಗಳಾದ ಡಾl| ನಾಗಲಕ್ಷ್ಮಿ,ಲೀಲಾವತಿ,ಭಾನುಮತಿ,ಹನುಮಂತ ಶುಶ್ರೂಷಕಿಯರಾದ ನೀಲಾಂಬಿಕೆ, ಶಿಲ್ಪ, ನಾಜಿಮಾ ಇತರರು ಉಪಸ್ಥಿತರಿದ್ದರು.
=======ಫೋಟೋ: