ಎಲ್ಲ ದಾನಕ್ಕಿಂತಲೂ ರಕ್ತದಾನ ಶೇಷ್ಠ: ಶ್ರೀ

KannadaprabhaNewsNetwork |  
Published : Jan 06, 2026, 02:45 AM IST
ಕೊಪ್ಪಳ ಶ್ರೀ ಗವಿಸಿದ್ಧೇಶ್ವರ ಜಾತ್ರಾಮಹೋತ್ಸವದ ಅಂಗವಾಗಿ ನಡೆದ ರಕ್ತದಾನ ಶಿಬಿರದಲ್ಲಿ ಸ್ವಾಮೀಜಿಗಳು ರಕ್ತದಾನ ಮಾಡಿದರು. | Kannada Prabha

ಸಾರಾಂಶ

ರಕ್ತದಾನ ಎಲ್ಲ ದಾನಕ್ಕಿಂತಲೂ ಶ್ರೇಷ್ಠ ಕಾರ್ಯವಾಗಿದೆ

ಕೊಪ್ಪಳ: ಜೀವ ಉಳಿಸುವ ಮಹಾನ ಕಾರ್ಯವಾಗಿರುವ ರಕ್ತದಾನ ಎಲ್ಲ ದಾನಕ್ಕೂ ಶ್ರೇಷ್ಠ ಎಂದು ಕೊತಬಾಳ ಶ್ರೀಗಂಗಾಧರ ಮಹಾಸ್ವಾಮೀಜಿಗಳು ಹೇಳಿದ್ದಾರೆ.

ಶ್ರೀಗವಿಸಿದ್ಧೇಶ್ವರ ಜಾತ್ರಾಮಹೋತ್ಸವದ ಅಂಗವಾಗಿ ಭಾರತೀಯ ರೆಡ್ ಕ್ರಾಸ್ ಕೊಪ್ಪಳ ಶಾಖೆ ಶ್ರೀಗವಿಸಿದ್ಧೇಶ್ವರ ಆರ್ಯುವೇದ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಜಾತ್ರೆಗಳಲ್ಲಿ ಇಂಥ ಕಾರ್ಯ ಮಾಡುತ್ತಿರುವುದು ಶ್ಲಾಘನೀಯ. ಕಳೆದ ಹತ್ತು, ಹನ್ನೊಂದು ವರ್ಷಗಳಿಂದ ನಿರಂತರವಾಗಿ ನಡೆದುಕೊಂಡು ಬಂದಿದೆ. ಪ್ರತಿ ವರ್ಷ ನೂರಾರು ಜನರು ರಕ್ತದಾನ ಮಾಡುತ್ತಾರೆ. ಅದು ಹಲವರ ಜೀವ ಉಳಿಸಲು ಕಾರಣವಾಗುತ್ತದೆ ಎಂದರು.

ಇಟಗಿಯ ಶ್ರೀಗುರುಶಾಂತವೀರ ಮಹಾಸ್ವಾಮೀಜಿಗಳು ಮಾತನಾಡಿ, ರಕ್ತದಾನ ಎಲ್ಲ ದಾನಕ್ಕಿಂತಲೂ ಶ್ರೇಷ್ಠ ಕಾರ್ಯವಾಗಿದೆ. ಪ್ರತಿಯೊಬ್ಬರು ಸಹ ಅರ್ಹವಾಗಿದ್ದರೇ ರಕ್ತದಾನ ಮಾಡುವ ಮೂಲಕ ಜೀವ ಉಳಿಸುವ ಕಾರ್ಯದಲ್ಲಿ ತೊಡಗಬೇಕಾಗಿದೆ. ನಾನು ಸೇರಿದಂತೆ ಅನೇಕ ಸ್ವಾಮೀಜಿಗಳು ರಕ್ತದಾನ ಪ್ರತಿ ವರ್ಷ ಮಾಡುತ್ತಾ ಬಂದಿದ್ದೇವೆ. ಇದರಿಂದ ಆರೋಗ್ಯವೂ ವೃದ್ಧಿಯಾಗುತ್ತದೆ ಎಂದರು.

ಸ್ವಾಮೀಜಿಗಳ ರಕ್ತದಾನ: ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿದ ಬಳಿ ಶ್ರೀಗಂಗಾಧರ ಸ್ವಾಮೀಜಿಗಳು, ಶ್ರೀ ಗುರುಶಾಂತವೀರ ಮಹಾಸ್ವಾಮೀಜಿಗಳು ಸೇರಿದಂತೆ ಅನೇಕ ಸ್ವಾಮೀಜಿಗಳು ರಕ್ತದಾನ ಮಾಡಿದರು.

ಅಭಿನವ ನಾಗಲಿಂಗ ಅವಧೂತರು, ಶ್ರೀಗುರುಸಿದ್ಧೇಶ್ವರ ಸ್ವಾಮೀಜಿ, ಶ್ರೀಬಸವಭೂಷಣ ಸ್ವಾಮೀಜಿ, ಶ್ರೀಯಶವಂತದೇವರು ಸ್ವಾಮೀಜಿ, ಶ್ರೀ ಬ್ರಹ್ಮಾನಂದ ಸ್ವಾಮಿಜಿಗಳು ಸಾನ್ನಿಧ್ಯ ವಹಿಸಿದ್ದರು.

ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ರಾಜ್ಯ ಶಾಖೆಯ ಉಪಸಭಾಪತಿ ಡಾ.ಶ್ರೀನಿವಾಸ ಹ್ಯಾಟಿ, ಕೊಪ್ಪಳ ಶಾಖೆಯ ಸಭಾಪತಿ ಸೋಮರಡ್ಡಿ ಅಳವಂಡಿ, ಆರ್ಯುವೇದ ಕಾಲೇಜಿನ ಪ್ರಾಚಾರ್ಯ ಡಾ. ಮಹಾಂತೇಶ ಸಾಲಿಮಠ, ಉಪಸಭಾಪತಿ ಡಾ.ಸಿ.ಎಸ್. ಕರಮುಡಿ, ಡಾ.ಮಂಜುನಾಥ, ನಿರ್ದೇಶಕ ಡಾ. ಶಿವನನಗೌಡ, ಡಾ. ಗವಿಸಿದ್ದನಗೌಡ, ರಾಜೇಶ ಯಾವಗಲ್, ಡಾ. ಸುರೇಶ ಹಕ್ಕಂಡಿ, ಡಾ. ಪರಮೇಶ್ವರ ಸೇರಿದಂತೆ ಮೊದಲಾದವರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅನುವಾದಕರು ಸಾಂಸ್ಕೃತಿಕ ರಾಯಭಾರಿಗಳಿದ್ದಂತೆ:ಎಸ್.ಜಿ.ಎಸ್‌
9.5 ಲಕ್ಷ ಲಂಚ ಪಡೆದ ಕೇಂದ್ರ ವಿದ್ಯುತ್‌ಸಂಸ್ಥೆ ಜಂಟಿ ನಿರ್ದೇಶಕ ಸಿಬಿಐ ಬಲೆಗೆ