ದಾನಗಳಲ್ಲೇ ಅತಿ ಶ್ರೇಷ್ಠ ರಕ್ತದಾನ: ಸುನೀಲ್ ಕುಮಾರ್

KannadaprabhaNewsNetwork |  
Published : Jun 19, 2026, 02:00 AM IST
ನರಸಿಂಹರಾಜಪುರ ತಾಲೂಕಿನ ಶೆಟ್ಟಿಕೊಪ್ಪದಲ್ಲಿ ಜ್ವಾಲಾಮಾಲಿನಿ ಜೇಸಿ ಸಂಸ್ಥೆಯ ನೇತ್ರತ್ವದಲ್ಲಿ ನಡೆದ ರಕ್ತದಾನ ಶಿಬಿರವನ್ನು ಶೆಟ್ಟಿಕೊಪ್ಪ  ಸೇಂಟ್ ಜೋಸೆಫ್ ಚರ್ಚನ ಫಾ. ಸೆಬಾಸ್ಟನ್ ಉದ್ಘಾಟಿಸಿದರು. | Kannada Prabha

ಸಾರಾಂಶ

ನರಸಿಂಹರಾಜಪುರದಾನಗಳಲ್ಲೇ ರಕ್ತದಾನ ಅತಿ ಶ್ರೇಷ್ಠ. ಪ್ರತಿಯೊಬ್ಬ ಆರೋಗ್ಯವಂತರು ರಕ್ತದಾನ ಮಾಡಬೇಕು ಎಂದು ಕಡಹಿನಬೈಲು ಗ್ರಾಪಂ ಮಾಜಿ ಉಪಾಧ್ಯಕ್ಷ ಸುನೀಲ್ ಕುಮಾರ್ ತಿಳಿಸಿದರು.

ಶೆಟ್ಟಿಕೊಪ್ಪದಲ್ಲಿ ಸ್ವಯಂ ಪೇರಿತ ರಕ್ತದಾನ ಶಿಬಿರ । 31 ಯೂನಿಟ್ ರಕ್ತ ಸಂಗ್ರಹ

ಕನ್ನಡಪ್ರಭವಾರ್ತೆ ನರಸಿಂಹರಾಜಪುರ

ದಾನಗಳಲ್ಲೇ ರಕ್ತದಾನ ಅತಿ ಶ್ರೇಷ್ಠ. ಪ್ರತಿಯೊಬ್ಬ ಆರೋಗ್ಯವಂತರು ರಕ್ತದಾನ ಮಾಡಬೇಕು ಎಂದು ಕಡಹಿನಬೈಲು ಗ್ರಾಪಂ ಮಾಜಿ ಉಪಾಧ್ಯಕ್ಷ ಸುನೀಲ್ ಕುಮಾರ್ ತಿಳಿಸಿದರು.

ಶೆಟ್ಟಿಕೊಪ್ಪದಲ್ಲಿ ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಮತ್ತು ಶೆಟ್ಟಿಕೊಪ್ಪ ರಕ್ತದಾನಿಗಳ ಬಳಗದ ಸಂಯುಕ್ತ ಆಶ್ರಯದಲ್ಲಿ ಶಿವಮೊಗ್ಗ ಮೆಗಾನ್ ರಕ್ತ ನಿಧಿ ಕೇಂದ್ರ ಸಹಯೋಗದ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿ ಹಲವು ವರ್ಷಗಳಿಂದ ರಕ್ತದಾನ ಶಿಬಿರ ನಡೆಯುತ್ತಿದ್ದು ಹೆಚ್ಚು ಜನರು ರಕ್ತ ನೀಡಿದ್ದಾರೆ. ಇಂದಿನಶಿಬಿರಕ್ಕೆ ಜನರು ಸ್ವಯಂ ಪ್ರೇರಿತರಾಗಿ ರಕ್ತ ನೀಡುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದರು.

ಅತಿಥಿಯಾಗಿದ್ದ ಕಸಾಪ ಪೂರ್ವಾಧ್ಯಕ್ಷ ಎನ್.ಎಂ.ಕಾಂತರಾಜ್ ಮಾತನಾಡಿ ಜೇಸಿ ಸಂಸ್ಥೆ ಸಮಾಜ ಮುಖಿ ಕಾರ್ಯ ಮಾಡುತ್ತಾ ಬಂದಿದೆ. ಆರೋಗ್ಯವಂತ ವ್ಯಕ್ತಿ ರಕ್ತದಾನ ಮಾಡಬಹುದು. ರಕ್ತದಾನದಿಂದ ತುರ್ತು ಸಂದರ್ಭದಲ್ಲಿ ಮನುಷ್ಯರ ಜೀವ ಉಳಿಯಲಿದೆ ಎಂದರು.

ಶಿವಮೊಗ್ಗ ಮೆಗ್ಗಾನ್ ರಕ್ತನಿಧಿ ಕೇಂದ್ರದ ಮುಖ್ಯಸ್ಥ ಹನುಮಂತಪ್ಪ ಮಾತನಾಡಿ, 10 ವರ್ಷ ಅಂಕಿ ಅಂಶಗಳ ಪ್ರಕಾರ ವಿಶ್ವದಲ್ಲಿ ಪ್ರತಿ 30 ಸೆಕೆಂಡಿಗೆ 1 ಬಾಟಲ್ ರಕ್ತದ ಅವಶ್ಯಕತೆ ಇದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಕನಿಷ್ಠ 100 ಬಾಟಲ್ ರಕ್ತದ ಅವಶ್ಯಕತೆ ಇದೆ. ಆದ್ದರಿಂದ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಿ ಇನ್ನೊಬ್ಬರ ಜೀವ ಉಳಿಸಬೇಕು ಎಂದು ಮನವಿ ಮಾಡಿದರು.

ರಕ್ತದಾನ ಶಿಬಿರದಲ್ಲಿ 31 ಯೂನಿಟ್ ರಕ್ತ ಸಂಗ್ರಹವಾಯಿತು.

ಶೆಟ್ಟಿಕೊಪ್ಪ ಸೇಂಟ್ ಜೋಸೆಫ್ ಚರ್ಚನ ಫಾದರ್ ಸೆಬಾಸ್ಟನ್ ಉದ್ಘಾಟಿಸಿದರು. ಸಭೆ ಅಧ್ಯಕ್ಷತೆ ವಹಿಸಿದ್ದ ಜ್ವಾಲಾಮಾಲಿನಿ ಜೇಸಿ ಸಂಸ್ಥೆ ಅಧ್ಯಕ್ಷ ಆದರ್ಶ ಬಿ ಗೌಡ ವಹಿಸಿದ್ದರು. ಗ್ರಾಪಂ ಮಾಜಿ ಸದಸ್ಯ ಎ.ಬಿ.ಮಂಜುನಾಥ್, ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಬೇಸಿಲ್, ಮುಖಂಡ ಗಾಂಧಿಗ್ರಾಮ ನಾಗರಾಜು, ಜೇಸಿ ಕಾರ್ಯದರ್ಶಿ ರಜಿತ್ ವಗಡೆ, ಜೇಸಿ ಸದಸ್ಯ ಜೋಯಿ ಬ್ರೋ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಾಲ್ಕಿಯ ಸುದೀರ್ಘ ಇತಿಹಾಸ ಬಿಂಬಿಸುವ ದಿ ಲ್ಯಾಂಪ್‌ ಬೆರರ್ಸ್‌ ಕೃತಿ
ಅಳ್ನಾವರಕ್ಕೆ ಬೇಕು ಶರವೇಗದ ಅಭಿವೃದ್ಧಿ ಭಾಗ್ಯ!