ವಿದ್ಯಾರ್ಥಿಗಳ ರಕ್ತದ ಗುಂಪಿನ ಪರೀಕ್ಷೆ ಅಗತ್ಯ

KannadaprabhaNewsNetwork |  
Published : Jul 26, 2025, 12:00 AM IST
ಐನಳ್ಳಿ ಕುರುಬರಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ಮತ್ತು ವಿಮುಕ್ತಿ ವಿದ್ಯಾಸಂಸ್ಥೆ ವತಿಯಿಂದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲಾಯಿತು. | Kannada Prabha

ಸಾರಾಂಶ

ಐನಳ್ಳಿ ಕುರುಬರಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ಮತ್ತು ವಿಮುಕ್ತಿ ವಿದ್ಯಾಸಂಸ್ಥೆ ವತಿಯಿಂದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಸಿರಿಗೆರೆ

ವಿದ್ಯಾರ್ಥಿಗಳಿಗೆ ರಕ್ತದ ಗುಂಪು ಪರೀಕ್ಷೆ ಮಾಡಿಸುವುದು ಬಹಳ ಮುಖ್ಯ, ರಕ್ತದ ಗುಂಪು ಪರೀಕ್ಷೆ ಸುಲಭ ಮತ್ತು ಸರಳ ಎಂದು ಚಿತ್ರದುರ್ಗ ತಾಲೂಕ ಆರೋಗ್ಯ ಅಧಿಕಾರಿ ಡಾಕ್ಟರ್ ಬಿ.ವಿ.ಗಿರೀಶ್ ಹೇಳಿದರು.

ಐನಳ್ಳಿ ಕುರುಬರಹಟ್ಟಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ಮತ್ತು ವಿಮುಕ್ತಿ ವಿದ್ಯಾಸಂಸ್ಥೆ ವತಿಯಿಂದ ಆಯೋಜಿಸಿದ ವಿದ್ಯಾರ್ಥಿಗಳ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅವರು ಮಾತನಾಡಿದರು.

ಎಂಟು ವಿಭಿನ್ನ ರಕ್ತದ ಗುಂಪುಗಳಿದ್ದು ವಿದ್ಯಾರ್ಥಿಗಳು ರಕ್ತ ಪರೀಕ್ಷೆ ಮಾಡಿಸಿ ತಮ್ಮ ರಕ್ತದ ಗುಂಪನ್ನು ತಿಳಿದಿರಬೇಕು, 18 ವರ್ಷದ ನಂತರ ರಕ್ತದಾನ ಮಾಡಲು ಅಥವಾ ಪಡೆಯಲು ರಕ್ತದ ಗುಂಪು ಪರೀಕ್ಷೆ ಅತ್ಯವಶ್ಯಕ ಎಂದರು.

ಆರೋಗ್ಯ ಇಲಾಖೆಯ ಆರ್‌ಬಿಎಸ್‌ಕೆ ತಂಡದ ವೈದ್ಯಾಧಿಕಾರಿಗಳು ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಆರೋಗ್ಯ ತಪಾಸಣೆ ಮಾಡಿ ಗಂಭೀರ ಸ್ವರೂಪದ ಕಾಯಿಲೆಗಳನ್ನು ಪತ್ತೆ ಹಚ್ಚಿ ಉಚಿತ ಶಸ್ತ್ರ ಚಿಕಿತ್ಸೆ ಮಾಡಿಸಲು ಪ್ರಯತ್ನಿಸುತ್ತಿದ್ದು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಡಾ.ಶಮೈಲಾ ಕ್ಯಾಸಾಪುರ ಪ್ರಾಥಮಿಕ ಆರೋಗ್ಯ ಕೇಂದ್ರ ಆಡಳಿತ ವೈದ್ಯಾಧಿಕಾರಿಗಳು ಆರೋಗ್ಯ ತಪಾಸಣಾ ಶಿಬಿರದಲ್ಲಿ ಪಾಲ್ಗೊಂಡು ಪ್ರೌಢ ಶಾಲೆಯಲ್ಲಿನ 108 ವಿದ್ಯಾರ್ಥಿಗಳಿಗೆ ಸಾಮಾನ್ಯ ಆರೋಗ್ಯ ತಪಾಸಣೆ ಮತ್ತು ರಕ್ತದ ಗುಂಪು ಪರೀಕ್ಷೆ ಮಾಡಿಸಿದರು.ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಬಿ.ಮೂಗಪ್ಪ ಮಾತನಾಡಿ, ಭವಿಷ್ಯದಲ್ಲಿ ಯಾವುದೇ ಆರೋಗ್ಯ ಸಮಸ್ಯೆ ಎದುರಾದಾಗ ಯೋಜನೆ ಮಾಡಲು, ರಕ್ತದ ಗುಂಪು ಪರೀಕ್ಷೆ ಅವಶ್ಯಕತೆ ಇದ್ದು, ಯುವಕರು ರಕ್ತದಾನದ ಮಹತ್ವದ ಬಗ್ಗೆ ತಿಳಿದು, ತುರ್ತು ಸಂದರ್ಭದಲ್ಲಿ ರಕ್ತದಾನ ಮಾಡಲು ಮುಂದೆ ಬರಬೇಕು ಎಂದರು.

ಕಾರ್ಯಕ್ರಮದಲ್ಲಿ ಮುಖ್ಯೋಪಾಧ್ಯಾಯರಾದ ಎಚ್‌.ಎನ್.ಮಂಜಪ್ಪ ಮತ್ತು ಸಹ ಶಿಕ್ಷಕರು, ವಿಮುಕ್ತಿ ಸಂಸ್ಥೆಯ ಅಧ್ಯಕ್ಷರಾದ ಅನ್ನಪೂರ್ಣ, ಸಿಬ್ಬಂದಿಗಳಾದ ಬಿ.ಬಿ.ಜಾನ್, ನಾಗರತ್ನ, ಆರೋಗ್ಯ ನಿರೀಕ್ಷಣಾಧಿಕಾರಿ ರಂಗಾರೆಡ್ಡಿ, ತಸ್ಕಿಯ ಐದರ್, ಪ್ರಯೋಗ ಶಾಲಾ ತಂತ್ರಜ್ಞಾಧಿಕಾರಿ ಬಿ ಕವಿತಾ, ಆಶಾ ಕಾರ್ಯಕರ್ತೆಯರಾದ ಲಕ್ಷ್ಮೀಬಾಯಿ, ಸುಮಾ, ಸುಮಿತ್ರ, ವಿದ್ಯಾರ್ಥಿಗಳು ಹಾಜರಿದ್ದರು.

PREV

Recommended Stories

ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ದ್ವೇಷ ಭಾಷಣ ತಡೆ, ಸುಳ್ಳು ಸುದ್ದಿ ನಿಯಂತ್ರಣಕ್ಕೆ ಮಸೂದೆ