ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಸಂತ ಜೋಸೆಫ್ ಶಾಲೆಯಲ್ಲಿ ಜಿಲ್ಲಾಡಳಿತ ಮತ್ತು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಗುರುವಾರ ನಡೆದ ಜಿಲ್ಲಾ ಮಟ್ಟದ ಭರತನಾಟ್ಯ ಸ್ಪರ್ಧೆಯಲ್ಲಿ ಬಿ.ಎಂ.ನವ್ಯಶ್ರೀ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕಳೆದ ವರ್ಷವೂ ಸಹ ರಾಜ್ಯಮಟ್ಕಕ್ಕೆ ಆಯ್ಕೆಯಾಗಿದ್ದ ಬಿ.ಎಂ.ನವ್ಯಶ್ರೀ, ಶಿವಮೊಗ್ಗದಲ್ಲಿ ನಡೆದ ಕಲೋತ್ಸವ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಗಳಿಸಿದ್ದರು. ನವ್ಯಶ್ರೀ ನಗರದ ಗುರುದೇವ ಲಲಿತಕಲಾ ಅಕಾಡೆಮಿಯ ನಿರ್ದೇಶಕರಾದ ವಿದುಷಿ ಡಾ.ಚೇತನ ರಾಧಾಕೃಷ್ಣ ಅವರ ಭರತನಾಟ್ಯ ಶಾಲೆಯಲ್ಲಿ ಭರತನಾಟ್ಯ ಅಭ್ಯಾಸ ಮಾಡುತ್ತಿದ್ದಾರೆ.ಕೇಂದ್ರ ಸಚಿವ ಎಚ್ಡಿಕೆಗೆ ಮಹಾಲಿಂಗಪ್ಪ ಮನವಿ ಸಲ್ಲಿಕೆಮಂಡ್ಯ:
ನವದೆಹಲಿಯ ಉದ್ಯೋಗ ಭವನದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಅಭಿನಂದಿಸಿದ ನಂತರ ನೀರಾವರಿ ವಂಚಿತ ತಾಲೂಕು ಬಸರಾಳು ಹೋಬಳಿ ಕೇಂದ್ರದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಪೂರಕ ವಾತಾವರಣ ಇರುವುದರಿಂದ ಜನರಿಗೆ ಅನುಕೂಲವಾಗುವಂತಹ ಉದ್ದಿಮೆ ಸ್ಥಾಪಿಸುವಂತೆ ಮನವಿ ಮಾಡಿದರು.