ವಿಜಯಪುರ: ಪಟ್ಟಣ ನಾಗರಿಕರ ಬೇಡಿಕೆ ಬಹುದಿನಗಳ ಬಳಿಕ ಪಟ್ಟಣದಿಂದ ದೇವನಹಳ್ಳಿ, ಯಲಹಂಕ ಮಾರ್ಗವಾಗಿ ಬೆಂಗಳೂರಿನ ಮೆಜೆಸ್ಟಿಕ್‌ಗೆ ಬಿಎಂಟಿಸಿ ವೇಗದೂತ ಬಸ್‌ಗಳ ಸಂಚಾರ ಪ್ರಾರಂಭಿಸಿದೆ.
ವಾಯುವಜ್ರ ಬಸ್‌ಗಳಿಗೂ ಹೆಚ್ಚಿದ ಬೇಡಿಕೆ:
ಪ್ರಸ್ತುತ ಆರಂಭಿಸಿರುವ ಎಕ್ಸ್‌ಪ್ರೆಸ್ ಬಸ್ಸುಗಳಿಂದ ಸಾರ್ವಜನಿಕರಿಗೆ ಸಾಕಷ್ಟು ಅನುಕೂಲವಾಗಿದೆ. ಇದರೊಂದಿಗೆ, ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ಕಾರ್ಯಾಚರಣೆ ನಡೆಸುತ್ತಿರುವ ಮಾದರಿಯಲ್ಲೇ ಇಲ್ಲೂ ಸಹ ವಾಯುವಜ್ರ ಬಸ್ಸುಗಳನ್ನು ಬಿಡಬೇಕು ಎಂಬುದು ನಾಗರಿಕರ ಒತ್ತಾಯವಾಗಿದೆ.ಸದ್ಯ ಬೆಂಗಳೂರು ಮೆಜೆಸ್ಟಿಕ್‌ನಿಂದ ನಂದಿ ಕ್ರಾಸ್‌ವರೆಗೆ ಸಂಚರಿಸುವ ಬಿಎಂಟಿಸಿ ಬಸ್ಸುಗಳನ್ನು ಚಿಕ್ಕಬಳ್ಳಾಪುರ ರಸ್ತೆ ಮೂಲಕ ವಿಜಯಪುರಕ್ಕೆ ವಿಸ್ತರಿಸಬೇಕು ಎಂಬ ಆಗ್ರಹ ಕೇಳಿ ಬಂದಿದೆ. ಹೀಗೆ ಮಾಡಿದರೆ ದೇವನಹಳ್ಳಿ ಮತ್ತು ವಿಜಯಪುರದಿಂದ ನಾಗಾರ್ಜುನ ಕಾಲೇಜು ಹಾಗೂ ಬಿಜಿಎಸ್ ಕಾಲೇಜಿಗೆ ತೆರಳುವ ನೂರಾರು ವಿದ್ಯಾರ್ಥಿಗಳಿಗೆ ಅನುಕೂಲವಾಗುತ್ತದೆ. ವಿಜಯಪುರದಿಂದ ಮುದ್ದೇನಹಳ್ಳಿ, ನಾರಾಯಣಪುರ, ಬಿಜ್ಜವಾರ, ಹೊಲೆರಹಳ್ಳಿ ಸೇರಿದಂತೆ ಹತ್ತಾರು ಹಳ್ಳಿಗಳಿಗೆ ಉತ್ತಮ ಸಾರಿಗೆ ಸಂಪರ್ಕ ಸಿಗುತ್ತದೆ.