ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಸ್ಕೌಟ್ ಭವನದಲ್ಲಿ ಶನಿವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಯೋಗಾಸನ ಬುದ್ಧಿ, ಮನಸ್ಸು ಹಾಗೂ ಶರೀರವನ್ನು ಸಮತೋಲನದಲ್ಲಿ ಇಡಲು ಒಂದು ದಿವ್ಯ ಶಕ್ತಿಯನ್ನು ಹೊಂದಿದೆ, ಔಷಧಿಗಳು ಕೇವಲ ಶೇ. 20ರಷ್ಟು ದೇಹ ದಲ್ಲಿ ಕೆಲಸ ಮಾಡಿದರೆ ಯೋಗವು ಶೇ.100 ರಷ್ಟು ಕಾಯಿಲೆಯನ್ನು ಗುಣಪಡಿಸುವ ಶಕ್ತಿಯನ್ನು ಹೊಂದಿದೆ, ಅಲ್ಲದೆ ಯೋಗದಿಂದ ಸುಪ್ತ ಮನಸ್ಸು ಮತ್ತು ಜಾಗೃತ ಮನಸ್ಸು ಹೆಚ್ಚು ಕ್ರಿಯಾಶೀಲವಾಗುತ್ತದೆ ಎಂದು ತಿಳಿಸಿದರು.ಜಿಲ್ಲಾ ಆಯುಷ್ ಅಧಿಕಾರಿ ಡಾ.ಲಿಂಗರಾಜ್ ಮಾತನಾಡಿ, ಜೂನ್ 10 ರಿಂದ 20ನೇ ತಾರೀಕಿನವರೆಗೆ ಪೂರ್ವಭಾವಿ ಕಾರ್ಯಕ್ರಮ ಯೋಗೋತ್ಸವವನ್ನು ಇಂದು ಆಚರಿಸುತ್ತಿದ್ದು, ಈ ವರ್ಷದ ಧ್ಯೇಯವಾಕ್ಯ ‘ಮಹಿಳಾ ಸಬಲೀಕರಣಕ್ಕಾಗಿ ಯೋಗ’ ಎಂಬುದಾಗಿದೆ ಎಂದರು.
ಜಿಲ್ಲಾ ಖಜಾಂಚಿ ಚೂಡಾಮಣಿ ಪವಾರ ಜಂಟಿ ಕಾರ್ಯದರ್ಶಿ ವೈ.ಆರ್.ವಿರೇಶಪ್ಪ, ಡಾ. ಸುರೇಂದ್ರ, ಆಯುಷ್ ಇಲಾಖೆಯ ಶಿಬ್ಬಂದಿ ವರ್ಗದವರು, ವಿಜಯಕುಮಾರ, ಹೆಚ್.ಶಿವಶಂಕರ, ಗೀತಾ ಚಿಕ್ಕಮಠ, ರಾಜೇಶ ಅವಲಕ್ಕಿ, ಕೃಷ್ಣಸ್ವಾಮಿ, ಮಲ್ಲಿಕಾರ್ಜುನ ಮತ್ತಿತರ ಹಿರಿಯರು ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದೇ ವೇಳೆ ಡಾ.ಧನಂಜಯ ಸರ್ಜಿ ಅವರನ್ನು ಗೌರವಿಸಲಾಯಿತು.