ಯೋಗದಿಂದ ದೇಹ, ಮನಸ್ಸು ಸದೃಢ: ಸಂಸದ ಕೆ. ರಾಜಶೇಖರ ಹಿಟ್ನಾಳ

KannadaprabhaNewsNetwork |  
Published : Jun 22, 2024, 12:51 AM IST
21ಕೆಪಿಎಲ್22 ಕೊಪ್ಪಳ ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ  ಹಮ್ಮಿಕೊಂಡಿದ್ದ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಸಂಸದ ರಾಜಶೇಖರ ಹಿಟ್ನಾಳ, ಡಿಸಿ ನಳಿನ್ ಅತುಲ್ ಯೋಗ ಮಾಡುತ್ತಿರುವುದು. | Kannada Prabha

ಸಾರಾಂಶ

ಯೋಗದಿಂದ ದೇಹ ಮಾತ್ರವಲ್ಲದೇ ಮನಸ್ಸನ್ನೂ ಕೂಡ ಸದೃಢವಾಗಿರಿಸಿಕೊಳ್ಳಬಹುದಾಗಿದೆ ಎಂದು ಕೊಪ್ಪಳ ಸಂಸದ ಕೆ. ರಾಜಶೇಖರ ಹಿಟ್ನಾಳ ಹೇಳಿದರು.

ಕನ್ನಡಪ್ರಭ ವಾರ್ತೆ ಕೊಪ್ಪಳ

ಯೋಗದಿಂದ ದೇಹ ಮಾತ್ರವಲ್ಲದೇ ಮನಸ್ಸನ್ನೂ ಕೂಡ ಸದೃಢವಾಗಿರಿಸಿಕೊಳ್ಳಬಹುದಾಗಿದೆ ಎಂದು ಕೊಪ್ಪಳ ಸಂಸದ ಕೆ. ರಾಜಶೇಖರ ಹಿಟ್ನಾಳ ಹೇಳಿದರು.

ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ ಹಾಗೂ ಜಿಲ್ಲೆಯ ವಿವಿಧ ಇಲಾಖೆಗಳು ಮತ್ತು ಯೋಗ ಸಂಸ್ಥೆಗಳ ಸಹಯೋಗದಲ್ಲಿ ಸ್ವಂತ ಮತ್ತು ಸಮಾಜಕ್ಕಾಗಿ ಯೋಗ ಎಂಬ ಘೋಷವಾಕ್ಯದೊಂದಿಗೆ ನಗರದ ತಾಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಧನ್ವಂತರಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಹಾಗೂ ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಭಾರತದಲ್ಲಿ ಪರಂಪರಾಗತವಾಗಿ ಬಂದಿರುವ ಯೋಗ ವಿಶ್ವದ ಮನ್ನಣೆ ಪಡೆದಿದೆ. ಇತದ ಫಲವಾಗಿ ಇಂದು ಅಂತಾರಾಷ್ಟ್ರೀಯ ಯೋಗ ದಿನವನ್ನು ಭಾರತದಲ್ಲಷ್ಟೇ ಅಲ್ಲದೇ, ಜಗತ್ತಿನ ನೂರಾರು ದೇಶಗಳು ಆಚರಿಸುತ್ತಿರುವುದೇ ಇದಕ್ಕೆ ನಿದರ್ಶನವಾಗಿದೆ. ಯೋಗದಿಂದ ದೇಹದ ಜೊತೆಗೆ ಮನಸ್ಸನ್ನೂ ಗಟ್ಟಿಗೊಳಿಸಬಹುದಾಗಿದೆ. ಒತ್ತಡದ ನಡುವೆ ಬದುಕು ಸಾಗಿಸುವ ಇಂದಿನ ಜೀವನ ಶೈಲಿಗೆ ಯೋಗ ಅತ್ಯಂತ ಅವಶ್ಯಕವಾಗಿ ಬೇಕಾಗಿದೆ. ಯೋಗ ಇಂದಿನ ಸಾಮಾಜಿಕ ಬದುಕಿನಲ್ಲಿನ ಒತ್ತಡಗಳನ್ನು ಕೆಲವೇ ನಿಮಿಷಗಳಲ್ಲಿ ನಿವಾರಿಸುವ ದಿವ್ಯ ಔಷಧಿಯಾಗಿದ್ದು, ಪ್ರತಿಯೊಬ್ಬರು ತಮ್ಮ ದೈನಂದಿನ ಜೀವನದಲ್ಲಿ ದಿನಕ್ಕೆ ಕೆಲ ಸಮಯ ಯೋಗಕ್ಕೆ ಮೀಸಲಿಡುವುದು ಅಗತ್ಯ ಎಂದು ಹೇಳಿದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ. ವೈ.ಜೆ. ಶಿರವಾರ ಗಾಭ್ಯಾಸ ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ನಲಿನ್ ಅತುಲ್, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯಶೋಧಾ ವಂಟಗೋಡಿ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ. ಕಡಿ, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶ್ರೀಶೈಲ ಬಿರಾದಾರ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜಗದೀಶ್ ಜಿ.ಎಚ್., ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರಾದ ರಾಜು ತಳವಾರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿಠ್ಠಲ್ ಜಾಬಗೌಡರ್, ಜಿಲ್ಲಾ ವಾರ್ತಾಧಿಕಾರಿಗಳಾದ ಗವಿಸಿದ್ದಪ್ಪ ಹೊಸಮನಿ, ಜಿಲ್ಲೆಯ ಬ್ರಹ್ಮ ಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಯೋಗಿನಿ ಅಕ್ಕ ಸೇರಿದಂತೆ ಜಿಲ್ಲಾ ಆಯುಶ್ ಇಲಾಖೆಯ ವೈದ್ಯಾಧಿಕಾರಿಗಳು, ಜನಪ್ರತಿನಿಧಿಗಳು, ಶಿಕ್ಷಕರು, ಸ್ಕೌಟ್ಸ್ & ಗೈಡ್ಸ್ ಸಂಸ್ಥೆ, ಯೋಗ ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಹೆಚ್ಚಿನ ಸಂಖ್ಯೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಜಿಲ್ಲಾ ಆಯುಷ್ ಇಲಾಖೆಯ ವೈದ್ಯಾಧಿಕಾರಿಗಳಾದ ಡಾ. ಗುರುರಾಜ್ ಉಮಚಗಿ ಹಾಗೂ ಡಾ ರಾಜಶೇಖರ ನಾರನಾಳ ಅವರು ಕಾರ್ಯಕ್ರಮ ನಿರೂಪಿಸಿದರು.

ವಿಶೇಷ ಯೋಗ ನೃತ್ಯ ಪ್ರದರ್ಶನ:10ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ರೇಷ್ಮಾ ಮತ್ತು ಸಂಗಡಿಗರು ಹಾಗೂ ಅಗಸ್ತ್ಯ ಅರಕೇರಿ, ಅಕ್ಷರ ಎಂ. ಗೊಂಡಬಾಳ ಮತ್ತು ಪಯೋನಿಯರ್ ಪಬ್ಲಿಕ್ ಶಾಲೆಯ ಮಕ್ಕಳಿಂದ ವಿಶೇಷ ಯೋಗ ನೃತ್ಯ ಪ್ರದರ್ಶನ ಆಕರ್ಷಣೀಯವಾಗಿತ್ತು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ