ಕನ್ನಡಪ್ರಭ ವಾರ್ತೆ ಚಾಮರಾಜನಗರ
ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಜಿಲ್ಲಾಡಳಿತ, ಜಿಪಂ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮೈಸೂರು ವಿಭಾಗಮಟ್ಟದ ದಸರಾ ಕ್ರೀಡಾಕೂಟದ ಅಂಗವಾಗಿ ೮ ಜಿಲ್ಲೆಗಳ ಕ್ರೀಡಾಪಟುಗಳು ಪಾಲ್ಗೊಂಡಿದ್ದ ಫುಟ್‌ಬಾಲ್ ಮತ್ತು ಹ್ಯಾಂಡ್‌ಬಾಲ್ ಸ್ಪರ್ಧೆಗಳನ್ನು ಉದ್ಘಾಟಿಸಿ, ಕ್ರೀಡಾಕೂಟದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ದೇಹ ಸದೃಢಗೊಳ್ಳಲಿದೆ. ಇದರಿಂದ ದೈಹಿಕ, ಮಾನಸಿಕ ಸ್ವಾಸ್ಥ್ಯ, ಸ್ಥಿರತೆ ಉಂಟಾಗಲಿದ್ದು, ಪ್ರತಿಯೊಬ್ಬರು ಕ್ರೀಡೆಗೆ ಆದ್ಯತೆ ನೀಡಬೇಕು. ಕ್ರೀಡೆಯಿಂದ ವ್ಯಕ್ತಿಯ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗಲಿದೆ. ಕ್ರೀಡಾಪಟುಗಳು ತಮ್ಮಲ್ಲಿರುವ ನಕಾರಾತ್ಮಕ ಅಂಶಗಳನ್ನು ಸರಿಪಡಿಸಿಕೊಳ್ಳಲು ಉತ್ತಮ ವೇದಿಕೆಯಾಗಿದೆ. ತೀರ್ಪುಗಾರರು ನಿಷ್ಪಕ್ಷವಾಗಿ ತೀರ್ಪು ನೀಡಬೇಕು ಎಂದರು. ನಮ್ಮದು ಚೆಲುವ ಚಾಮರಾಜನಗರ ಜಿಲ್ಲೆಯಾಗಿದೆ. ಜಿಲ್ಲೆಯಲ್ಲಿ ಶೇ. ೫೨ರಷ್ಟು ಸಮೃದ್ಧ ಅರಣ್ಯ ಪ್ರದೇಶವಿದೆ. ಅಭಯಾರಣ್ಯಗಳು, ದೈವಿಕತೆಗೆ ಹೆಸರುವಾಸಿಯಾದ ಧಾರ್ಮಿಕ ಸ್ಥಳಗಳು, ಕೈಬೀಸಿ ಕರೆಯುವ ಪ್ರವಾಸಿ ತಾಣಗಳಿವೆ. ದಸರಾ ಕ್ರೀಡಾಕೂಟದ ಸ್ಪರ್ಧೆಗಳಲ್ಲಿ ಪಾಲ್ಗೊಳ್ಳಲು ನಗರಕ್ಕೆ ಆಗಮಿಸಿರುವ ಕ್ರೀಡಾಪಟುಗಳು ಇಲ್ಲಿನ ಪ್ರವಾಸಿ ಸ್ಥಳಗಳಿಗೆ ಭೇಟಿ ನೀಡಿ ಜಿಲ್ಲೆಯ ವಿಶೇಷತೆಯನ್ನು ಅರಿಯಬೇಕು ಎಂದು ಅವರು ತಿಳಿಸಿದರು.ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ ಮಾತನಾಡಿ, ಕ್ರೀಡೆಯಲ್ಲಿ ಸೋಲು-ಗೆಲುವು ಸಹಜ. ಕ್ರೀಡಾಪಟುಗಳು ತೀರ್ಪುಗಾರರು ನೀಡುವ ತೀರ್ಪಿಗೆ ಬದ್ದರಾಗಿರಬೇಕು. ಕ್ರೀಡೆಯಲ್ಲಿ ಗೆದ್ದವರು ಹಿಗ್ಗದೇ, ಸೋತವರು ಹತಾಶರಾಗದೇ ಗೆಲ್ಲಲು ಮರಳಿ ಪ್ರಯತ್ನ ಮಾಡಬೇಕು ಎಂದರು.