ಕನ್ನಡಪ್ರಭ ವಾರ್ತೆ ಅರಕಲಗೂಡು
ಜೋಡಿಗುಬ್ಬಿ ಗ್ರಾಮದ ನಿವಾಸಿ ರಾಜೇಗೌಡ ಬಿನ್ ಸುಬ್ಬೇಗೌಡ(64) ಸಾವನ್ನಪ್ಪಿದ ವ್ಯಕ್ತಿ. ಇವರು ಗಂಟಲು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, 2 ತಿಂಗಳಿಂದ ಕಾಣೆಯಾಗಿದ್ದರು. ಕುಟುಂಬದವರು ಸಂಬಂಧಿಕರ ಮನೆ ಎಲ್ಲೆಡೆ ಹುಡುಕಿದರೂ ಪತ್ತೆಯಾಗಿರಲಿಲ್ಲ. ಈ ಕುರಿತು ಹಳ್ಳಿಮೈಸೂರು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಬುಧವಾರ ಅರಣ್ಯ ಇಲಾಖೆ ಸಿಬ್ಬಂದಿ ಅರಣ್ಯವನ್ನು ಸುತ್ತುತ್ತಿದ್ದ ವೇಳೆ ಮರದ ಬಳಿ ವ್ಯಕ್ತಿಯೊಬ್ಬರ ಶವ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದೆ. ಕೂಡಲೇ ಅರಕಲಗೂಡು ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲಿಸಿದರು. ಅಷ್ಟರಲ್ಲಾಗಲೇ ಕುಟುಂಬದವರು ವಿಷಯ ತಿಳಿದು ಸ್ಥಳಕ್ಕಾಗಮಿಸಿ ಮೃತದೇಹವನ್ನು ಪತ್ತೆಹಚ್ಚಿದ್ದು, ಇವರು ಕಾಣೆಯಾಗಿರುವ ಬಗ್ಗೆ ಹಳ್ಳಿಮೈಸೂರು ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದೆವು ಎಂದು ತಿಳಿಸಿದ್ದಾರೆ.