ಕ್ರೀಡಾ ಕ್ಷೇತ್ರದಲ್ಲಿ ಯುವಕರು ಸಾಧನೆ ಮಾಡಲಿ

KannadaprabhaNewsNetwork |  
Published : Jan 07, 2024, 01:30 AM IST
ಬೆಳಗಾವಿಯಲ್ಲಿ ದೇಹದಾರ್ಡ್ಯ ಸ್ಪರ್ಧೆ | Kannada Prabha

ಸಾರಾಂಶ

ಕ್ರೀಡಾಪಟುಗಳಿಗೆ ಸರ್ಕಾರದ ಯಾವುದೇ ಸೌಲಭ್ಯಗಳು ಇರದೇ ಇರುವ ಹಿನ್ನೆಲೆಯಲ್ಲಿ ಕ್ರೀಡಾ ಕ್ಷೇತ್ರದಲ್ಲಿ ನಮ್ಮ ದೇಶ ಸಾಕಷ್ಟು ಹಿಂದೆ ಉಳಿದಿದೆ. ಹಾಗಾಗಿ ತಾವು ಈ ಕೊರತೆಯನ್ನು ನೀಗಿಸಲು ಕಳೆದ ವರ್ಷಗಳಿಂದ ಸತೀಶ ಜಾರಕಿಹೊಳಿ ಫೌಂಡೇಶನ ವತಿಯಿಂದ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸ್ಪರ್ಧೆಗಳನ್ನು ಏರ್ಪಡಿಸಿ ಯುವಕರಿಗೆ ಎಲ್ಲ ರೀತಿಯ ಸಹಾಯ ಸಹಕಾರ ನೀಡಿ ಉತ್ತೇಜಿಸುತ್ತಿದ್ದೇವೆ. ಇದು ನಿರಂತರವಾಗಿ ನಡೆಯಲಿದೆ ಎಂದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಕ್ರೀಡಾ ಕ್ಷೇತ್ರದಲ್ಲಿ ಯುವಕರು ಸಾಧನೆ ಮಾಡಬೆಕೆಂಬ ಉದೇಶದಿಂದ ಪ್ರತಿ ಭಾರೀ ಸತೀಶ ಜಾರಕಿಹೊಳಿ ಫೌಂಡೇಶನ ಹಾಗೂ ರೋಟರಿ ಕ್ಲಬ್‌ ವತಿಯಿಂದ ಸತೀಶ ಶುಗರ್ಸ ಕ್ಲಾಸಿಕ್ ರಾಷ್ಟ್ರಮಟ್ಟದ ದೇಹದಾರ್ಡ್ಯ ಸ್ಪರ್ಧೆ ಏರ್ಪಡಿಸಲಾಗುತ್ತಿದೆ ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಹೇಳಿದರು.

ನಗರದ ಸಿಪಿಎಡ್‌ ಮೈದಾನದಲ್ಲಿ ಶುಕ್ರವಾರ ನಡೆದ 11ನೇ ಸತೀಶ ಶುಗರ್ಸ ಕ್ಲಾಸಿಕ್ ರಾಷ್ಟ್ರಮಟ್ಟದ ದೇಹದಾರ್ಡ್ಯ ಸ್ಪರ್ಧೆ ಸಮಾರಂಭದಲ್ಲಿ ಅವರು ಮಾತನಾಡಿದರು. ಕ್ರೀಡಾಪಟುಗಳಿಗೆ ಸರ್ಕಾರದ ಯಾವುದೇ ಸೌಲಭ್ಯಗಳು ಇರದೇ ಇರುವ ಹಿನ್ನೆಲೆಯಲ್ಲಿ ಕ್ರೀಡಾ ಕ್ಷೇತ್ರದಲ್ಲಿ ನಮ್ಮ ದೇಶ ಸಾಕಷ್ಟು ಹಿಂದೆ ಉಳಿದಿದೆ. ಹಾಗಾಗಿ ತಾವು ಈ ಕೊರತೆಯನ್ನು ನೀಗಿಸಲು ಕಳೆದ ವರ್ಷಗಳಿಂದ ಸತೀಶ ಜಾರಕಿಹೊಳಿ ಫೌಂಡೇಶನ ವತಿಯಿಂದ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಸ್ಪರ್ಧೆಗಳನ್ನು ಏರ್ಪಡಿಸಿ ಯುವಕರಿಗೆ ಎಲ್ಲ ರೀತಿಯ ಸಹಾಯ ಸಹಕಾರ ನೀಡಿ ಉತ್ತೇಜಿಸುತ್ತಿದ್ದೇವೆ. ಇದು ನಿರಂತರವಾಗಿ ನಡೆಯಲಿದೆ ಎಂದರು.

ಮುಂಬರುವ ದಿನಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಬೆಳಗಾವಿ ಜಿಲ್ಲೆಯನ್ನು ಜಗತ್ತಿನ ಭೂಪಟದಲ್ಲಿ ಗುರುತಿಸುವುದರ ಜೊತೆಗೆ ನಮ್ಮ ಜಿಲ್ಲೆಯ ದೇಹದಾರ್ಢ್ಯ ಪಟುಗಳನ್ನು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಪರಿಚಯಿಸುವ ದಢ ಸಂಕಲ್ಪ ನಮ್ಮದಾಗಿದೆ ಎಂದು ಅವರು, ಇಂದು ಬಹುತೇಕರು ದುಶ್ಚಟಕ್ಕೆ ಬಲಿಯಾಗಿ ಆರೋಗ್ಯ ಹಾಳು ಮಾಡಿಕೊಳ್ಳುತ್ತಿದ್ದಾರೆ. ಒಮ್ಮೆ ದೇಹ ಕೆಟ್ಟರೆ ಅದನ್ನು ಮೊದಲಿನ ಸ್ಥಿತಿಗೆ ತರಲು ಸಾಧ್ಯವಿಲ್ಲ. ಉತ್ತಮ ಆರೋಗ್ಯಕ್ಕೆ ಮೊದಲ ಆದ್ಯತೆ ನೀಡಬೆಕು. ದೈಹಿಕವಾಗಿ ಚೆನ್ನಾಗಿದ್ದರೆ ಮಾತ್ರ ಮಾನಸಿಕವಾಗಿ ಸದೃಢರಾಗಿರಬಹುದು. ಯುವಕರು ಸಾಧನೆಗೆ ಹೆಚ್ಚು ಒತ್ತು ಕೊಡಬೇಕು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ರಾಹುಲ್‌ ಜಾರಕಿಹೊಳಿ ಅವರನ್ನು ಸನ್ಮಾನಿಸಲಾಯಿತು. ಈ ವೇಳೆ ಶಾಸಕ ರಾಜು ಸೇಠ್, ಶಿರೀಷ ಗೋಗಟೆ, ಅವಿನಾಶ್ ಪೋತದಾರ, ಅಜಿತ್ ಸಿದ್ದಣ್ಣನವರ, ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ, ಡಾ. ರವಿ ಪಾಟೀಲ, ಚೇತನ್ ಪತಾರೆ, ತುಳಸಿ ಸುಝೈನ್, ಪ್ರೇಮಚಂದ್ ಡಿಗ್ರಾ, ಟಿ.ವಿ.ಪೋಲಿ, ರಿಯಾಜ್‌ ಚೌಗಲಾ, ಮನೋಜ್ ಮೈಚೆಲ್, ಜೈದೀಪ್ ಸಿದ್ದಣ್ಣನವರ, ಸಂತೋಷ ಪಾಟೀಲ ಡಾ. ಹಿರಾಲ್ ಸೇಠ್, ರವಿ ಉಳ್ಳಾಗಡ್ಡಿ ಇದ್ದರು.

PREV

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ