ದೇಹದಾರ್ಢ್ಯ ಸ್ಪರ್ಧೆ ದೈಹಿಕ ಸಾಮರ್ಥ್ಯ ಪ್ರದರ್ಶನವಲ್ಲ: ಕೆ.ಆರ್.ನಂದಿನಿ

KannadaprabhaNewsNetwork |  
Published : Oct 19, 2026, 02:00 AM IST
18ಕೆಎಂಎನ್ ಡಿ25 | Kannada Prabha

ಸಾರಾಂಶ

ಮುಂದಿನ ದಿನಗಳಲ್ಲಿ ಈ ಸ್ಪರ್ಧೆಯನ್ನು ರಾಜ್ಯಮಟ್ಟಕ್ಕೆ ವಿಸ್ತರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಲಾಗುವುದು. ಇದರಿಂದ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ರಾಜ್ಯದ ವಿವಿಧ ಭಾಗಗಳ ಸ್ಪರ್ಧಿಗಳೊಂದಿಗೆ ಸ್ಪರ್ಧಿಸುವ ಅವಕಾಶ ದೊರೆಯಲಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ದೇಹದಾರ್ಢ್ಯ ಕ್ರೀಡೆಯು ಕೇವಲ ದೈಹಿಕ ಸಾಮರ್ಥ್ಯ ಪ್ರದರ್ಶನವಲ್ಲ. ಅದು ವ್ಯಕ್ತಿಯ ಶಿಸ್ತು, ಬದ್ಧತೆ, ತಾಳ್ಮೆ ಮತ್ತು ಗುರಿಯೆಡೆಗಿನ ಸಮರ್ಪಣೆಯನ್ನು ಪ್ರತಿಬಿಂಬಿಸುತ್ತದೆ ಎಂದು ಜಿಪಂ ಸಿಇಒ ಕೆ.ಆರ್.ನಂದಿನಿ ತಿಳಿಸಿದರು.

ಪಟ್ಟಣದ ಕಾವೇರಿ ಶಾಲೆ ಬಿ.ಜಿ.ಎಸ್ ಸಾಂಸ್ಕೃತಿಕ ಕಲಾ ವೇದಿಕೆಯಲ್ಲಿ ದಸರಾ ಅಂಗವಾಗಿ ಆಯೋಜಿಸಿದ್ದ ದೇಹದಾಢ್ಯ ಸ್ಪರ್ಧೆ ಉದ್ಘಾಟಿಸಿ ಮಾತನಾಡಿ, ದಸರಾ ಕೇವಲ ಸಾಂಸ್ಕೃತಿಕ ಉತ್ಸವಕ್ಕೆ ಸೀಮಿತವಾಗಿದೆ. ಕಲೆ, ಸಂಸ್ಕೃತಿ ಮತ್ತು ಕ್ರೀಡೆಗಳನ್ನು ಪೋಷಿಸುತ್ತಾ ಬಂದಿರುವ ಉತ್ಸವವಾಗಿದೆ ಎಂದರು.

ವೇದಿಕೆಗಳಲ್ಲಿ ಸ್ಥಳೀಯ ಪ್ರತಿಭೆಗಳಿಗೆ ತಮ್ಮ ಸಾಮರ್ಥ್ಯ, ಪ್ರತಿಭೆ, ಕೌಶಲ್ಯಗಳನ್ನ ಪ್ರದರ್ಶಿಸಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಹಲವು ಪ್ರತಿಭಾವಂತರು ಕಠಿಣ ಪರಿಶ್ರಮದ ಮೂಲಕ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿ ಕೀರ್ತಿ ತಂದಿದ್ದಾರೆ ಎಂದರು.

ಅಪರ ಜಿಲ್ಲಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ ಮಾತನಾಡಿ, ಕ್ರೀಡೆಗಳು ವ್ಯಕ್ತಿಯ ದೈಹಿಕ ಸಾಮರ್ಥ್ಯವನ್ನು ವೃದ್ಧಿಸುವ ಜೊತೆಗೆ ಮಾನಸಿಕ ದೃಢತೆ, ಶಿಸ್ತು, ಆತ್ಮವಿಶ್ವಾಸ ಹಾಗೂ ಸತತ ಪರಿಶ್ರಮದ ಗುಣಗಳನ್ನು ಬೆಳೆಸಲು ಸಹಕಾರಿಯಾಗುತ್ತವೆ ಎಂದರು.

ಮುಂದಿನ ದಿನಗಳಲ್ಲಿ ಈ ಸ್ಪರ್ಧೆಯನ್ನು ರಾಜ್ಯಮಟ್ಟಕ್ಕೆ ವಿಸ್ತರಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಪ್ರಯತ್ನಿಸಲಾಗುವುದು. ಇದರಿಂದ ಜಿಲ್ಲೆಯ ಪ್ರತಿಭಾವಂತ ಕ್ರೀಡಾಪಟುಗಳಿಗೆ ರಾಜ್ಯದ ವಿವಿಧ ಭಾಗಗಳ ಸ್ಪರ್ಧಿಗಳೊಂದಿಗೆ ಸ್ಪರ್ಧಿಸುವ ಅವಕಾಶ ದೊರೆಯಲಿದೆ ಎಂದರು.

ದೇಹದಾರ್ಡ್ಯ ಪ್ರದರ್ಶನದಲ್ಲಿ ಮಂಡ್ಯ, ಮೈಸೂರು ಜಿಲ್ಲೆಗಳಿಂದ ಸುಮಾರು 81 ಸ್ಪರ್ಧಿಗಳು ಭಾಗವಹಿಸಿದ್ದು, ಬಾಡಿಬಿಲ್ಡ್ ಮಾಡಿರುವ ದಾಂಡಿಗರು ತಮ್ಮ ಕಟ್ಟುಮಸ್ತಾದ ದೇಹದ ವಿವಿಧ ಭಂಗಿಗಳನ್ನ ಪ್ರದರ್ಶಿಸಿ ಸೈ ಎನಿಸಿಕೊಂಡರು.

ವಿಜೇತರಿಗೆ ಪ್ರಥಮ ಬಹುಮಾನ 30 ಸಾವಿರ, ದ್ವಿತೀಯ ಬಹುಮಾನ 20 ಸಾವಿರ ಹಾಗೂ ತೃತೀಯ ಬಹುಮಾನ 10 ಸಾವಿರ ಬಹುಮಾನ ನೀಡಲಾಯಿತು. ಈ ವೇಳೆ ತಹಸೀಲ್ದಾರ್ ಚೇತನಾ ಯಾದವ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಮನುಜಶ್ರೀ, ಶ್ರೀದೇವಿ ಚಲನ ಚಿತ್ರ ಮಾಲೀಕ ಎಂ. ಸುರೇಶ, ಶ್ರೀರಂಗಪಟ್ಟಣ ಟೌನ್ ಆರಕ್ಷಕ ಉಪ ನೀರಿಕ್ಷಕರು ಸುರೇಶ ಕುಮಾರ್ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾರ್ಕೆಟ್‌ಗಳಲ್ಲಿ ದಸರಾ ಖರೀದಿ ಭರಾಟೆ ಜೋರು
ಮನೆಯ ಸಮೀಪ ಹೈಟೆನ್ಷನ್‌ ವೈಯರ್‌ ತಗುಲಿ ಅಕ್ಕ-ತಮ್ಮನಿಗೆ ಗಂಭೀರ ಗಾಯ