ಹುಬ್ಬಳ್ಳಿ:
ಇಲ್ಲಿನ ಜೆ.ಸಿ. ನಗರದ ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ ಸಭಾಭವನದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿದ್ದ ಸಂಸ್ಥೆಯ 98ನೇ ಸಂಸ್ಥಾಪನ ದಿನಾಚರಣೆ ಹಾಗೂ ವಾಣಿಜ್ಯ ರತ್ನ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಉಪನ್ಯಾಸಕರಾಗಿ ಪಾಲ್ಗೊಂಡು ಮಾತನಾಡಿದರು.
ಕೃಷಿ, ಕೈಗಾರಿಕೆ, ವಾಣಿಜ್ಯ, ಉದ್ಯಮದ ಅಭಿವೃದ್ಧಿ ದೃಷ್ಟಿಯಿಂದ ಮಹರಾಷ್ಟ್ರದ ವಿದರ್ಭ ಮಾದರಿಯಲ್ಲಿ ಹೂಡಿಕೆದಾರರನ್ನು ಆಕರ್ಷಿಸುವತ್ತ ಯೋಜನೆಗಳು ರೂಪಿಸುವ ಕೆಲಸಗಳಾಗಬೇಕಿದೆ. ಉತ್ತರ ಕರ್ನಾಟಕ ಎಲ್ಲ ಬಗೆಯ ಸಂಪನ್ಮೂಲ ಹೊಂದಿದ್ದರೂ, ಕೈಗಾರಿಕೆ, ವಾಣಿಜ್ಯ ಕ್ಷೇತ್ರದ ಬೆಳವಣಿಗೆ ಅಷ್ಟರಮಟ್ಟಿಗೆ ಆಗಿಲ್ಲ. ಈ ನಿಟ್ಟಿನಲ್ಲಿ ದೊಡ್ಡ ಗುರಿ ಮತ್ತು ದೂರದೃಷ್ಟಿಯೊಂದಿಗೆ ವಾಣಿಜ್ಯೋದ್ಯಮಿಗಳು, ಜನಪ್ರತಿನಿಧಿಗಳು ಪ್ರಯತ್ನಾಶೀಲರಾಗಿ ಮುನ್ನಡೆಯಬೇಕು ಎಂದು ಸಲಹೆ ನೀಡಿದರು.ಕಾಲಕ್ಕೆ ತಕ್ಕಂತೆ ಬದಲಾಗಿ:
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಮಹೇಶ ಟೆಂಗಿನಕಾಯಿ, ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ (ಕೆಸಿಸಿಐ) ಕೇವಲ ವ್ಯಾಪಾರಿಗಳ ಸಂಘಟನೆಯಾಗಿಯೇ ಉಳಿಯದೆ, ಉದ್ಯಮ, ವ್ಯಾಪಾರ ಹಾಗೂ ಸಮಾಜದ ವಿವಿಧ ಕ್ಷೇತ್ರಗಳ ಬೆಳವಣಿಗೆಗೆ ಮಾರ್ಗದರ್ಶನ ನೀಡುತ್ತಿರುವ ರಾಜ್ಯದ ಮಾದರಿ ಸಂಸ್ಥೆಯಾಗಿದೆ. ಕನಿಷ್ಠ ವೇತನ ಸಂಬಂಧ ಕೈಗಾರಿಕೆಗಳಿಗೆ ಎದುರಾಗಿರುವ ಸಮಸ್ಯೆ ಕುರಿತು ಅಧಿವೇಶನದಲ್ಲಿ ಪ್ರಬಲವಾಗಿ ಪ್ರಶ್ನಿಸಿ ಕೈಗಾರಿಕೆಗಳ ಪರವಾಗಿ ಧ್ವನಿ ಎತ್ತುವುದಾಗಿ ಭರವಸೆ ನೀಡಿದರು.
ಕೆಸಿಸಿಐ ಅಧ್ಯಕ್ಷ ಜಿ.ಕೆ. ಆದಪ್ಪಗೌಡರ, ಉಪಾಧ್ಯಕ್ಷ ವೀರಣ್ಣ ಕಲ್ಲೂರ, ಸಂಸ್ಥೆ ಮಾಜಿ ಅಧ್ಯಕ್ಷರಾದ ವಿ.ಪಿ. ಲಿಂಗನಗೌಡರ, ಸಿ.ಬಿ. ಪಾಟೀಲ, ಎಂ.ಸಿ. ಹಿರೇಮಠ, ವಸಂತ ಲದವಾ, ರಮೇಶ ಪಾಟೀಲ, ಮಹೇಂದ್ರ ಲದ್ದಡ, ವಿನಯ ಜವಳಿ, ಎಸ್.ಪಿ. ಸಂಶಿಮಠ, ಗೌರವ ಕಾರ್ಯದರ್ಶಿ ಉದಯ ರೇವಣಕರ ಸೇರಿದಂತೆ ಹಲವರಿದ್ದರು.
ಕಾರ್ಯಕ್ರಮದಲ್ಲಿ ವಾಣಿಜ್ಯ, ಉದ್ದಿಮೆ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದ ಹುಬ್ಬಳ್ಳಿಯ ಗೋವಿಂದ ಜೋಶಿ, ಬ್ಯಾಡಗಿಯ ರಾಜಶೇಖರ ಎಸ್. ಮಾಗನೂರ, ನಂದಿಕೇಶ್ವರದ ಎಂ.ಬಿ. ಹಂಗರಗಿ, ಹುಬ್ಬಳ್ಳಿಯ ಶಾಂತಿಲಾಲ ಓಸ್ತವಾಲ, ಕಾಂತಿಲಾಲ ಎಂ. ಪುರೋಹಿತ, ಸವಣೂರನ ಸುಮಂತ ಆರ್. ಸಿಂಧೂರ ಅವರಿಗೆ "ವಾಣಿಜ್ಯ ರತ್ನ " ಪ್ರಶಸ್ತಿ ಪ್ರದಾನ ಮಾಡಲಾಯಿತು.