ಲಾರಿಗೆ ಹಿಂದಿನಿಂದ ಬೊಲೇರೋ ವಾಹನ ಡಿಕ್ಕಿ: ಇಬ್ಬರ ಸಾವು

KannadaprabhaNewsNetwork |  
Published : Apr 26, 2024, 12:45 AM IST
25ಶಿರಾ3:  ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ಗುರುವಾರ ಬೆಳಗಿನ ಜಾವ 5 ಗಂಟೆ ಸುಮಾರಿಗೆ ಮುಂದೆ ಹೋಗುತ್ತಿದ್ದ ಲಾರಿಗೆ ಹಿಂದಿನಿಂದ ದ್ರಾಕ್ಷಿ ತುಂಬಿಕೊಂಡು ಬೆಂಗಳೂರು ಕಡೆಗೆ ಹೋಗುತ್ತಿದ್ದ ಬೊಲೆರೋ ಪಿಕಪ್ ವಾಹನವು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪಿದ್ದಾರೆ. | Kannada Prabha

ಸಾರಾಂಶ

ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗುರುವಾರ ಬೆಳಗಿನ ಜಾವ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬೊಲೆರೋ ಪಿಕಪ್ ವಾಹನವು ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ಕನ್ನಡಪ್ರಭ ವಾರ್ತೆ ಶಿರಾಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಗುರುವಾರ ಬೆಳಗಿನ ಜಾವ ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬೊಲೆರೋ ಪಿಕಪ್ ವಾಹನವು ಡಿಕ್ಕಿ ಹೊಡೆದ ಪರಿಣಾಮ ವಾಹನದಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.ಮೃತಪಟ್ಟವರನ್ನು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ರಾಮತೀರ್ಥ ಗ್ರಾಮದ ಉಮೇಶ್ ಮಟ್ಟಪ್ಪಗೋಳ (36) ಹಾಗೂ ಗಣಪತಿ ಸುರೇಶ್ (17) ಎಂದು ಗುರುತಿಸಲಾಗಿದೆ. ಚಿಕ್ಕನಹಳ್ಳಿ ಬಳಿ ಮೇಲ್ಸೇತುವೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನಗಳ ದಟ್ಟಣೆ ಹೆಚ್ಚಿರುವ ಹಿನ್ನೆಲೆಯಲ್ಲಿ ಅಪಘಾತಗಳು ಸಂಭವಿಸುತ್ತಿವೆ. ಅಪಘಾತದಿಂದ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ತಕ್ಷಣ ಕಳ್ಳಂಬೆಳ್ಳ ಪೊಲೀಸರು ಸ್ಥಳಕ್ಕಾಗಮಿಸಿ ವಾಹನಗಳನ್ನು ತೆರವುಗೊಳಿಸುವ ಕಾರ್ಯ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಈ ಸಂಬಂಧ ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಡಿಮೆಯಾಗಲಿದೆ ಬೆಂಗಳೂರು - ದಾವಣರೆ ಮಧ್ಯೆ ಅಂತರ : ಎರಡೂ ಗಂಟೆ ಪ್ರಯಾಣ ಸಮಯ ಉಳಿತಾಯ
ನೇಮಕಾತಿ ಪ್ರಕ್ರಿಯೆ ಇನ್ನು ಸುಗಮ-ಒಳಮೀಸಲು ಬಿಲ್‌ಗೆ ಕೊನೆಗೂ ಗೌರ್ನರ್‌ ಗೆಹಲೋತ್‌ ಅಂಕಿತ