ಬೊಮ್ಮಾಯಿ ಗೆಲುವು ತಡೆಯಲು ಸಾಧ್ಯವಿಲ್ಲ

KannadaprabhaNewsNetwork |  
Published : Apr 27, 2024, 01:19 AM IST
ಲಕ್ಷ್ಮೇಶ್ವರ ಪಟ್ಟಣದ ವಿವಿಧ ವಾರ್ಡುಗಳಲ್ಲಿ ಶಾಸಕ ಡಾ ಚಂದ್ರು ಲಮಾಣಿ ಅವರು ಮನೆ ಮನೆಗಳಿಗೆ ತೆರಳಿ ಪ್ರಚಾರ ನಡೆಸಿ ಮತಯಾಚನೆ ಮಾಡಿದರು. | Kannada Prabha

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತದಲ್ಲಿ ಭಾರತವು ದೇಶ ಸುರಕ್ಷಿತ

ಲಕ್ಷ್ಮೇಶ್ವರ: ಬಸವರಾಜ ಬೊಮ್ಮಾಯಿ ಹಾವೇರಿ -ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದನಾಗುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.

ಶುಕ್ರವಾರ ಪಟ್ಟಣದ ಲಕ್ಷ್ಮೀ ನಗರ, ಸೋಮೇಶ್ವರ ನಗರ ಸೇರಿದಂತೆ ವಿವಿಧ ವಾರ್ಡುಗಳಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿ ಮತಯಾಚನೆ ಮಾಡಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆಡಳಿತದಲ್ಲಿ ಭಾರತವು ದೇಶ ಸುರಕ್ಷಿತವಾಗಿದೆ. ದೇಶದ ಅಭಿವೃದ್ಧಿಗಾಗಿ ಹಗಲಿರುಳು ಶ್ರಮಿಸುವ ಪ್ರಧಾನಿ ನರೇಂದ್ರ ಮೋದಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕಾದರೆ ನೀವು ಬಸವರಾಜ ಬೊಮ್ಮಾಯಿ ಅವರನ್ನು ಹೆಚ್ಚಿನ ಬಹುಮತದಿಂದ ಆರಿಸಿ ಬರುವಂತೆ ನೋಡಿಕೊಳ್ಳಬೇಕು. ಹಿಂದೂ -ಮುಸ್ಲಿಂ ಬಾಂಧವರ ನಡುವೆ ಹುಳಿ ಹಿಂಡಿ ಅಧಿಕಾರಕ್ಕೆ ಬರುವ ಕಾಂಗ್ರೆಸ ಪಕ್ಷವು ಕಳೆದ 70 ವರ್ಷಗಳಿಂದ ಅವರನ್ನು ಕೇವಲ ಓಟ್ ಬ್ಯಾಂಕ್ ಮಾಡಿಕೊಂಡಿದ್ದೆ. ದೊಡ್ಡ ಸಾಧನೆಯಾಗಿದೆ. ಕಾಂಗ್ರೆಸ್ ಪಕ್ಷವು ಕೇವಲ ಓಲೈಕೆ ರಾಜಕಾರಣ ಮಾಡುತ್ತಿದೆ. ಭ್ರಷ್ಟಾಚಾರ ರಹಿತ ಮತ್ತು ಪಾರದರ್ಶಕ ಆಡಳಿತ ನೀಡುವ ಮೂಲಕ ಜನಸಾಮಾನ್ಯರ ಜೀವನ ಮಟ್ಟವನ್ನು ಎತ್ತರಿಸಿದ ಮೋದಿ ದೇಶದ ಚುಕ್ಕಾಣಿ ಹಿಡಿಯುವಂತೆ ನೋಡಿಕೊಳ್ಳಬೇಕು.

ಕಾಂಗ್ರೆಸ್ 70 ವರ್ಷಗಳಲ್ಲಿ ಮಾಡಿದ ಸಾಧನೆ ನರೇಂದ್ರ ಮೋದಿ ಕೇವಲ 10 ವರ್ಷಗಳಲ್ಲಿ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷವು ಗಾಂಧಿ ಕುಟುಂಬದ ಆಸ್ತಿಯಾಗಿದೆ. ಹಿಂದುಳಿದ ಮತ್ತು ದಲಿತ ಬಡವರ ಆಸ್ತಿಯನ್ನು ಅವರೂ ತೀರಿಕೊಂಡ ನಂತರ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಂಡು ಅದನ್ನು ಸರ್ಕಾರ ವಶಪಡಿಸಿಕೊಳ್ಳುವ ಯೋಜನೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಸೇರಿಸಿದೆ. ಹೀಗೆ ಬಡವರ ಪಾಲಿಗೆ ಶಾಪವಾಗಿರುವ ಕಾಂಗ್ರೆಸ ಪಕ್ಷವು ಅಧಿಕಾರಕ್ಕೆ ಬರದಂತೆ ತಡೆಯಲು ನಾವೆಲ್ಲ ಸಿದ್ದರಾಗಬೇಕು ಎಂದು ಹೇಳಿದರು.

ಈ ವೇಳೆ ಪುರಸಭೆ ಸದಸ್ಯ ಪ್ರವೀಣ ಬಾಳಿಕಾಯಿ, ಸುನೀಲ ಮಹಾಂತಶೆಟ್ಟರ, ಗಂಗಾಧರ ಮೆಣಸಿನಕಾಯಿ, ದುಂಡೇಶ ಕೊಠಡಿ, ಬಾಬಣ್ಣ ವಡಕಣ್ಣವರ, ಎಚ್.ಎಫ್.ಮುದಗಲ್ಲ, ಉಳವೇಶಗೌಡ ಪಾಟೀಲ, ರಮೇಶ ಹಾಳದೋಟದ, ವಿಜಯ ಕುಂಬಾರ, ವಿಜಯ ಹತ್ತಿಕಾಳ, ಸಂತೋಷ ಜಾವೂರ, ವಿಶಾಲ ಬಟಗುರ್ಕಿ ಸೇರಿದಂತೆ ಅನೇಕರು ಇದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ