ಮೆಕ್ಕೆಜೋಳ ಖರೀದಿಗೆ ನಿರ್ದೇಶನ ನೀಡಲು ಸಿಎಂಗೆ ಬೊಮ್ಮಾಯಿ ಪತ್ರ

KannadaprabhaNewsNetwork |  
Published : Nov 21, 2025, 02:15 AM IST
ಪೋಟೋ ಇದೆ. | Kannada Prabha

ಸಾರಾಂಶ

ಕಳೆದ ಎರಡು ವರ್ಷದಿಂದ ವಿಪರೀತ ಮಳೆಯಿಂದ ಹಲವಾರು ಬೆಳೆ ನಾಶವಾಗಿದ್ದು, ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದೆ. ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಆಗ್ರಹಿಸಿದ್ದಾರೆ.

ಹಾವೇರಿ:ಕಳೆದ ಎರಡು ವರ್ಷದಿಂದ ವಿಪರೀತ ಮಳೆಯಿಂದ ಹಲವಾರು ಬೆಳೆ ನಾಶವಾಗಿದ್ದು, ಬೆಳೆ ನಷ್ಟ ಸರ್ವೆಯಲ್ಲಿ ಲೋಪವಾಗಿದೆ. ಕೂಡಲೇ ರಾಜ್ಯಾದ್ಯಂತ ಇದನ್ನು ಸರಿಪಡಿಸಿ ನಷ್ಟ ಆದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಆಗ್ರಹಿಸಿದ್ದಾರೆ.ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಅವರು, ಕಳೆದ ಎರಡು ವರ್ಷ ವಿಪರೀತ ಮಳೆ ಬಿದ್ದು ರಾಜ್ಯದ ಬಹುತೇಕ ಬೆಳೆಗಳು ನಾಶವಾಗಿವೆ. ರೈತರಿಗೆ ಎರಡು ವರ್ಷವೂ ಮೆಕ್ಕೆಜೋಳ, ಸೊಯಾಬಿನ್, ಹೆಸರು, ಈರುಳ್ಳಿ ಬೆಳೆ ನಾಶವಾಗಿದೆ. ಕಳೆದ ವರ್ಷ ಮಳೆಯಿಂದ ನಷ್ಟವಾದ ಬೆಳೆಗೆ ಯಾವುದೇ ಪರಿಹಾರ ಸಿಕ್ಕಿಲ್ಲ, ಮೊನ್ನೆ ತಾವು ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿಯನ್ನು ಸಲ್ಲಿಸಿರುವುದನ್ನು ನಾವೆಲ್ಲರೂ ಗಮನಿಸಿದ್ದೇವೆ. ಆದರೆ, ವಾಸ್ತವಾಂಶ ತಮ್ಮ ಗಮನಕ್ಕೆ ತರಲು ಬಯಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಬೆಳೆ ನಷ್ಟ ಪರಿಹಾರ ಸರ್ವೆ ಕಾರ್ಯ ಸಮರ್ಪಕವಾಗಿ ನ್ಯಾಯ ಸಮ್ಮತವಾಗಿ ನಡೆದಿಲ್ಲ. ಕೃಷಿ, ಕಂದಾಯ ಮತ್ತು ಸಾಂಖಿಕ ಇಲಾಖೆ ಅಧಿಕಾರಿಗಳು ವ್ಯಾಪಕವಾಗಿ ರೈತರ ಜಮೀನಿನಲ್ಲಿ ಪರೀಕ್ಷೆ ಮಾಡದೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಇದರ ಪರಿಣಾಮವಾಗಿ ಹಲವಾರು ತಾಲೂಕುಗಳಲ್ಲಿ ಒಟ್ಟು ಬಿತ್ತನೆಯಾದ ಪ್ರದೇಶದ ಶೇ. 10ರಷ್ಟು ಬೆಳೆ ನಾಶ ಆಗಿಲ್ಲ ಎನ್ನುವ ವರದಿ ಬಂದಿದೆ. ಕೆಲವು ತಾಲೂಕುಗಳಲ್ಲಿ ನಷ್ಟವೇ ಆಗಿಲ್ಲ ಎನ್ನುವುದು ಸತ್ಯಕ್ಕೆ ದೂರವಾಗಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿ ಸಾಕಷ್ಟು ಬೆಳೆ ನಷ್ಟವಾಗಿದ್ದರೂ ನಷ್ಟವಾಗಿಲ್ಲ ಎಂದು ವರದಿ ನೀಡಿದ್ದಾರೆ. ರಾಜ್ಯಾದ್ಯಂತ ಇದನ್ನು ಕೂಡಲೇ ಸರಿಪಡಿಸಬೆಕು, ನಷ್ಟವಾದ ಎಲ್ಲ ರೈತರಿಗೆ ಬೆಳೆ ಪರಿಹಾರ ಕೊಡಬೇಕು. ಮತ್ತು ಇದಕ್ಕೆ ಕೂಡಲೇ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ. ಮೆಕ್ಕೆಜೋಳ ಖರೀದಿ:ರಾಜ್ಯದಲ್ಲಿ ಮೆಕ್ಕೆಜೋಳ ಸುಮಾರು 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದು, ಕಳೆದ ವರ್ಷ 54 ಲಕ್ಷ ಮೆಟ್ರಿಕ್ ಟನ್ ಬಂದಿದ್ದು, ಈ ವರ್ಷವೂ ಅಷ್ಟೇ ಉತ್ಪನ್ನ ಬರುವ ನಿರೀಕ್ಷೆ ಇದೆ. ಈ ವರ್ಷ ಮೆಕ್ಕೆಜೋಳದ ಬೆಲೆ ಸಂಪೂರ್ಣ ಕುಸಿದಿದೆ. ಅದು ಪ್ರತಿ ಕ್ವಿಂಟಾಲ್‌ಗೆ ₹1600 ಗೆ ಇಳಿದಿರುವುದು ರೈತರಿಗೆ ಆಘಾತ ತಂದಿದೆ. ಕೇಂದ್ರ ಸರ್ಕಾರ ಈಗಾಗಲೇ ಎಂಎಸ್‌ಪಿ ₹2400 ಘೋಷಣೆ ಮಾಡಿದೆ. ರೈತರು ಇದರ ಮೇಲೆ ರಾಜ್ಯ ಸರ್ಕಾರ ಕನಿಷ್ಠ ₹500 ಪ್ರತಿ ಕ್ವಿಂಟಲ್‌ಗೆ ಕೊಡಬೇಕೆಂದು ಎಲ್ಲ ಜಿಲ್ಲೆಗಳಲ್ಲಿ ಆಗ್ರಹಿಸುತ್ತಿದ್ದಾರೆ. ಈ ಹಿಂದೆ ಕೇಂದ್ರ ಸರ್ಕಾರದ ನಿರ್ದೆಶನಕ್ಕೆ ಕಾಯದೇ ಮೆಕ್ಕೆ ಜೋಳ ಖರೀದಿಸಿ ಅದು ಹಾಳಾಗದೇ ಇರುವ ಬೆಳೆ ಇರುವುದರಿಂದ ಸೂಕ್ತ ಮಾರುಕಟ್ಟೆ ದರ ಹೆಚ್ಚಾದಾಗ ರಾಜ್ಯ ಸರ್ಕಾರ ಮಾರಬಹುದು. ನಂತರ ಕೇಂದ್ರಕ್ಕೆ ವರದಿ ಕಳುಹಿಸಬಹುದು. ಈ ಬಗ್ಗೆ ಕೂಡಲೆ ಒಂದು ನಿರ್ಧಾರ ಮಾಡಿ ಖರೀದಿಗೆ ಸೂಕ್ತ ನಿರ್ದೇಶನ ನೀಡಲು ವಿನಂತಿಸಿಕೊಂಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಜೆಪಿ ಎಷ್ಟು ಕೇಸ್‌ ಸಿಬಿಐಗೆ ನೀಡಿದೆ? : ಸಿಎಂ
ರಾಷ್ಟ್ರಧ್ವಜ ತಯಾರಿಸ್ತಿ ದ್ದ ಕೈಗಳಲ್ಲೀಗ ಕೆಲಸವಿಲ್ಲ!