ಬೂವನಹಳ್ಳಿ ಸೊಸೈಟಿ ಅಧ್ಯಕ್ಷರಾಗಿ ಬೊಮ್ಮೇಗೌಡ

KannadaprabhaNewsNetwork | Published : May 7, 2025 12:46 AM

ಸಾರಾಂಶ

ಬೂವನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಆಯ್ಕೆಯಾದ ಪತ್ರಕರ್ತ ಹಾಗೂ ಕಸಾಪ ಗೌರವ ಕಾರ್ಯದರ್ಶಿ ಬಿ.ಆರ್. ಬೊಮ್ಮೇಗೌಡ ಅವರನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು. ಪತ್ರಕರ್ತರು ಇತರೆ ಕ್ಷೇತ್ರದಲ್ಲಿ ಬೆಳೆದಾಗ ಅವರನ್ನು ಈ ರೀತಿ ಸನ್ಮಾನಿಸಿ ಗೌರವಿಸುತ್ತಿರುವುದು ಉತ್ತಮವಾಗಿದೆ. ಇತ್ತೀಚಿಗೆ ನಡೆದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಕೊಂಡೊಯ್ದಿದ್ದಾರೆ ಎಂದು ಇದೇ ವೇಳೆ ನೆನಪಿಸಿಕೊಂಡರು.

ಕನ್ನಡಪ್ರಭ ವಾರ್ತೆ ಹಾಸನ

ತಾಲೂಕಿನ ಬೂವನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ಆಯ್ಕೆಯಾದ ಪತ್ರಕರ್ತ ಹಾಗೂ ಕಸಾಪ ಗೌರವ ಕಾರ್ಯದರ್ಶಿ ಬಿ.ಆರ್. ಬೊಮ್ಮೇಗೌಡ ಅವರನ್ನು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸನ್ಮಾನಿಸಿ ಗೌರವಿಸಲಾಯಿತು.

ಇದೇ ವೇಳೆ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ಎಚ್. ವೇಣುಕುಮಾರ್ ಮಾತನಾಡಿ, ಪತ್ರಕರ್ತರಾಗಿ ಸೇವೆ ಸಲ್ಲಿಸುವುದರ ಜೊತೆಗೆ ಕಸಾಪದಲ್ಲಿಯೂ ಕೂಡ ಕರ್ತವ್ಯ ಸಲ್ಲಿಸುತ್ತಿದ್ದಾರೆ. ನಂತರದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರಾಗಿ ನಮ್ಮೊಳಗಿನ ಒಬ್ಬರು ಆಯ್ಕೆ ಆಗಿರುವುದು ನಮಗೆಲ್ಲಾ ಸಂತೋಷ ತಂದಿದೆ. ಇವರಿಗೆ ಮುಂದೆ ಇನ್ನು ದೊಡ್ಡ ಹುದ್ದೆ ಸಿಗಲೆಂದು ಹಾರೈಸುವುದಾಗಿ ಹೇಳಿದರು.

ರಾಜ್ಯ ಕಾರ್ಯಕಾರಿ ಪತ್ರಕರ್ತರ ಸಂಘದ ಸದಸ್ಯ ಎಚ್.ಬಿ. ಮದನ್ ಗೌಡ ಮಾತನಾಡಿ, ಮೊದಲ ಬಾರಿಗೆ ಸದಸ್ಯರಾಗಿ ನಂತರ ಅಧ್ಯಕ್ಷರಾಗಿ ಬೊಮ್ಮೇಗೌಡರು ಆಯ್ಕೆಗೊಂಡಿದ್ದಾರೆ. ಪತ್ರಕರ್ತರ ಸಹಕಾರ ಕ್ಷೇತ್ರದಲ್ಲೂ ಕೂಡ ಸೇವೆ ಸಲ್ಲಿಸುತ್ತಿದ್ದಾರೆ ಎಂದು ಶ್ಲಾಘಿಸಿದರು. ಮುಂದೆ ರಾಜಕೀಯ ಕ್ಷೇತ್ರದಲ್ಲೂ ಕೂಡ ಛಾಯೆ ಮೂಡಿಸಿ. ಮುಂದೆ ಮಹಾನಗರಪಾಲಿಕೆಯಲ್ಲಿ ಸ್ಪರ್ದೆ ಮಾಡಿ ಕಾಪೋರೇಟರ್ ಆಗಲಿ. ಯಾರೇ ದೊಡ್ಡ ಹುದ್ದೆ ಬಂದಾಗ ಅವರನ್ನು ಪ್ರೋತ್ಸಾಹಿಸಿ ಬೆನ್ನು ತಟ್ಟುವ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು. ಪತ್ರಕರ್ತರು ಇತರೆ ಕ್ಷೇತ್ರದಲ್ಲಿ ಬೆಳೆದಾಗ ಅವರನ್ನು ಈ ರೀತಿ ಸನ್ಮಾನಿಸಿ ಗೌರವಿಸುತ್ತಿರುವುದು ಉತ್ತಮವಾಗಿದೆ. ಇತ್ತೀಚಿಗೆ ನಡೆದ ರಾಜ್ಯ ಮಟ್ಟದ ಕ್ರಿಕೆಟ್ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಕೊಂಡೊಯ್ದಿದ್ದಾರೆ ಎಂದು ಇದೇ ವೇಳೆ ನೆನಪಿಸಿಕೊಂಡರು. ರಾಜ್ಯ ಕಾರ್ಯಕಾರಿ ಪತ್ರಕರ್ತರ ಸಂಘದ ವಿಶೇಷ ಆಹ್ವಾನಿತರಾದ ರವಿನಾಕಲಗೂಡು ಮಾತನಾಡಿ, ನಮ್ಮೊಟ್ಟಿಗೆ ಇದ್ದ ಬೊಮ್ಮೇಗೌಡರು ಅಧ್ಯಕ್ಷರಾಗಿ ಆಯ್ಕೆ ಆಗಿರುವುದು ಉತ್ತಮವಾಗಿದೆ. ಅವರಿಗೆ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು. ಇದೇ ವೇಳೆ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಸಿ. ಶಶಿಕುಮಾರ್, ಉಪಾಧ್ಯಕ್ಷ ಮೋಹನ್ ಕುಮಾರ್, ಹರೀಶ್, ಖಜಾಂಚಿ ಕುಮಾರ್, ಮೋಹನ್, ಕಾರ್ಯದರ್ಶಿ ಸಿ.ಬಿ. ಸಂತೋಷ್, ಮಾಜಿ ಅಧ್ಯಕ್ಷರಾದ ಬಿ.ಆರ್. ಉದಯಕುಮಾರ್, ಪ್ರಕಾಶ್, ನಾಗರಾಜು ಹೆತ್ತೂರ್ ಇತರರು ಉಪಸ್ಥಿತರಿದ್ದರು.

Share this article