ಗದಗ: ಡಿ. 4ರಂದು ಬೆಳಗ್ಗೆ 10.30ಕ್ಕೆ ಗದುಗಿನ ತೋಂಟದಾರ್ಯ ಮಠದಲ್ಲಿರುವ ಲಿಂ. ಜಗದ್ಗುರು ತೋಂಟದ ಸಿದ್ಧಲಿಂಗ ಶ್ರೀಗಳ ಸಭಾಂಗಣದಲ್ಲಿ ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥ ಬಿಡುಗಡೆ ಜರುಗಲಿದೆ ಎಂದು ಹಿರಿಯ ಮುಖಂಡ ಗುರಣ್ಣ ಬಳಗಾನೂರ ಹೇಳಿದರು.
ಅಧ್ಯಕ್ಷತೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ವಹಿಸಲಿದ್ದಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡರು, ಹಣಕಾಸು ಆಯೋಗದ ಅಧ್ಯಕ್ಷ ನಾರಾಯಣಸ್ವಾಮಿ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ, ಶಾಸಕ ಸಿ.ಸಿ. ಪಾಟೀಲ, ರೋಣ ಶಾಸಕ ಜಿ.ಎಸ್. ಪಾಟೀಲ, ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ, ವಿಪ ಸದಸ್ಯ ಸಲೀಮ ಅಹ್ಮದ, ಎಸ್.ವಿ. ಸಂಕನೂರ, ಮಾಜಿ ಸಚಿವ ಎಸ್.ಎಸ್. ಪಾಟೀಲ, ಎ.ಎಂ. ಹಿಂಡಸಗೇರಿ, ಬಿ.ಆರ್. ಯಾವಗಲ್, ಕಳಕಪ್ಪ ಬಂಡಿ, ಮಾಜಿ ಸಂಸದ ಆರ್.ಎಸ್. ಪಾಟೀಲ, ಐ.ಜಿ. ಸನದಿ, ಮಾಜಿ ಶಾಸಕ ಜಿ.ಎಸ್. ಗಡ್ಡದೇವರಮಠ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ ಇವರುಗಳು ಭಾಗವಹಿಸಲಿದ್ದಾರೆ.
ಈ ಗ್ರಂಥವನ್ನು ನಮ್ಮ ರಾಜ್ಯದ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಗಾಂಧೀಜಿಯ ತತ್ವಾದರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡಿರುವ ವೂಡೆ ಪಿ. ಕೃಷ್ಣ ಬೆಂಗಳೂರು ಬಿಡುಗಡೆ ಮಾಡಲಿದ್ದಾರೆ ಎಂದರು. ಸುದ್ದಿಗೋಷ್ಠಿಯಲ್ಲಿ ಬಿ.ಬಿ. ಅಸೂಟಿ, ಅಶೋಕ ಮಂದಾಲಿ, ರವಿ ಮೂಲಿಮನಿ, ಸಂಗು ಕೆರಕಲಮಟ್ಟಿ, ಶಿವರಾಜ ಕೋಟಿ ಮುಂತಾದವರು ಹಾಜರಿದ್ದರು.