ಮೂರು ವರ್ಷಗಳ ಶ್ರಮಕ್ಕೆ ಫಲ ಬೂಕರ್ ಪ್ರಶಸ್ತಿ: ದೀಪಾ ಭಸ್ತಿ

KannadaprabhaNewsNetwork |  
Published : Jun 02, 2025, 12:58 AM ISTUpdated : Jun 02, 2025, 01:29 PM IST
ಚಿತ್ರ : 1ಎಂಡಿಕೆ4 : .ಮಾ.ಕಾರ್ಯಪ್ಪ ಕಾಲೇಜು ಹಾಗೂ ಹಳೇ ವಿದ್ಯಾರ್ಥಿಗಳಿಂದ ಲೇಖಕಿ ದೀಪಾಭಾಸ್ತಿ ಅವರನ್ನು ಸನ್ಮಾನಿಸಲಾಯಿತು.  | Kannada Prabha

ಸಾರಾಂಶ

ಸುಮಾರು 3 ವರ್ಷಗಳ ನಿರಂತರ ಶ್ರಮದಿಂದ ಬೂಕರ್‌ ಪ್ರಶಸ್ತಿ ಲಭ್ಯವಾಗಿದೆ ಎಂದು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ದೀಪಾ ಭಸ್ತಿ ಹೇಳಿದ್ದಾರೆ.

  ಮಡಿಕೇರಿ : ಸುಮಾರು 3 ವರ್ಷಗಳ ನಿರಂತರ ಶ್ರಮದಿಂದ ಬೂಕರ್‌ ಪ್ರಶಸ್ತಿ ಲಭ್ಯವಾಗಿದ್ದು, ಪತಿಯ ಸಹಕಾರ ಹಾಗೂ ಪೋಷಕರ ಪ್ರೋತ್ಸಾಹದಿಂದ ಯಶಸ್ಸು ಪಡೆಯಲು ಸಾಧ್ಯವಾಯಿತು ಎಂದು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ ದೀಪಾ ಭಸ್ತಿ ಹೇಳಿದ್ದಾರೆ.

ನಗರದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಾಗೂ ಕಾಲೇಜಿನ ಹಳೇ ವಿದ್ಯಾರ್ಥಿಗಳ ಸಂಘದ ವತಿಯಿಂದ ನೀಡಲಾದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.ನಗರದಲ್ಲಿರುವ ದೀಪಾ ಭಸ್ತಿ ಅವರ ಮನೆಗೆ ಭೇಟಿ ನೀಡಿದ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಮತ್ತು ಸಂಘದ ಪದಾಧಿಕಾರಿಗಳು ದೀಪಾ ಭಸ್ತಿ ಹಾಗೂ ಅವರ ಪತಿ ಚೆಟ್ಟೀರ ನಾಣಯ್ಯ ಅವರನ್ನು ಸನ್ಮಾನಿಸಲಾಯಿತು. 

ಪ್ರಾಂಶುಪಾಲ ಮೇಜರ್ ಪ್ರೊ.ಬಿ.ರಾಘವ ಮಾತನಾಡಿ, ಕಾರ್ಯಪ್ಪ ಕಾಲೇಜಿನ ಹಳೇ ವಿದ್ಯಾರ್ಥಿನಿಯಾಗಿರುವ ದೀಪಾ ಭಸ್ತಿ ಅವರ ಸಾಧನೆಯನ್ನು ಜಗತ್ತೇ ಮೆಚ್ಚಿಕೊಂಡಿದೆ, ಇದೊಂದು ಹೆಮ್ಮೆಯ ಕ್ಷಣ. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಅವರ ಹೆಸರಿನಲ್ಲಿ ರಾರಾಜಿಸುತ್ತಿರುವ ಕಾಲೇಜಿನ ಹಿರಿಮೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿಸಿದ್ದು, ಕಾಲೇಜಿಗೆ ಮತ್ತೊಂದು ಗರಿ ಬಂದತಾಗಿದೆ. ಮುಂದಿನ ದಿನಗಳಲ್ಲೂ ಸಾಹಿತ್ಯ ಕ್ಷೇತ್ರದಲ್ಲಿ ಮತ್ತಷ್ಟು ಸಾಧನೆ ಮಾಡುವಂತಾಗಲಿ ಎಂದು ಶುಭಹಾರೈಸಿದರು

.ದೀಪಾ ಭಸ್ತಿ ಸಾಧನೆಗೆ ಸಹಕಾರ ನೀಡಿದ ಪತಿ ಚೆಟ್ಟೀರ ನಾಣಯ್ಯ ಹಾಗೂ ಪೋಷಕರನ್ನು ಇದೇ ಸಂದರ್ಭ ಅಭಿನಂದಿಸಿದರು.ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ಬಾನುಮುಷ್ತಾಕ್ ಅವರ ‘ಹೃದಯ ದೀಪ’ ಕನ್ನಡ ಕೃತಿಯನ್ನು ಹಾರ್ಟ್ ಲ್ಯಾಂಪ್ ಎಂಬ ಆಂಗ್ಲ ಭಾಷಾ ಕೃತಿಗೆ ಅನುವಾದಿಸಿರುವುದು ಸುಲಭದ ಕಾರ್ಯವಲ್ಲ. ಕನ್ನಡ ಭಾಷಾ ಕೃತಿಯನ್ನು ಭಾಷಾ ಶ್ರೀಮಂತಿಕೆಗೆ ಚ್ಯುತಿ ಬಾರದಂತೆ ಆಂಗ್ಲಭಾಷೆಗೆ ಅನುವಾದಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತೆ ಮಾಡಿರುವುದು ಶ್ಲಾಘನೀಯ ಎಂದರು.

ಇದು ಕರ್ನಾಟಕ, ಕೊಡಗು ಮಾತ್ರವಲ್ಲದೆ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜ್ ಕೂಡ ಹೆಮ್ಮೆ ಪಡುವಂತಹ ಸಾಧನೆಯಾಗಿದೆ ಎಂದು ತಿಳಿಸಿದರು.ಉಪನ್ಯಾಸಕರಾದ ಪ್ರೊ.ಕೆ.ಪಿ.ನಾಗರಾಜು, ಪ್ರೊ.ಆರ್.ರಾಜೇಂದ್ರ, ಪ್ರೊ.ಗಾಯತ್ರಿದೇವಿ, ಡಾ.ಶೈಲಶ್ರೀ, ಡಾ.ಪ್ರದೀಪ್ ಬಂಡಾರಿ, ಬಿ.ಎಚ್.ತಳವಾರ, ಎಚ್.ಆರ್.ರಮೇಶ್, ಹಳೇ ವಿದ್ಯಾರ್ಥಿ ಸಂಘದ ಪ್ರಧಾನ ಕಾರ್ಯದರ್ಶಿ ಚಂದನ್ ನಂದರಬೆಟ್ಟು, ನಿರ್ದೇಶಕರಾದ ಎಸ್.ಆರ್.ವತ್ಸಲ, ಲೋಹಿತ್ ಮಾಗುಲುಮನೆ ಮತ್ತಿತರರು ಹಾಜರಿದ್ದರು.

PREV
Read more Articles on

Recommended Stories

ಸಾರಿಗೆ ನೌಕರರ ಜತೆ ಸರ್ಕಾರ ಸಂಧಾನ ವಿಫಲ
ಸುಹಾಸ್ ಶೆಟ್ಟಿ ಹ* ಕೇಸಲ್ಲಿ ಎನ್‌ಐಎನಿಂದ 18 ಕಡೆ ದಾಳಿ