29 ರಂದು ಬೂಕರ್ ಪ್ರಶಸ್ತಿ ವಿಜೇತೆ ದೀಪಾಭಾಸ್ತಿಗೆ ಅಭಿವಂದನಾ ಗೌರವ ಸಮಪ೯ಣೆ

KannadaprabhaNewsNetwork |  
Published : Jun 27, 2025, 12:49 AM IST
ಚಿತ್ರ : ದೀಪಾ | Kannada Prabha

ಸಾರಾಂಶ

ಅಂತಾರಾಷ್ಟ್ರೀಯ ಬೂಕರ್‌ ಪ್ರಶಸ್ತಿ ಪಡೆದ ಕೊಡಗಿನ ಹೆಮ್ಮೆಯ ಲೇಖಕಿ ದೀಪಾ ಭಾಸ್ತಿಯವರಿಗೆ ಭಾನುವಾರ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಸಾಹಿತ್ಯ ಲೋಕದ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಪಡೆದ ಕೊಡಗಿನ ಹೆಮ್ಮೆಯ ಲೇಖಕಿ ಮಡಿಕೇರಿಯ ದೀಪಾಭಾಸ್ತಿಯವರಿಗೆ ಕೊಡಗು ಪತ್ರಕರ್ತರ ಸಂಘದ ಆಶ್ರಯದಲ್ಲಿ ಜೂ. 29 ರಂದು ಭಾನುವಾರ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ.

ಜೂ. 29 ರಂದು ಭಾನುವಾರ ಸಂಜೆ 5 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಅಧ್ಯಕ್ಷತೆಯಲ್ಲಿ ಆಯೋಜಿತ ದೀಪಾ ಹೆಸರಿನ ಅಭಿನಂದನಾ ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಕ್ಷೇತ್ರ ಶಾಸಕರಾದ ಎ.ಎಸ್. ಪೊನ್ನಣ್ಣ ನೆರವೇರಿಸಲಿದ್ದಾರೆ.

ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾಕುಶಾಲಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷೆ ಕಲಾವತಿ, ಜಿಲ್ಲಾಧಿಕಾರಿ ವೆಂಕಟರಾಜಾ, ಹೆಚ್ಚುವರಿ ಜಿಲ್ಲಾದಿಕಾರಿ ಆರ್. ಐಶ್ವರ್ಯ, ಕೊಡವ ಸಾಹಿತ್ಯ ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ, ಅರೆಭಾಷಾ ಸಾಹಿತ್ಯ, ಸಂಸ್ಕೃತಿ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ಪಾಲ್ಗೊಳ್ಳಲಿದ್ದಾರೆ ಎಂದು ಅನಿಲ್ ಮಾಹಿತಿ ನೀಡಿದ್ದಾರೆ.

ಸಾಹಿತ್ಯ ಲೋಕದ ಪ್ರತಿಷ್ಠಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಹಾರ್ಟ್ ಲ್ಯಾಂಪ್ ಕೃತಿಗಾಗಿ ಪಡೆದ ದೀಪಾಭಾಸ್ತಿಯವರಿಗೆವಿವಿಧ ಸಂಘ ಸಂಸ್ಥೆಗಳಿಂದ ಸನ್ಮಾನ, ಗೌರವಾರ್ಪಣೆ ನೆರವೇರಲಿದೆ.

ಸನ್ಮಾನ ನೆರವೇರಿಸುವ ಸಂಘ ಸಂಸ್ಥೆಗಳ ವಿವರ :

ಮಡಿಕೇರಿ ನಗರಸಭೆ, ಮಡಿಕೇರಿ ವಕೀಲರ ಸಂಘ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರ, ಕೊಡಗು ವಿದ್ಯಾಲಯ ಮಡಿಕೇರಿ, ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ ಕೊಡಗು ಮಡಿಕೇರಿ, ಕೊಡವ ಸಮಾಜ ಮಡಿಕೇರಿ, ಕೊಡಗು ಗೌಡ ಸಮಾಜ, ಮಡಿಕೇರಿ, ಕೊಡಗು ಗೌಡ ಫೆಡರೇಷನ್, ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮಸ೯, ಕೊಡಗು ಹೋಟೇಲ್, ರೆಸಾರ್ಟ್‌ ಅಸೋಸಿಯೇಷನ್, ನಗರ ಚೇಂಬರ್ ಆಫ್ ಕಾಮರ್ಸ್‌, ಕೊಡಗು ಜಿಲ್ಲಾ ಹೋಂಸ್ಟೇ ಅಸೋಸಿಯೇಷನ್, ಜಿಲ್ಲಾ ಕಾಂಗ್ರೆಸ್ ಸಮಿತಿ, ಕೊಡಗು, - ಭಾರತೀಯ ಜನತಾ ಪಾರ್ಟಿ, ಕೊಡಗು, ಜಾತ್ಯಾತೀತ ಜನತಾ ದಳ , ಎಸ್.ಡಿ.ಪಿ.ಐ, ಪೊಮ್ಮಕ್ಕಡ ಕೂಟ ಮಡಿಕೇರಿ , ಪೊಮ್ಮಕ್ಕಡ ಕೂಟ ವಿರಾಜಪೇಟೆ, ಗೌಡ ಮಹಿಳಾ ಒಕ್ಕೂಟ, ಚೇರಂಬಾಣೆ, ಸಮರ್ಥ ಕನ್ನಡಿಗರು ಸಂಸ್ಥೆ, ಮಡಿಕೇರಿ ಕನ್ನಡ ಸಿರಿ ಸ್ನೇಹಬಳಗ, ಕುಶಾಲನಗರ, ಸಂಸ್ಕೃತಿ ಸಿರಿ ಬಳಗ ಟ್ರಸ್ಟ್, ಕೊಡಗು, ಆರೋಹಣ ಕೊಡಗು ತಂಡ ಮಡಿಕೇರಿ, ಕೊಡಗು ಕನ್ನಡ ಭವನ ಮತ್ತು ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಕೊಡಗು ಜಿಲ್ಲೆ, ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನಾ ಸಮಿತಿ, ಮಡಿಕೇರಿ, ಲಯನ್ಸ್ ಕ್ಲಬ್ ಮಡಿಕೇರಿ, ರೋಟರಿ ಮಡಿಕೇರಿ ಮಿಸ್ಟಿ ಹಿಲ್ಸ್, ರೋಟರಿ ಮಡಿಕೇರಿ ವುಡ್ಸ್ , ಇನ್ನರ್ ವೀಲ್ ಮಡಿಕೇರಿ, ರೆಡ್ ಕ್ರಾಸ್, ಕೊಡಗು ಘಟಕ, ಮಡಿಕೇರಿ, ಮಹದೇವಪೇಟೆ ಮಹಿಳಾ ಸಹಕಾರ ಸಂಘ, ಮಡಿಕೇರಿ, ಕೊಡಗು ಜಿಲ್ಲಾ ಕುಲಾಲ ಸಮಾಜ, ಹಿಂದೂ ಮಲಯಾಳಿ ಸಮಾಜ ಕೊಡಗು , ಕೊಡಗು ಬಿಲ್ಲವ ಸಮಾಜ ಮಡಿಕೇರಿ, ಕೊಡಗು ಜಿಲ್ಲಾ ಬಂಟರ ಸಂಘ, ಮಡಿಕೇರಿ, ಕೊಡಗು ಜಿಲ್ಲಾ ಮೊಗೇರ ಸಮಾಜ, ಮಡಿಕೇರಿ, ಭಾರತೀಯ ಮೆಡಿಕಲ್ ಅಸೋಸಿಯೇಷನ್, ಕೊಡಗು ಶಾಖೆ, ಕೊಡಗು ಜಿಲ್ಲಾ ಔಷಧಿ ವ್ಯಾಪಾರಸ್ಥರ ಸಂಘ , ಮಡಿಕೇರಿ, ಕೊಡಗು ದಲಿತ ಸಂಘರ್ಷ ಸಮಿತಿ, ಬ್ಯಾರಿ ವೆಲ್ಪೇರ್ ಟ್ರಸ್ಟ್ ಮಡಿಕೇರಿ, ಕೊಡಗು ಕ್ರೈಸ್ತರ ಸೇವಾ ಸಂಘ ಮಡಿಕೇರಿ, ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್, ಕೊಡಗು, ವೀರಶೈವ ಸಮಾಜ, ಮಡಿಕೇರಿ, ಕೊಡಗು ಜಿಲ್ಲಾ ಜಮಾತ್ ಎ ಇಸ್ಲಾಂ ಹಿಂದ್, ಸೇರಿದಂತೆ ಹಲವು ಸಂಸ್ಥೆಗಳು ಗೌರವ ಸಮರ್ಪಣೆಯಲ್ಲಿ ಪಾಲ್ಗೊಳ್ಳಲಿವೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಮಾಹಿತಿ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ