ಕನ್ನಡಪ್ರಭ ವಾರ್ತೆ ಪಾಂಡವಪುರ
ತಾಲೂಕಿನ ಹರಳಹಳ್ಳಿಯ ಅಂಕೇಗೌಡರ ಪುಸ್ತಕ ಮನೆಯಲ್ಲಿ ಶ್ರೀಶಂಭುಲಿಂಗೇಶ್ವರ ಶಿಕ್ಷಣ ಸಂಸ್ಥೆ ವತಿಯಿಂದ ಆಯೋಜಿಸಿದ್ದ ನಮ್ಮ ನಡೆ ಗ್ರಂಥಾಲಯದ ಕಡೆ ಕಾರ್‍ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಯುವ ಸಮುದಾಯ, ಮಕ್ಕಳಿಗೆ ಸಂಸ್ಕೃತ ಹಾಗೂ ಸಮಾಜದಲ್ಲಿ ಆರೋಗ್ಯಕರ ಮನಸ್ಸುಗಳು ಬೆಳೆಯಬೇಕಾದರೆ ಪುಸ್ತಕಗಳನ್ನು ಓದಬೇಕು ಎಂದು ಸಲಹೆ ನೀಡಿದರು.
ಪ್ರಸ್ತುತ ವಿದ್ಯಾರ್ಥಿಗಳು ಸೇರಿ ಎಲ್ಲರು ಹೆಚ್ಚಾಗಿ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳಂತು ತಮ್ಮ ಪ್ರಠ್ಯಕ್ರಮಕ್ಕೆ ಸಂಬಂಧಿಸಿದ ಪುಸ್ತಕಗಳನ್ನು ಬಿಟ್ಟರೆ ಅದರಿಂದಾಚೆಗೆ ಯಾವ ಪುಸ್ತಕಗಳನ್ನು ಓದುತ್ತಿಲ್ಲ. ಇದರಿಂದ ಮಕ್ಕಳಲ್ಲಿ ಪ್ರಾಪಂಚಿಕ ಜ್ಞಾನ ಕಡಿಮೆಯಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.ಪ್ರಾಪಂಚಿಕ ಜ್ಞಾನ ತಿಳಿಯಬೇಕಾದರೆ ಪುಸ್ತಕಗಳನ್ನು ಓದಬೇಕು ಎಂಬುದಾಗಿ ಅಂಬೇಡ್ಕರ್ ಅವರೇ ಹೇಳಿದ್ದಾರೆ. ಹೆಚ್ಚಾಗಿ ಪುಸ್ತಕ ಓದುವುದರಿಂದ ಜ್ಞಾನದ ಜತೆಗೆ ಸಂಸ್ಕಾರ, ಸಂಸ್ಕೃತಿ, ಸಂಬಂಧಗಳು ಸಹ ವೃದ್ದಿಸತ್ತವೆ ಎಂದರು.
ಮೈಸೂರು ವಿವಿ ಗ್ರಂಥಾಲಯದ ಹಿರಿಯ ಪ್ರಾಧ್ಯಾಪಕ ಡಾ.ಚಂದ್ರಶೇಖರ್ ಮಾತನಾಡಿ, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಗ್ರಂಥಾಲಯಗಳಿಗೆ ಹೋಗಿ ಪುಸ್ತಕಗಳನ್ನು ಓದುವ ಹವ್ಯಾಸ ಬೆಳೆಸಿಕೊಳ್ಳಬೇಕು. ಗ್ರಂಥಾಲಯಗಳಲ್ಲಿ ಎಲ್ಲಾ ರೀತಿಯ ಪುಸ್ತಕಗಳು ಇರುವುದರಿಂದ ಮಕ್ಕಳು ಸೇರಿದಂತೆ ಎಲ್ಲರ ಜ್ಞಾನ ಹೆಚ್ಚಾಗಲಿದೆ ಎಂದು ತಿಳಿಸಿದರು.
ಪುಸ್ತಕ ಪ್ರೇಮಿ ಅಂಕೇಗೌಡ ಮಾತನಾಡಿ, ವ್ಯಕಿತ್ವವನ್ನು ವಿಕಾಸನಗೊಳಿಸುವಂತಹ ಪ್ರಸ್ತಕಗಳನ್ನು ಆಯ್ಕೆ ಮಾಡಿಕೊಂಡು ಓದುವ ಹವ್ಯಾಸ ರೂಡಿಸಿಕೊಳ್ಳಬೇಕು ಎಂದರು.
ಪುಸ್ತಕಗಳಲ್ಲಿ ಹಲವಾರು ಜ್ಞಾನಿ, ವಿಜ್ಞಾನಿಗಳ ಜ್ಞಾನದ ಸಾರಾಂಸಗಳು ಅಡಗಿರುತ್ತವೆ. ಅಂತಕ ಉತ್ತಮ ಪುಸ್ತಕಗಳನ್ನು ಆಯ್ಕೆ ಮಾಡಿಕೊಂಡು ಓದಬೇಕು. ಸಾಹಿತ್ಯದ ಜತೆಗೆ ಹಳೇಗನ್ನಡ ಸಾಹಿತ್ಯಗಳನ್ನು ಅಧ್ಯಾಯನ ಮಾಡಬೇಕು ಎಂದರು.