ವಕೀಲರ ಮೇಲಿನ ಹಲ್ಲೆ ಖಂಡಿಸಿ ನ್ಯಾಯಾಲಯದ ಕಲಾಪ ಬಹಿಷ್ಕಾರ

KannadaprabhaNewsNetwork |  
Published : Nov 06, 2026, 02:30 AM IST
 | Kannada Prabha

ಸಾರಾಂಶ

ಬೆಂಗಳೂರು ವಕೀಲರ ಸಂಘದ ಕರೆಯ ಮೇರೆಗೆ ನ.3 ರಂದು ಕಾರವಾರ ಜಿಲ್ಲಾ ವಕೀಲರ ಸಂಘದ ಎಲ್ಲ ಸದಸ್ಯರು ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದು ಪ್ರತಿಭಟನೆಗೆ ಬೆಂಬಲ

ಕಾರವಾರ: ವಕೀಲರ ಮೇಲಿನ ಕೊಲೆ ಹಾಗೂ ಕೊಲೆ ಯತ್ನದ ಘಟನೆಗಳನ್ನು ಖಂಡಿಸಿ, ವಕೀಲರಿಗೆ ಸೂಕ್ತ ಭದ್ರತೆ ಒದಗಿಸುವುದರ ಜತೆಗೆ ರಾಜ್ಯದಲ್ಲಿ ಬಲಿಷ್ಠ ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೆ ತರಬೇಕೆಂದು ಆಗ್ರಹಿಸಿ ಕಾರವಾರ ಜಿಲ್ಲಾ ವಕೀಲರ ಸಂಘವು ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದೆ.

ಬೆಂಗಳೂರಿನ ವೈಟ್‌ಫೀಲ್ಡ್‌ನ ವಕೀಲ ಮಂಜುನಾಥ್ ಹಾಗೂ ಅನ್ನಪೂರ್ಣೇಶ್ವರಿ ನಗರದ ವಕೀಲ ಶ್ರೀರಾಮ್ ಅವರ ಬರ್ಬರ ಹತ್ಯೆ ಮತ್ತು ಗೌರಿಬಿದನೂರಿನ ವಕೀಲ ವೆಂಕಟರಮಣ ಸಣ್ಣಕ್ಕಿ ಅವರ ಕೊಲೆ ಯತ್ನದ ಘಟನೆಯನ್ನು ಸಂಘ ತೀವ್ರವಾಗಿ ಖಂಡಿಸಿದೆ. ವಕೀಲ ಸಮುದಾಯದ ಸದಸ್ಯರ ಮೇಲೆ ನಡೆಯುತ್ತಿರುವ ಇಂತಹ ದಾಳಿಗಳು ಕಾನೂನು ವೃತ್ತಿಯಲ್ಲಿ ತೊಡಗಿರುವವರಲ್ಲಿ ಅಭದ್ರತೆಯ ಭಾವನೆ ಮೂಡಿಸಿವೆ. ವೃತ್ತಿಪರ ಕರ್ತವ್ಯಗಳನ್ನು ನಿರ್ವಹಿಸುವಾಗ ವಕೀಲರಿಗೆ ಸೂಕ್ತ ರಕ್ಷಣೆ ಅಗತ್ಯವಿದೆ ಎಂದು ಸಂಘ ಮನವಿಯಲ್ಲಿ ತಿಳಿಸಿದೆ.

ಬೆಂಗಳೂರು ವಕೀಲರ ಸಂಘದ ಕರೆಯ ಮೇರೆಗೆ ನ.3 ರಂದು ಕಾರವಾರ ಜಿಲ್ಲಾ ವಕೀಲರ ಸಂಘದ ಎಲ್ಲ ಸದಸ್ಯರು ನ್ಯಾಯಾಲಯದ ಕಲಾಪಗಳಿಂದ ದೂರ ಉಳಿದು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ನಿರ್ಧಾರಕ್ಕೂ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕಾರವಾರ ಜಿಲ್ಲಾ ವಕೀಲರ ಸಂಘದ ಕಾರ್ಯದರ್ಶಿ ಎನ್.ಆರ್.ದೇಶಭಂಡಾರಿ, ಖಜಾಂಚಿ ಪದ್ಮಾ ಕೆ.ತಾಂಡೇಲ್ ಹಾಗೂ ಆಡಳಿತ ಮಂಡಳಿ ಸದಸ್ಯರಾದ ಸಿ.ಡಿ.ನಾಯ್ಕ, ರಾಜೇಶ್ ಜಿ.ಆಚಾರಿ, ಲಕ್ಷ್ಮಿ ಎಸ್.ರಾಣೆ, ದೀಪಾ ಎಸ್.ನಾಯ್ಕ, ಸುಮಿತಾ ಪಿ.ಭೂತೆ ಮತ್ತು ಮಾರುತಿ ಬಿ.ನಾಯ್ಕ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬರ ಪರಿಹಾರ ಡಬಲ್‌: ₹2500 ದಿಂದ ₹ 5000 ರು.ಗೆ ಹೆಚ್ಚಳ । ಮೊದಲ ಕಂತು ನಿನ್ನೆ ಬಿಡುಗಡೆ
ಸ್ಥಳೀಯ ಸಂಸ್ಥೆಗಳಿಗೆ ಬ್ಯಾಲೆಟ್‌ ಮೂಲಕವೇ ಚುನಾವಣೆ: ಖಂಡ್ರೆ