ವಕೀಲರಿಂದ ಕಲಾಪ ಬಹಿಷ್ಕಾರ: ಪ್ರತಿಭಟನೆ

KannadaprabhaNewsNetwork |  
Published : Nov 04, 2026, 01:45 AM IST
ಫೋಟೋ- ಹಾಸ್ಟೆಲ್‌ 1ಹಲ್ಲೆಗೊಳಗಾದ ಸುಮೀತ್‌, ಆನ ಬಂಧುಗಳು ಇಂದು ಕಲಬುರಗಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು. | Kannada Prabha

ಸಾರಾಂಶ

ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಕೀಲರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ವಕೀಲರು ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಉಡುಪಿ: ಬೆಂಗಳೂರಿನ ವೈಟ್‌ಫೀಲ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಕೀಲರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಹಾಗೂ ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ವಕೀಲರು ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಮಂಗಳವಾರ ಬೆಳಿಗ್ಗೆ ಕೋರ್ಟ್ ಕಲಾಪಗಳನ್ನು ಬಹಿಷ್ಕರಿಸಿದ ವಕೀಲರು, ನ್ಯಾಯಾಲಯದ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿ ವಕೀಲರ ಮೇಲಿನ ದೌರ್ಜನ್ಯವನ್ನು ತೀವ್ರವಾಗಿ ಖಂಡಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಹಿರಿಯ ನ್ಯಾಯವಾದಿ ಮಟ್ಟಾರು ರತ್ನಾಕರ ಹೆಗ್ಡೆ, ಕಕ್ಷಿದಾರರಿಗೆ ಸೂಕ್ತ ನ್ಯಾಯ ದೊರಕಿಸಿಕೊಡಲು ಪ್ರಾಮಾಣಿಕವಾಗಿ ಶ್ರಮಿಸುವ ವಕೀಲರ ಮೇಲೆಯೇ ಹಲ್ಲೆ ಹಾಗೂ ದೌರ್ಜನ್ಯ ನಡೆಯುತ್ತಿರುವುದು ಖಂಡನೀಯ. ಸಮಾಜದಲ್ಲಿ ನ್ಯಾಯ ವ್ಯವಸ್ಥೆಯ ಪ್ರಮುಖ ಭಾಗವಾಗಿರುವ ವಕೀಲರಿಗೆ ಸೂಕ್ತ ರಕ್ಷಣೆ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದು ಒತ್ತಾಯಿಸಿದರು. ನ್ಯಾಯವಾದಿ ಅಖಿಲ್ ಹೆಗ್ಡೆ ಮಾತನಾಡಿ, ವಕೀಲರ ರಕ್ಷಣೆಯ ವಿಷಯದಲ್ಲಿ ಸರ್ಕಾರ ನಿರ್ಲಕ್ಷ ವಹಿಸುತ್ತಿದೆ, ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ನ್ಯಾಯಕ್ಕಾಗಿ ಸರ್ಕಾರದ ಗಮನ ಸಳೆಯಲಾಗುವುದು, ಸರ್ಕಾರ ಸೂಕ್ತವಾಗಿ ಸ್ಪಂದಿಸದಿದ್ದಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿತ್ತೂರ ಚೆನ್ನಮ್ಮ, ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ
ಫೋಟೋಗಳನ್ನು ಆಧರಿಸಿ ಮಹಿಳೆಯ ಆದಾಯ ನಿರ್ಧರಿಸಲಾಗದು: ಕೋರ್ಟ್‌