ವಕೀಲರ ಮೇಲಿನ ಹಲ್ಲೆ ಖಂಡಿಸಿ ಕಲಾಪ ಬಹಿಷ್ಕಾರ

KannadaprabhaNewsNetwork |  
Published : Oct 30, 2026, 02:15 AM IST
ವಕೀಲರ ಮೇಲಿನ ಹಲ್ಲೆ ಖಂಡಿಸಿ ಹುಬ್ಬಳ್ಳಿಯ ಹೊಸೂರು ನ್ಯಾಯಾಲಯದ ಎದುರು ವಕೀಲರು ಕಲಾಪ ಬಹಿಷ್ಕರಿಸಿ, ಮಾನವ ಸರಪಳಿ ನಿರ್ಮಿಸಿ ಪ್ರತಿಭಟಿಸಿದರು. | Kannada Prabha

ಸಾರಾಂಶ

ಗೌರಿಬಿದನೂರಿನ ಹಿರಿಯ ವಕೀಲ ಸಣ್ಣಕ್ಕಿ ವೆಂಕಟರವಣಪ್ಪ ಅವರ ಮೇಲೆ ದುಷ್ಕರ್ಮಿಗಳು ನಡೆಸಿದ ಮಾರಣಾಂತಿಕ ಹಲ್ಲೆ ಖಂಡಿಸಿ ಹುಬ್ಬಳ್ಳಿ ವಕೀಲರ ಸಂಘದ ಸದಸ್ಯರು ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ಹುಬ್ಬಳ್ಳಿ:

ಗೌರಿಬಿದನೂರಿನ ಹಿರಿಯ ವಕೀಲ ಸಣ್ಣಕ್ಕಿ ವೆಂಕಟರವಣಪ್ಪ ಅವರ ಮೇಲೆ ದುಷ್ಕರ್ಮಿಗಳು ನಡೆಸಿದ ಮಾರಣಾಂತಿಕ ಹಲ್ಲೆ ಖಂಡಿಸಿ ಹುಬ್ಬಳ್ಳಿ ವಕೀಲರ ಸಂಘದ ಸದಸ್ಯರು ಗುರುವಾರ ನ್ಯಾಯಾಲಯದ ಕಲಾಪ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು.

ನಗರದ ಹೊಸೂರು ನ್ಯಾಯಾಲಯದ ಎದುರು ಮಾನವ ಸರಪಳಿ ನಿರ್ಮಿಸಿದ ವಕೀಲರು, ಹಲ್ಲೆ ಪ್ರಕರಣದ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಆರೋಪಿಗಳ ಬಂಧನಕ್ಕೆ ಆಗ್ರಹ:

ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳು ತಕ್ಷಣ ಕಾರ್ಯಪ್ರವೃತ್ತರಾಗಿ ಹಲ್ಲೆಯಲ್ಲಿ ಭಾಗಿಯಾದವರನ್ನು ಬಂಧಿಸಬೇಕು. ಹಲ್ಲೆಗೊಳಗಾದ ವಕೀಲರು ಹಾಗೂ ಅವರ ಕುಟುಂಬದವರಿಗೆ ಸೂಕ್ತ ರಕ್ಷಣೆ ಒದಗಿಸಬೇಕು ಎಂದು ಆಗ್ರಹಿಸಿದರು.

ಈ ವೇಳೆ ಹುಬ್ಬಳ್ಳಿ ವಕೀಲರ ಸಂಘದ ಅಧ್ಯಕ್ಷ ರಾಮಚಂದ್ರ ಜಿ. ಮಟ್ಟಿ, ಎಂ.ಎಂ. ಹಳ್ಳಿ, ಉಪಾಧ್ಯಕ್ಷ ದುಂಡರೆಡ್ಡಿ ಎಸ್.ವೈ, ಶಿವು ಅರಗಂಜಿ, ಪಿ.ಎಸ್. ನರೇಗಲ್, ಎಸ್.ಎಸ್. ನಾಗನಗೌಡರ, ಗುರು ಹಿರೇಮಠ, ಗುರು ಕೆಲಗೇರಿ, ಕೆ.ಬಿ. ಶಿವಕುಮಾರ, ಸಜ್ಜನಶೆಟ್ಟರ್, ಸವಿತಾ ಪಾಟೀಲ ಸೇರಿದಂತೆ ಹಿರಿಯ ಹಾಗೂ ಕಿರಿಯ ವಕೀಲರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೇಪ್‌ ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ
ಉತ್ತರ ಪಾಲಿಕೆಯಲ್ಲಿ 18 ಜಂಕ್ಷನ್‌ ಗುರುತು