ಗಣಪತಿ ಮೂರ್ತಿ ಮೇಲೆ ಉಗುಳಿದ ಬಾಲಕರು

KannadaprabhaNewsNetwork |  
Published : Sep 08, 2025, 01:00 AM IST
ಗಣಪತಿ ಮೆರವಣಿಗೆಯ ದೃಶ್ಯ | Kannada Prabha

ಸಾರಾಂಶ

ಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಇಬ್ಬರು ಬಾಲಕರು ಗಣಪತಿ ಮೂರ್ತಿಯ ಮೇಲೆ ಉಗುಳಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ ಭಾನುವಾರ ನಡೆದಿದ್ದು, ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

 ಸಾಗರ :  ಗಣಪತಿ ಮೂರ್ತಿಯ ವಿಸರ್ಜನಾ ಮೆರವಣಿಗೆ ವೇಳೆ ಅನ್ಯಕೋಮಿನ ಇಬ್ಬರು ಬಾಲಕರು ಗಣಪತಿ ಮೂರ್ತಿಯ ಮೇಲೆ ಉಗುಳಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ಪಟ್ಟಣದಲ್ಲಿ ಭಾನುವಾರ ನಡೆದಿದ್ದು, ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಾಗರದ ಅತಿಸೂಕ್ಷ್ಮ ಪ್ರದೇಶವಾದ ಜನ್ನತ್‌ಗಲ್ಲಿಯಲ್ಲಿ ಜೈಭುವನೇಶ್ವರಿ ಯುವಕ ಸಂಘವು ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿ ವಿಸರ್ಜನಾ ಮೆರವಣಿಗೆ ಭಾನುವಾರ ಬೆಳಗ್ಗೆ 12 ಗಂಟೆಗೆ ಆರಂಭವಾಯಿತು. ಮೆರವಣಿಗೆ ಸಂಜೆ 4ಗಂಟೆಗೆ ಮಾರ್ಕೆಟ್ ರಸ್ತೆಯಲ್ಲಿ ಸಾಗುತ್ತಿರುವಾಗ ಪಕ್ಕದ ಕಟ್ಟಡದ ಮೇಲೆ ನಿಂತಿದ್ದ ಅನ್ಯಕೋಮಿನ ಇಬ್ಬರು ಬಾಲಕರು ಗಣಪತಿ ಮೂರ್ತಿಯ ಮೇಲೆ ಉಗುಳಿದ್ದಾರೆ. ಇದನ್ನು ಮೆರವಣಿಗೆಯಲ್ಲಿದ್ದ ಭಕ್ತರು ಗಮನಿಸಿದ್ದು, ಕೆಲಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿ ಮೆರವಣಿಗೆ ನಿಲ್ಲಿಸಲಾಗಿತ್ತು. ಆಗ ಸ್ಥಳಕ್ಕೆ ಆಗಮಿಸಿದ ಎಎಸ್ಪಿ ಡಾ.ಬೆನಕಪ್ರಸಾದ್ ಅವರು, ಬಾಲಕರ ಮೇಲೆ ಕಾನೂನುಕ್ರಮ ತೆಗೆದುಕೊಳ್ಳುತ್ತೇವೆಂದು ಭರವಸೆ ನೀಡಿದ ಬಳಿಕ ಮೆರವಣಿಗೆ ಮುಂದುವರೆಯಿತು. ಈ ಕುರಿತು ಸಾಗರ ನಗರ ಪೊಲೀಸ್‌ ಠಾಣೆಯಲ್ಲಿ ಕೇಸ್‌ ದಾಖಲಾಗಿದೆ.

ಈ ಘಟನೆಗೆ ಸಂಬಂಧಿಸಿದಂತೆ ಬಾಲಕರ ತಾಯಿ ಖೈರುನ್ನೀಸಾ ಅವರು, ಹಿಂದೂ ಧರ್ಮದವರಿಗೆ ಕ್ಷಮೆಯಾಚಿಸುತ್ತೇನೆ. ನಮ್ಮ ಮಕ್ಕಳು ಈ ರೀತಿ ಮಾಡಬಾರದಾಗಿತ್ತು. ಗಣಪತಿ ಮೇಲೆ ಉಗಳಿದ್ದು ನನಗೆ ಬೇಜಾರಾಗಿದೆ. ಈ ರೀತಿ ಮಾಡದಂತೆ ಮಕ್ಕಳಿಗೆ ಬುದ್ಧಿ ಮಾತು ಹೇಳುತ್ತೇನೆ ಎಂದು ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಹರಿಹರ ಪ್ರಮುಖ ರಸ್ತೆಗಳಲ್ಲಿ ಬೀದಿದೀಪ, ಸಿಸಿ ಕ್ಯಾಮೆರಾ ಅಳವಡಿಸಿ
ಪ್ರೀತಿಸುವಂತೆ ಪೊಲೀಸ್‌ ಇನ್‌ಸ್ಪೆಕ್ಟರ್‌ಬೆನ್ನತ್ತಿದ್ದ ಮಹಿಳೆ ಈಗ ಜೈಲು ಪಾಲು